ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ದರ್ಶನ್‌ ಹೇಳಿದ್ದೆಲ್ಲಾ ಸುಳ್ಳಾ? ಆತನ ಹತ್ತಿರದವರು ಏನಂದ್ರು? ಇಲ್ಲಿವೆ ಸಾಕ್ಷಿಗಳು

ದರ್ಶನ್ ಕೊಲೆ ಆರೋಪಿ ಆಗಿ ಇದೀಗ ಪೊಲೀಸರ ಎದುರು ಮಂಡಿಯೂರಿ ಕೂತ್ತಿದ್ದಾನೆ. ಹೀಗೆ ದರ್ಶನ್ ಜೈಲು ಸೇರಿದ ನಂತರ ಅವನ ಅಭಿಮಾನಿಗಳು ರೊಚ್ಚಿಗೆದ್ದು, ಮೀಡಿಯಾ & ಪೊಲೀಸ್ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ. ಹೀಗಿದ್ದಾಗಲೇ ನಟ ದರ್ಶನ್ ಹೇಗೆಲ್ಲಾ ಕಷ್ಟಪಟ್ಟು ಮೇಲೆ ಬಂದೆ ಅಂತಾ ಹೇಳುತ್ತಾ ಇರುವುದು ಸುಳ್ಳು, ದರ್ಶನ್ ಅಷ್ಟು ಕಷ್ಟಪಟ್ಟಿಲ್ಲ. ಅವನು ಲೈಟ್‌ಬಾಯ್ ಆಗಿ ಕೆಲಸ ಮಾಡೇ ಇಲ್ಲ ಅಂತಾ ದರ್ಶನ್ ಆಪ್ತರು ಹೇಳಿದ್ದಾರೆ.

ದರ್ಶನ್ ಈಗ ಒಂದು ಸಿನಿಮಾಗೆ 20 ರಿಂದ 22 ಕೋಟಿ ರೂಪಾಯಿ ಪಡೆಯುತ್ತಾರೆ ಎಂಬ ಮಾತು ಸೋಷಿಯಲ್ ಮೀಡಿಯಾ & ಗಾಂಧಿನಗರದ ಗಲ್ಲಿಗಳಲ್ಲಿ ಕೇಳಿಬರುತ್ತದೆ. ಆದರೆ ಈ ಕುರಿತು ನಟ ದರ್ಶನ್ ಆಗಲಿ ಅಥವಾ ಅವರ ಕಡೆಯವರೇ ಆಗಲಿ ಈವರೆಗೂ ಯಾವುದೇ ರೀತಿಯ ಅಧಿಕೃತ ಹೇಳಿಕೆ ನೀಡಿಲ್ಲ. ಹೀಗಿದ್ದಾಗ ತಾನು ಸಿನಿಮಾ ಇಂಡಸ್ಟ್ರಿಗೆ ಬರುವ ಮೊದಲು ತುಂಬಾ ಕಷ್ಟಗಳ ಎದುರಿಸಿದ್ದೀನಿ ಅಂತಾರೆ ದರ್ಶನ್. ಅದರಲ್ಲೂ ಲೈಟ್ ಬಾಯ್ ಆಗಿ ನಾನು ಇಂಡಸ್ಟ್ರಿಗೆ ಎಂಟ್ರಿ ಕೊಟ್ಟಿದ್ದೆ ಅಂತಾರೆ ದರ್ಶನ್. ಆದರೆ ಅಸಲಿ ಕಹಾನಿ ಏನು ಗೊತ್ತಾ? ದರ್ಶನ್ ಆಪ್ತ ವ್ಯಕ್ತಿಗಳ ಪ್ರಕಾರ ದರ್ಶನ್ ಲೈಟ್ ಬಾಯ್ ಕೆಲಸ ಮಾಡೇ ಇಲ್ಲವಂತೆ!

Darshan Thoogudeepa Is Now On Trend For His Speech In Weekend With Ramesh Program

ದರ್ಶನ್ ಹೇಳಿದ್ದೆಲ್ಲಾ ಹಸಿ ಹಸಿ ಸುಳ್ಳು?

ಅಂದಹಾಗೆ ಈ ಬಗ್ಗೆ ಬರೆದುಕೊಂಡಿರುವ ಪ್ರಕಾಶ್ ರಾಜ್ ಮೆಹು ಅವರು, 'ನಾನು "ಜನುಮದ ಜೋಡಿ" ಚಿತ್ರದ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೆ, ದರ್ಶನ್ ಅದೇ ಸಿನಿಮಾದಲ್ಲಿ ಛಾಯಾಗ್ರಹಕರಾದ ಬಿ ಸಿ ಗೌರಿಶಂಕರ್ ಅವರ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. (ಎಲ್ಲಾ ಕಡೆ ನಾನು ಲೈಟ್ ಬಾಯ್ ಆಗಿ ಕೆಲಸ ಮಾಡುತ್ತಿದ್ದೆ, ಲೈಟ್‌ಗಳನ್ನು ಎತ್ತುತ್ತಿದ್ದೆ ಅಂತ ಹೇಳಿಕೊಳ್ಳುತ್ತಾರೆ ಅದು ಸುಳ್ಳು, ಕ್ಯಾಮೆರಾಮೆನ್ ಅಸ್ಟೆಂಟ್ ಬೇರೆ! ಲೈಟ್ ಬಾಯ್ಸ್ ಬೇರೆ)' ಎಂದು ದರ್ಶನ್ ಸುಳ್ಳು ಹೇಳುತ್ತಾರೆ, ಅವರು ತುಂಬಾ ಕಷ್ಟಪಟ್ಟು ಸಿನಿಮಾ ರಂಗಕ್ಕೆ ಬಂದಿಲ್ಲ ಅಂತಾ ಹೇಳಿದ್ದಾರೆ ಕೊಲೆ ಆರೋಪಿ ದರ್ಶನ್‌ರ ಒಂದು ಕಾಲದ ಆಪ್ತ ಪ್ರಕಾಶ್ ರಾಜ್ ಮೆಹು ಅವರು.

ಕ್ಷುಲ್ಲಕ ಕಾರಣಕ್ಕೆ ದೋಸ್ತಿ ಢಮಾರ್?

ದರ್ಶನ್‌ಗೆ ಎಷ್ಟು ಮುಂಗೋಪ ಅಂದ್ರೆ ಮಾತು ಎತ್ತಿದರೆ ಸಾಕು ಕೈ ಮಾಡಲು ಬರುತ್ತಾರೆ ಎಂಬ ಆರೋಪ ಇದೆ. ಅದರಲ್ಲೂ ಗಾಂಧಿ ನಗರದಲ್ಲಿ ಇದೇ ರೀತಿ ಹಲವರ ಮೇಲೆ ನಟ ದರ್ಶನ್ & ಗ್ಯಾಂಗ್ ಹಲ್ಲೆ ಮಾಡಿರುವ ಆರೋಪ ಇದೆ. ಹೀಗಿದ್ದಾಗ ಕಿಚ್ಚ ಸುದೀಪ್ ಜೊತೆಗಿನ ದೋಸ್ತಿಯ ಕಡಿದುಕೊಳ್ಳಲು ದರ್ಶನ್‌ಗೆ ಇದ್ದ ಮುಂಗೋಪವೇ ಕಾರಣ ಎಂಬ ಆರೋಪ ಇದೆ. ಅದು ಹೇಗೆ ಗೊತ್ತಾ?

ಅಷ್ಟಕ್ಕೂ ಈ ಮಾತು ಹೇಳುತ್ತಿರುವುದು ಸ್ವತಃ ದರ್ಶನ್ & ಸುದೀಪ್ ಆಪ್ತರು ಯಾಕಂದ್ರೆ ಸಂದರ್ಶನ ಒಂದರಲ್ಲಿ ಇದೇ ದರ್ಶನ್ ಬಗ್ಗೆ ಸುದೀಪ್ ಅವರು ಮಾತನಾಡಿದ್ದರು. ಒಂದೇ ಒಂದು ಮಾತಿಗೆ ದರ್ಶನ್ ಆಕ್ರೋಶ ಹೊರಹಾಕಿ ನನ್ನ & ಸುದೀಪ್ ನಡುವೆ ಸ್ನೇಹ ಇಲ್ಲ ಅಂತಾ ಟ್ವೀಟ್ ಮಾಡೇ ಬಿಟ್ಟರು. ಅಲ್ಲದೆ ಹಲವು ವೇದಿಕೆಗಳಲ್ಲಿ ಇಬ್ಬರೂ ಒಂದೇ ಕಡೆ ಸಿಕ್ಕರೂ ಮುಖ ನೋಡದೆಯೇ ನಿಂತರು. ಈ ಮೂಲಕ ದಶಕಗಳ ಹಳೆಯ ದೋಸ್ತಿಗೆ ನೀರು ಬಿಟ್ಟರು!

7 ವರ್ಷದಿಂದ ಫುಲ್ ಫೈಟ್!

ಹೀಗೆ ದರ್ಶನ್ ಸುದೀಪ್ ವಿರುದ್ಧ ಟ್ವೀಟ್ ಮಾಡಿದ್ದು ದೊಡ್ಡ ಕಿಚ್ಚು ಹೊತ್ತಿಸಿತ್ತು, ಆ ನಂತರ ಕಿಚ್ಚ ಸುದೀಪ್ ಯಾವುದೇ ರೀತಿ ಪ್ರತಿಕ್ರಿಯೆ ನೀಡದೆ ಸುಮ್ಮನಾದರು. ಇಬ್ಬರ ನಡುವೆ ಹೊತ್ತಿದ್ದ ಕಿಚ್ಚು ಹಾಗೆಯೇ ಉಳಿದುಬಿಟ್ಟಿದೆ. ಸುಮಾರು 7 ವರ್ಷದಿಂದ ಇಬ್ಬರ ನಡುವೆ ಮುನಿಸು ಇದ್ದು, ಇಬ್ಬರೂ ಒಂದಾಗಲಿ ಅಂತಾ ಅಭಿಮಾನಿಗಳು ಕಾಯುತ್ತಿದ್ದರು. ಆದರೆ ಇದೀಗ ಕೊಲೆ ಆರೋಪ ಹೊತ್ತಿರುವ ದರ್ಶನ್ ವಿರುದ್ಧ ಪರೋಕ್ಷವಾಗಿ ಕುಟುಕಿದ್ದಾರೆ ನಟ ಸುದೀಪ್ ಅವರು. ಅಲ್ಲದೆ ಈ ಕೇಸ್‌ನಲ್ಲಿ ನ್ಯಾಯ ಸಿಗಬೇಕು ಅಂತಿದ್ದಾರೆ ಕಿಚ್ಚ ಸುದೀಪ್ ಅವರು.

ಪೊಲೀಸರಿಂದ ದರ್ಶನ್‌ಗೆ ಕ್ಲಾಸ್!

ಏನೇ ಕೇಳಿದರೂ ನನಗೆ ಗೊತ್ತೇ ಇಲ್ಲ ನನಗೆ ಗೊತ್ತೇ ಇಲ್ಲ ಅಂತಿದ್ದಾನೆ. ಆದರೆ ದರ್ಶನ್ ಸೊಕ್ಕು, ಅಹಂಕರಾದ ಮಾತು ಕರಗಿಸಿರುವ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಶುರು ಮಾಡಿದ್ದಾರೆ ಎನ್ನಲಾಗಿದೆ. ಆದರೆ ಪೊಲೀಸರ ಸಿಟ್ಟು ನೋಡಿ ದರ್ಶನ್ ಬೆಚ್ಚಿಬಿದ್ದು, ಈಗ ಪೊಲೀಸರ ಕಾಲು ಹಿಡಿಯಲು ಹೋದ ಘಟನೆ ವರದಿ ಆಗಿದೆ. 'ಸರ್ ನನ್ನದು ತಪ್ಪಾಯ್ತು, ಸರ್ ನನ್ನ ಬಿಟ್ಟುಬಿಡಿ' ಅಂತಾ ನಟ ದರ್ಶನ್ ನೇರವಾಗಿ ಪೊಲೀಸರ ಕಾಲು ಹಿಡಿಯಲು ಹೋಗಿದ್ದಾನಂತೆ!

ನಟ ಚಿಕ್ಕಣ್ಣಗೆ ಪೊಲೀಸರ ನೋಟಿಸ್!

ದರ್ಶನ್ ಸಹವಾಸ ಮಾಡಿದ್ದಕ್ಕೆ ನೂರಾರು ಜನ ಸಮಸ್ಯೆಗೆ ಸಿಲುಕಿದ್ದಾರೆ, ಅದರಲ್ಲೂ ಈಗ ತಾನೆ ಹೀರೋ ಆಗಿ ಜೀವನ ಕಟ್ಟಿಕೊಳ್ಳುತ್ತಿದ್ದ ನಟ ಚಿಕ್ಕಣ್ಣ ಕೂಡ ಮಾಜಿ ಡಿ-ಬಾಸ್ ಸಹವಾಸದಿಂದ ಪೊಲೀಸ್ ಠಾಣೆಗೆ ಹೋಗುವಂತಾಗಿದೆ. ಇಲ್ಲಿ ಆಗಿದ್ದು ಏನು ಅಂದ್ರೆ, ಜೂನ್‌ 8 ರಂದು ರೇಣುಕಾ ಸ್ವಾಮಿ ಮೇಲೆ ಹಲ್ಲೆ & ಕೊಲೆ ನಡೆಸುವ ಮೊದಲು ದರ್ಶನ್‌ & ಗ್ಯಾಂಗ್ ಆರೋಪಿ ವಿನಯ್‌ಗೆ ಸೇರಿದ ಸ್ಟೋನಿ ಬ್ರೂಕ್ ಎಂಬ ಖಾಸಗಿ ಹೋಟೆಲ್‌ನಲ್ಲಿ ಪಾರ್ಟಿ ಮಾಡಿದ್ದರಂತೆ. ಇದೇ ಪಾರ್ಟಿಯಲ್ಲಿ ನಟ ಚಿಕ್ಕಣ್ಣ ಕೂಡ ಭಾಗವಹಿಸಿದ್ರು ಎನ್ನಲಾಗಿದೆ. ಹೀಗಾಗಿ ಪೊಲೀಸರು ತನಿಖೆಯನ್ನ ನಡೆಸಿ ಈ ವಿಚಾರ ಕನ್ಫರ್ಮ್ ಮಾಡಿಕೊಂಡಿದ್ದು, ಇದೀಗ ನಟ ಚಿಕ್ಕಣ್ಣಗೆ ವಿಚಾರಣೆ ಬಾ ಎಂದು ನೋಟಿಸ್ ಕೂಡ ನೀಡಿದ್ದಾರೆ.

ನಟ ಚಿಕ್ಕಣ್ಣ ಕೂಡ ಅರೆಸ್ಟ್?

ಹೌದು, ಇದೀಗ ದರ್ಶನ್ ಅರೆಸ್ಟ್ ಆದ ನಂತರ ನಟ ಚಿಕ್ಕಣ್ಣ ಕೂಡ ಅರೆಸ್ಟ್ ಆಗುತ್ತಾರಾ? ಎಂಬ ಪ್ರಶ್ನೆ ಕಾಡತೊಡಗಿದೆ. ಅಷ್ಟಕ್ಕೂ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಕ್ಷಣವೇ ವಿಚಾರಣೆಗೆ ಹಾಜರಾಗಲು ಬೆಂಗಳೂರು ಪಶ್ಚಿಮ ವಿಭಾಗದ ಪೊಲೀಸರು ಇಂದು ಬೆಳಗ್ಗೆ ಚಿಕ್ಕಣ್ಣನಿಗೆ ನೋಟಿಸ್‌ ನೀಡಿದ್ದು ತಕ್ಷಣ ಕಾಮಾಕ್ಷಿಪಾಳ್ಯ ಠಾಣೆಗೆ ಹಾಜರಾಗಲು ಸೂಚನೆ ಕೂಡ ನೀಡಿದ್ದಾರಂತೆ. ಹೀಗಾಗಿ ಚಿಕ್ಕಣ್ಣ ವಿಚಾರಣೆಗೆ ಓಡೋಡಿ ಬರುವ ಸಾಧ್ಯತೆ ಇದೆ.

ಆದರೆ ಸದ್ಯಕ್ಕೆ ನಟ ಚಿಕ್ಕಣ್ಣ ಅರೆಸ್ಟ್ ಆಗುವುದಿಲ್ಲ, ಆದರೆ ಪಾರ್ಟಿ ಮಾಡುವ ಸಮಯದಲ್ಲಿ. ಈ ಕೊಲೆ ಸಂಬಂಧಿಸಿದ ವಿಚಾರ ಪ್ರಸ್ತಾಪ ಆಗಿತ್ತಾ? ನಟ ದರ್ಶನ್ ರೇಣುಕಾಸ್ವಾಮಿ ಕೊಲೆಯ ಬಗ್ಗೆ ಏನಾದ್ರೂ ಹೇಳಿದ್ದರಾ? ಎಂಬ ಬಗ್ಗೆ ಚಿಕ್ಕಣ್ಣ ಅವರನ್ನ ವಿಚಾರಣೆ ಮಾಡಲಿದ್ದಾರೆ ಪೊಲೀಸರು ಎನ್ನಲಾಗಿದೆ. ಹಾಗೇ ಚಿಕ್ಕಣ್ಣ ಏನಾದ್ರೂ ಈ ವಿಚಾರಗಳನ್ನ ತಿಳಿಸಿದರೆ, ಚಿಕ್ಕಣ್ಣ ಹೇಳಿಕೆಯನ್ನ ಸಾಕ್ಷಿಯಾಗಿ ಪರಿಗಣಿಸುತ್ತೇವೆ ಅಂತಿದ್ದಾರೆ ಪೊಲೀಸರು. ಹೀಗಾಗಿ ನಟ ಚಿಕ್ಕಣ್ಣಗೆ ಸದ್ಯಕ್ಕೆ ರಿಲೀಫ್ ಸಿಕ್ಕಂತಾಗಿದೆ.

ದರ್ಶನ್ ಮನುಷ್ಯನ ರಾಕ್ಷಸನಾ...

ಕರ್ನಾಟಕದಲ್ಲಿ ದರ್ಶನ್ ದೊಡ್ಡ ಹೆಸರು ಮಾಡಿದ್ದಾನೆ. ನಟನೆ ಮೂಲಕ ಕೋಟ್ಯಂತರ ಫ್ಯಾನ್ಸ್ ಸಂಪಾದನೆ ಮಾಡಿದ್ದಾನೆ. ಇದೇ ಕಾರಣಕ್ಕೆ ದರ್ಶನ್‌ಗೆ ದೊಡ್ಡ ಜವಾಬ್ದಾರಿ ಇತ್ತು. ಆದರೆ ಹೀಗೆ ಜವಾಬ್ದಾರಿ ಸ್ಥಾನದಲ್ಲಿ ಇದ್ದು, ಸರಿಯಾಗಿ ನಡೆದುಕೊಳ್ಳಬೇಕಿದ್ದ ಈತ ಕೆಟ್ಟದಾಗಿ ನಡೆದುಕೊಂಡು ಈಗ ಕಂಬಿ ಎಣಿಸುತ್ತಿದ್ದಾನೆ. ಅದರಲ್ಲೂ ನಟ ದರ್ಶನ್ ಕೊಲೆ ಆರೋಪದಲ್ಲಿ ಅರೆಸ್ಟ್ ಆಗುವ ಮೊದಲು, ಆತ ಮಾಡಿದ ಕೃತ್ಯದ ವಿಡಿಯೋಗಳನ್ನ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ವೀಕ್ಷಣೆ ಮಾಡಿದ್ದರಂತೆ. ಖುದ್ದು ಬೆಂಗಳೂರು ಕಮೀಷನರ್ ದರ್ಶನ್ ಅಟ್ಟಹಾಸದ ವಿಡಿಯೋ ತೋರಿಸಿ, ಸಿಎಂ ಬಳಿ ಅನುಮತಿ ಪಡೆದು ಕೊಲೆ ಆರೋಪಿ ದರ್ಶನ್ ಬಂಧಿಸಿದ್ದರಂತೆ.

118 ಸಾಕ್ಷ್ಯ ಸಂಗ್ರಹಿಸಿದ ಪೊಲೀಸರು?

ದರ್ಶನ್ ತೂಗುದೀಪ್ & ಗ್ಯಾಂಗ್ ವಿರುದ್ಧ ಕೇಳಿಬಂದಿರುವ ಕೊಲೆ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಪೊಲೀಸರು ಖಡಕ್ ತನಿಖೆ ನಡೆಸುತ್ತಿದ್ದಾರೆ. ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಈ ವಿಚಾರದಲ್ಲಿ ಕರ್ನಾಟಕದ ಪೊಲೀಸರಿಗೆ ಫುಲ್ ಪವರ್ ಕೊಟ್ಟಿದ್ದು, ಯಾವುದೇ ರೀತಿಯ ಒತ್ತಡಗಳಿಗೆ ಮಣಿಯಬೇಡಿ ಎಂದಿದ್ದಾರೆ. ಹೀಗಾಗಿ ಕೇಸ್ ಕೂಡ ತುಂಬಾ ಸ್ಟ್ರಾಂಗ್ ಆಗುತ್ತಿದೆ. ಅದರಲ್ಲೂ ದರ್ಶನ್ & ಗ್ಯಾಂಗ್ ವಿರುದ್ಧ ಈವರೆಗೂ ಸುಮಾರು 118 ಸಾಕ್ಷ್ಯ ಸಂಗ್ರಹವಾಗಿದೆ ಎಂಬ ಸುದ್ದಿ ತಿಳಿದುಬಂದಿದೆ. ಹೀಗಾಗಿ ಕೇಸ್ ಕೂಡ ತುಂಬಾ ಸ್ಟ್ರಾಂಗ್ ಆಗುತ್ತಿದ್ದು, ಈಗ ದರ್ಶನ್‌ಗೆ ಜೈಲೂಟ ಗ್ಯಾರಂಟಿ ಆಗಿದೆ.

ಡಿ-ಗ್ಯಾಂಗ್‌ಗೆ ಮಾನಸಿಕ ವಿಕೃತಿ?

ದರ್ಶನ್ & ಗ್ಯಾಂಗ್ ಸೇರಿ ರೇಣುಕಾಸ್ವಾಮಿ ಕೊಲೆ ಮಾಡಿರುವ ರೀತಿ ನೋಡಿದರೆ, ಈ ಗ್ಯಾಂಗ್ ಮಾನಸಿಕ ವಿಕೃತಿ ಹೊಂದಿದೆಯಾ? ಎಂಬ ಅನುಮಾನ ಮೂಡಿದೆ ಯಾಕಂದ್ರೆ ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆಯಲ್ಲಿ ಭಯಾನಕ ಸಂಗತಿ ಗೊತ್ತಾಗಿದೆ. ರೇಣುಕಾಸ್ವಾಮಿ ಚರ್ಮಕ್ಕೆ, ತಲೆಗೆ ಹಾಗೂ ಮರ್ಮಾಂಗಕ್ಕೆ ಭಾರಿ ಗಾಯ ಮಾಡಲಾಗಿದೆ. ಹಾಗೇ ಮರ್ಮಾಂಗದ ಚರ್ಮ ಸುಲಿದು ಟಾರ್ಚರ್ ಕೊಟ್ಟಿದ್ದಾರೆ. ಈ ಮೂಲಕ ವಿಕೃತವಾಗಿ ರೇಣುಕಾಸ್ವಾಮಿ ಕೊಲೆ ಮಾಡಿದೆ ಈ ವಿಕೃತರ ಗ್ಯಾಂಗ್. ಹೀಗಾಗಿಯೇ ಪೊಲೀಸರು ಈ ಗ್ಯಾಂಗ್‌ಗೆ ವಿಕೃತ ಮನಸ್ಥಿತಿ ಇದೆಯಾ? ಎಂಬ ಆಂಗಲ್ ಮೂಲಕವೂ ತನಿಖೆ ನಡೆಸುತ್ತಿದ್ದಾರೆ. ಅಲ್ಲದೆ ಇವರಿಂದ ಇನ್ನೂ ಯಾರು, ಯಾರೆಲ್ಲಾ ಸಮಸ್ಯೆ ಎದುರಿಸಿದ್ದಾರೆ? ಅನ್ನೋದನ್ನ ಕೂಡ ಪರಿಶೀಲನೆ ಮಾಡಲಾಗುತ್ತಿದೆ.

ದರ್ಶನ್ ಅಲಿಯಾಸ್ ರೌಡಿ ದರ್ಶನ್?

2011ರ ಸಮಯದಲ್ಲಿ ತನ್ನ ಹೆಂಡತಿ ಮೇಲೆಯೇ ದರ್ಶನ್ ರಾಕ್ಷಸನ ರೀತಿ ಹಲ್ಲೆ ಮಾಡಿರುವುದು ಸೇರಿದಂತೆ, ಪದೇ ಪದೇ ದರ್ಶನ್ & ಗ್ಯಾಂಗ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿವೆ. ಹೀಗೆ ಕನ್ನಡ ನಾಡಿನಲ್ಲಿ ತನ್ನ ಪಟಾಲಂ ಕಟ್ಟಿಕೊಂಡು ದರ್ಶನ್ & ಗ್ಯಾಂಗ್ ಜನರಿಗೆ ಹಾಗೂ ಹಲವು ನಿರ್ಮಾಪಕ, ನಿರ್ದೇಶಕರಿಗೆ ಟಾರ್ಚರ್ ಮಾಡಿದೆ ಎಂಬ ಆರೋಪ ಇದೆ. ಹೀಗಾಗಿಯೇ ಇದೀಗ, ದರ್ಶನ್ ಮತ್ತು ಆತನ ಸಹಚರರ ವಿರುದ್ಧ ರೌಡಿಶೀಟ್ ತೆರೆಯಲು ಕನ್ನಡ ನಾಡಿನ ಪೊಲೀಸರು ಅಂತಿಮ ಹಂತದ ಸಿದ್ಧತೆ ನಡೆಸಿದ್ದಾರೆ. ಈ ಹಿನ್ನೆಲೆ ಎಲ್ಲಾ ದಾಖಲೆಗಳನ್ನ ಸಂಗ್ರಹಿಸುವ ಮೂಲಕ, ದರ್ಶನ್ & ಗ್ಯಾಂಗ್‌ಗೆ ಶಾಕ್ ನೀಡಲು ಸಜ್ಜಾಗಿದ್ದಾರೆ ಎನ್ನಲಾಗಿದೆ.

ದರ್ಶನ್ ಮುಂದಿನ ಸಿನಿಮಾ 'ಪರಪ್ಪನ ಅಗ್ರಹಾರ'?

ಕಲಾಸಿಪಾಳ್ಯ, ಮೆಜೆಸ್ಟಿಕ್ ಅಂತಾ ಬೆಂಗಳೂರಿನ ಏರಿಯಾಗಳ ಹೆಸರನ್ನು ಇಟ್ಟುಕೊಂಡೇ ಭಾರಿ ಭರ್ಜರಿ ಸಿನಿಮಾ ನೀಡಿದ್ದ ದರ್ಶನ್, ಈಗ 'ಪರಪ್ಪನ ಅಗ್ರಹಾರ' ಸೇರಿದ್ದಾರೆ. ದರ್ಶನ್ ತಾನೇ ಮಾಡಿಕೊಂಡ ಎಡವಟ್ಟಿಗೆ & ದುರಹಂಕಾರಕ್ಕೆ ಇಂದು ವಿಲವಿಲ ಒದ್ದಾಡುವ ಪರಿಸ್ಥಿತಿ ಬಂದಿದೆ ಅಂತಾರೆ ಅವರ ಸ್ನೇಹಿತರು. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಭಾರಿ ದೊಡ್ಡ ಚರ್ಚೆ ನಡೆಯುತ್ತಿದೆ. ಹೀಗೆ ದರ್ಶನ್ ಕೊಲೆ ಆರೋಪದಲ್ಲಿ ಸೆಂಟ್ರಲ್ ಜೈಲ್ 'ಪರಪ್ಪನ ಅಗ್ರಹಾರ'ಕ್ಕೆ ಹೋಗಿದ್ದು, ಕೊಲೆ ಆರೋಪಿ ದರ್ಶನ್ ಮುಂದಿನ ಸಿನಿಮಾ 'ಪರಪ್ಪನ ಅಗ್ರಹಾರ' ಆಗಿರಲಿದೆ ಅಂತಿದ್ದಾರೆ ದರ್ಶನ್ ವಿರೋಧಿಗಳು. ಹೀಗಾಗಿ ದರ್ಶನ್ & ಅವರ ವಿರೋಧಿಗಳ ಫೈಟಿಂಗ್‌ಗೆ ಭರ್ಜರಿ ತಿರುವು ಸಿಕ್ಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+