ದರ್ಶನ್, ಪವಿತ್ರ ಗೌಡ ಕೂಡ ನನ್ನ ಮಗನ ರೀತಿಯೇ ಸಾಯಬೇಕು: ದರ್ಶನ್ ಗ್ಯಾಂಗ್ ವಿರುದ್ಧ ರೇಣುಕಾಸ್ವಾಮಿ ಪೋಷಕರ ಆಕ್ರೋಶ!

ದರ್ಶನ್ & ಪವಿತ್ರಾ ಗೌಡ ವಿರುದ್ಧ ಕೇಳಿಬಂದ ಕೊಲೆ ಆರೋಪ ಈಗ ಭಾರಿ ಸಂಚಲನ ಕೂಡ ಸೃಷ್ಟಿ ಮಾಡಿದೆ. ಈವರೆಗೆ ಇತಿಹಾಸದಲ್ಲೇ ಯಾವುದೇ ದೊಡ್ಡ ಸಿನಿಮಾ ನಟ, ದರ್ಶನ್ ಅವರ ರೀತಿ ಕೊಲೆ ಆರೋಪ ಎದುರಿಸಿರಲಿಲ್ಲ ಎನ್ನಬಹುದು. ಆದ್ರೆ ಇದೀಗ ನಟ ದರ್ಶನ್ ವಿರುದ್ಧ ಕೇಳಿ ಬಂದಿರುವ ಭೀಕರ ಕೊಲೆ ಆರೋಪ ಕ್ಷಣಕ್ಕೊಂದು ತಿರುವು ಪಡೆಯುತ್ತಿದೆ. ಹಾಗೇ ಕೊಲೆ ಆಗಿರುವ ರೇಣುಕಾಸ್ವಾಮಿ ಪೋಷಕರು ಏನು ಹೇಳುತ್ತಿದ್ದಾರೆ ಗೊತ್ತಾ? ಮುಂದೆ ಓದಿ.

ಕೊಲೆ ಆರೋಪಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ದರ್ಶನ್ & ಪವಿತ್ರ ಗೌಡ ಜಗಳ ದೊಡ್ಡ ಸದ್ದು ಮಾಡಿತ್ತು. ದರ್ಶನ್ ಹಾಗು ಪವಿತ್ರಾ ಗೌಡ ನಡುವೆ ಆತ್ಮೀಯತೆ ಇದ್ದ ಕಾರಣ ಈ ರೀತಿ ಜಗಳ ಆಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಹೀಗೆ ಕೆಲವು ತಿಂಗಳ ಹಿಂದಷ್ಟೆ ಜಗಳ ಶುರುವಾದಾಗ ಈಗ ಕೊಲೆ ಆಗಿರುವ ರೇಣುಕಾಸ್ವಾಮಿ ಅವ್ರು, ಪವಿತ್ರ ಗೌಡಳ ಬಗ್ಗೆ ಕೆಟ್ಟದಾಗಿ ಕಮೆಂಟ್‌ಗಳನ್ನ ಮಾಡಿ ಪೋಸ್ಟ್ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಅದೇ ರೇಣುಕಾಸ್ವಾಮಿ ಕೊಲೆ ಆಗಿದ್ದು, ಖುದ್ದಾಗಿ ನಟ ದರ್ಶನ್ ಈ ಕೊಲೆ ಮಾಡಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಹಾಗಾದ್ರೆ ಈ ಘಟನೆ ಬಗ್ಗೆ ಮೃತ ರೇಣುಕಾಸ್ವಾಮಿ ಅವರ ಅಪ್ಪ & ಅಮ್ಮ ಏನು ಹೇಳಿದ್ರು? ಮುಂದೆ ಓದಿ.

Darshan Thoogudeepa Is Facing More Problems

'ದರ್ಶನ್‌ಗೆ ಸಾವಿನ ಶಿಕ್ಷೆ ಕೊಡಿ'

ದರ್ಶನ್ & ಪವಿತ್ರ ಗೌಡ ಅವರಿಂದಲೇ ನನ್ನ ಮಗನ ಸಾವು ಆಗಿದೆ, ಹೀಗಾಗಿ ನನ್ನ ಮಗನಂತೆ ದರ್ಶನ್ & ಪವಿತ್ರ ಗೌಡ ಕೂಡ ಸಾಯಬೇಕು ಎಂದಿದ್ದಾರೆ ಮೃತ ರೇಣುಕಾಸ್ವಾಮಿ ಪೋಷಕರು. ನಿನ್ನೆ ಪೂರ್ತಿ ಬಿಕ್ಕಿ, ಬಿಕ್ಕಿ ಅತ್ತಿರುವ ರೇಣುಕಾಸ್ವಾಮಿ ಅವರ ಪೋಷಕರು & ಪತ್ನಿ, ದರ್ಶನ್‌ನ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕುತ್ತಿದ್ದು. ಅದ್ರಲ್ಲೂ ಯಾವ ರೀತಿ ನನ್ನ ಮಗ ರೇಣುಕಾಸ್ವಾಮಿ ಹತ್ಯೆ ಮಾಡಲಾಗಿದೆಯೋ, ಅದೇ ರೀತಿ ದರ್ಶನ್‌ಗೆ ಕೂಡ ಶಿಕ್ಷೆ ಕೊಡಿ. ಹಾಗೇ ಪವಿತ್ರಾ ಗೌಡಗೆ ಕೂಡ ಇದೇ ರೀತಿ ಕಠಿಣ ಶಿಕ್ಷೆ ನೀಡಬೇಕು ಅಂತಿದ್ದಾರೆ ರೇಣುಕಾಸ್ವಾಮಿ ಅವರ ಅಪ್ಪ & ಅಮ್ಮ.

3 ತಿಂಗಳ ಕಾಲ ಜೈಲು ಗ್ಯಾರಂಟಿ?

ನಟ ದರ್ಶನ್ ವಿರುದ್ಧ ಇದೀಗ ಕೇಳಿಬಂದಿರುವುದು ಕೊಲೆ ಆರೋಪ ಆಗಿದೆ. ಈ ಕಾರಣಕ್ಕೆ ದರ್ಶನ್ ಸುಲಭವಾಗಿ ಜಾಮೀನು ಪಡೆಯುವುದು ಅಸಾಧ್ಯ. ಮತ್ತೊಂದ್ಕಡೆ ಈಗ ಜಾಮೀನಿಗೆ ಪ್ರಯತ್ನ ಶುರು ಮಾಡಿದರೂ ಮುಂದಿನ 3 ತಿಂಗಳ ಕಾಲ ಜಾಮೀನು ಸಿಗುವುದೇ ಅನುಮಾನ ಅಂತಿದ್ದಾರೆ ಕಾನೂನು ತಜ್ಞರು. ಹೀಗಾಗಿ ದೊಡ್ಡ ಸಂಚಲನ ಸೃಷ್ಟಿ ಆಗಿದೆ. ಮತ್ತೊಂದು ಕಡೆ, ದರ್ಶನ್ ಅವರು ಪರಪ್ಪನ ಅಗ್ರಹಾರದಲ್ಲಿ ಮುದ್ದೆ ಮುರಿಯುವುದು ಕೂಡ ಬಹುತೇಕ ಪಕ್ಕಾ ಅಂತಿದ್ದಾರೆ ಅವರ ವಿರೋಧಿಗಳು ಈ ನಡುವೆ ಮೃತ ರೇಣುಕಾಸ್ವಾಮಿ ಅವರ ಅಪ್ಪ & ಅಮ್ಮ, ಪತ್ನಿ ಚಿಂತೆಯಲ್ಲಿ ಮುಳುಗಿದ್ದಾರೆ. ಹಾಗೇ ರೇಣುಕಾಸ್ವಾಮಿ ಅವರ ಪತ್ನಿ ಈಗ ಗರ್ಭಿಣಿ ಆಗಿದ್ದಾರೆ.

ದರ್ಶನ್ & ಗ್ಯಾಂಗ್‌ಗೆ ಅನ್ನ-ಸಾರು!

ಪ್ರತಿದಿನ ಎಣ್ಣೆ ಹೊಡೆದು, ಸಖತ್ ಎಂಜಾಯ್ ಮಾಡುತ್ತಾ ಮಾಂಸ ತಿನ್ನುತ್ತಿದ್ದ ನಟ ದರ್ಶನ್ & ಗ್ಯಾಂಗ್ ಈಗ ಅನ್ನ ಸಾರು ತಿಂದು ಮಲಗುವ ಪರಿಸ್ಥಿತಿ ಬಂದಿದೆ. ಪೊಲೀಸರು ಆರೋಪಿಗಳ ತಂಡಕ್ಕೆ ಅನ್ನ ಸಾರು ನೀಡಿ, ಚಾಪೆ ಕೊಟ್ಟು ಮಲಗಿಸಿದ್ದಾರೆ. ಈ ಮೂಲಕ ಕೊಲೆ ಆರೋಪದ ಹಿನ್ನೆಲೆ ಕಂಬಿ ಹಿಂದೆ ಬಿದ್ದಿರುವ, ಸೋ ಕಾಲ್ಡ್ ಡಿ-ಬಾಸ್ ಇದೀಗ ಹಿಂಸೆ ಅನುಭವಿಸುತ್ತಿದ್ದಾರೆ. ಇದೇ ರೀತಿ ಮುಂದಿನ ದಿನಗಳಲ್ಲಿ ಮತ್ತಷ್ಟು ಸಂಕಷ್ಟ ದರ್ಶನ್ ಅವರ ಬೆನ್ನುಹತ್ತುವ ಅಪಾಯ ಕಾಡುತ್ತಿದ್ದು, ಏನಾಗುತ್ತೆ ಅನ್ನೋದನ್ನ ಕಾದು ನೋಡಬೇಕಿದೆ. ಮತ್ತೊಂದು ಕಡೆ ತೂಗುದೀಪ ದರ್ಶನ್ ಅವರ ಅಭಿಮಾನಿಗಳು ಸೈಲೆಂಟ್ ಆಗುತ್ತಿದ್ದಾರೆ.

ಪತ್ರಕರ್ತರ ತೀವ್ರ ಆಕ್ರೋಶ!

ಪೊಲೀಸ್ ಅಧಿಕಾರಿಗಳ ವರ್ತನೆಯಿಂದ ಮಾಧ್ಯಮ ಸಿಬ್ಬಂದಿ ಆಕ್ರೋಗೊಂಡಿದ್ದಾರೆ ಎಂಬ ಆರೋಪಗಳ ಬೆನ್ನಲ್ಲೇ, ದರ್ಶನ್ ಅಭಿಮಾನಿ ಮಾಧ್ಯಮಗಳ ಎದುರಿಗೆ ಬಂದು ಮಾಧ್ಯಮಗಳ ಕುರಿತು ತುಂಬ ಕೀಳಾಗಿ ಮಾತನಾಡಿದ್ದಾರೆ ಎಂದು ಆರೋಪ ಮಾಡಲಾಗಿದೆ. ಈ ವೇಳೆ ಅಲ್ಲಿದ್ದ ಮಾಧ್ಯಮ ಸಿಬ್ಬಂದಿ ದಿಢೀರ್ ರೊಚ್ಚಿಗೆದ್ದಿದ್ದು ಆತನ ಮುಖಚರಿ ಸೆರೆಹಿಡಿಯಲು ಹೋಗಿದ್ದಾರೆ. ಈ ವೇಳೆ ಹೆದರಿದ ದರ್ಶನ್ ಅಭಿಮಾನಿ, ಆ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಇಷ್ಟಾದರೂ ಮಾಧ್ಯಮಗಳ ಸಿಬ್ಬಂದಿ ಆತನ ಹಿಂದೆ ಓಡಿದ್ದಾರೆ. ಆಗ ತಕ್ಷಣ ಪೊಲೀಸರು ಆತನನ್ನ ಪೊಲೀಸ್ ಠಾಣೆ ಒಳಗೆ ಕರೆದುಕೊಂಡು ಹೋಗಿದ್ದಾರೆ. ಹಾಗೇ ಆತನಿಗೆ ಅವರದ್ದೇ ಭಾಷೆಯಲ್ಲಿ ಬುದ್ಧಿ ಹೇಳಿ, ರುಚಿ ತೋರಿಸಿದ್ದಾರೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+