ದರ್ಶನ್ ನಿಜವಾದ ಕೊಲೆಗಾರ? ರೇಣುಕಾಸ್ವಾಮಿ ಮರ್ಮಾಂಗಕ್ಕೆ ಒದ್ದಿದ್ದೇ ನಟ ದರ್ಶನ್?

ನಟ ದರ್ಶನ್ ವಿರುದ್ಧ ಕ್ಷಣಕ್ಕೊಂದು ಆರೋಪ ಕೇಳಿಬರುತ್ತಿದ್ದು, ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ವಿರುದ್ಧ ಪ್ರತಿಭಟನೆ ಆರಂಭ ಆಗಿದೆ. ಇದೇ ಸಮಯದಲ್ಲಿ ಮತ್ತೊಂದು ಸ್ಫೋಟಕ ಆರೋಪ ಕೇಳಿಬಂದಿದ್ದು, ಇಡೀ ಕರ್ನಾಟಕ ಈ ಸುದ್ದಿ ಕೇಳಿ ಬೆಚ್ಚಿಬಿದ್ದಿದೆ. ಹಾಗಾದ್ರೆ ನಟ ದರ್ಶನ್ ನೇರವಾಗಿ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಭಾಗಿ ಆಗಿದ್ದರಾ? ಏನಿದು ಆರೋಪ? ಸಂಪೂರ್ಣ ಮಾಹಿತಿ ತಿಳಿಯಲು ಮುಂದೆ ಓದಿ.

ಈ ಹಿಂದೆ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ದರ್ಶನ್ & ಪವಿತ್ರ ಗೌಡರ ಜಗಳ ದೊಡ್ಡ ಕಂಟಕ ತಂದಿತ್ತು. ದರ್ಶನ್ ಮತ್ತು ಪವಿತ್ರಾ ಗೌಡ ನಡುವೆ ಆತ್ಮೀಯತೆ ಇದ್ದ ಕಾರಣ ಈ ರೀತಿ ಜಗಳ ಆಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಹೀಗೆ ಜಗಳ ಶುರುವಾದಾಗ ಈಗ ಕೊಲೆ ಆಗಿರುವ ರೇಣುಕಾಸ್ವಾಮಿ ಅವ್ರು, ಪವಿತ್ರ ಗೌಡ ಅವರ ಬಗ್ಗೆ ಕೆಟ್ಟದಾಗಿ ಕಮೆಂಟ್ ಮಾಡಿ ಪೋಸ್ಟ್ ಮಾಡಿದ್ರು ಎಂಬ ಆರೋಪ ಕೇಳಿಬಂದಿತ್ತು. ಅದೇ ರೇಣುಕಾಸ್ವಾಮಿ ಕೊಲೆ ಆಗಿದೆ. ಘಟನೆಯಲ್ಲಿ, ದರ್ಶನ್ ಅವರ ವಿರುದ್ಧವೇ ಕೊಲೆ ಆರೋಪ ಕೇಳಿಬಂದಿದೆ. ಹೀಗಿದ್ದಾಗ ರೇಣುಕಾಸ್ವಾಮಿಯ ಯಾವ ಜಾಗಕ್ಕೆ ದರ್ಶನ್ ಅವರು ಒದ್ದಿದ್ದರಂತೆ ಗೊತ್ತಾ?

Darshan Thoogudeepa May Face Very Critical Situation In His Life

ಮರ್ಮಾಂಗಕ್ಕೆ ಒದ್ದು, ಸುಟ್ಟು ಕೊಲೆ?

ದರ್ಶನ್ ಅವರು ಈ ಕೊಲೆ ಪ್ರಕರಣದಲ್ಲಿ ಭಾಗಿ ಆಗಿದ್ದಾರೆ ಎಂಬ ಗಂಭೀರ ಆರೋಪಗಳ ಮಧ್ಯೆ ಈ ಸಮಯದಲ್ಲಿ ಸ್ಫೋಟಕ ಆರೋಪ ಒಂದು ಕೇಳಿಬಂದಿದೆ. ಅದು ಏನೆಂದರೆ ರೇಣುಕಾಸ್ವಾಮಿಯ ಮರ್ಮಾಂಗಕ್ಕೆ ಒದ್ದಿದ್ದು ಖುದ್ದು ನಟ ದರ್ಶನ್ ಎಂಬ ಆರೋಪ ಕೇಳಿಬಂದಿದೆ. ಅದರಲ್ಲಿಯೂ ರೇಣುಕಾಸ್ವಾಮಿ ಅವರ ಮರ್ಮಾಂಗಕ್ಕೆ ಒದ್ದು, ಸಲಾಕೆಯಿಂದ ಸುಟ್ಟು ಹಲ್ಲೆ ಮಾಡಿ ವಿಕೃತವಾಗಿ ಕೊಲೆ ಮಾಡಿರುವುದು ಬಯಲಾಗಿದೆ. ಇದರಲ್ಲಿ ರೇಣುಕಾಸ್ವಾಮಿ ಮರ್ಮಾಂಗಕ್ಕೆ ಸ್ವತಃ ದರ್ಶನ್ ಒದ್ದಿದ್ದು, ರೇಣುಕಾಸ್ವಾಮಿ ಹತ್ಯೆ ಮಾಡಿದ್ದಾರೆ ಎಂಬ ಆರೋಪವು ಕೇಳಿಬಂದಿದೆ. ಈ ವಿಚಾರ ಇದೀಗ ಭಾರಿ ಸಂಚಲನ ಸೃಷ್ಟಿ ಮಾಡಿದೆ.

ಉಮಾಪತಿ ಹೇಳಿಕೆ ಫುಲ್ ವೈರಲ್!

ನಟ ದರ್ಶನ್ ಅಹಂಕಾರದ ಬಗ್ಗೆ ಮಾತನಾಡಿದ್ದ ಉಮಾಪತಿ ಶ್ರೀನಿವಾಸ್ ಗೌಡ, 'ಜೀವನದಲ್ಲಿ ನಮ್ಮನ್ನ ಎಲ್ಲರೂ ಹೊಗಳಬೇಕು, ಎಲ್ಲರೂ ನಮಗೆ ಮರ್ಯಾದಿ ಕೊಡಬೇಕು ಅಂದ್ರೆ ಆ ರೀತಿ ಮರ್ಯಾದಿ ಸಂಪಾದನೆ ಮಾಡಬೇಕು. ಇವತ್ತು ನಾನು ತಗಡೇ ಇರಬಹುದು, ಹಿಂಗೇ ಜೀವನವು ಇರಲ್ಲ ಮೇಲೆ ಬಂದು ಕೆಳಗೆ ಬೀಳುತ್ತೆ' ಅಂತಾ ಹೇಳಿದ್ದರು ಉಮಾಪತಿ. ಈಗ ಅದೇ ರೀತಿ ನಟ ದರ್ಶನ್ ಕೊಲೆಯ ಆರೋಪದಲ್ಲಿ ಜೈಲು ಪಾಲಾಗಿದ್ದು, ಉಮಾಪತಿ ಶ್ರೀನಿವಾಸ್ ಅವರ ಹೇಳಿಕೆ ಈಗ ಮತ್ತೊಮ್ಮೆ ಫುಲ್ ವೈರಲ್ ಆಗುತ್ತಿದೆ. ಅಲ್ಲದೆ ದರ್ಶನ್ ವಿರೋಧಿಗಳು ಇದನ್ನ ಶೇರ್ ಮಾಡಿ, ನಟ ದರ್ಶನ್ ಕೊಲೆ ಆರೋಪದ ಕೇಸ್ ಬಗ್ಗೆ ಪ್ರಸ್ತಾಪ ಮಾಡುತ್ತಿದ್ದಾರೆ.

ದರ್ಶನ್ & ಗ್ಯಾಂಗ್‌ಗೆ ಅನ್ನ-ಸಾರು!

ಪ್ರತಿದಿನ ಎಣ್ಣೆ ಹೊಡೆದು, ಸಖತ್ ಎಂಜಾಯ್ ಮಾಡುತ್ತಾ ಮಾಂಸ ತಿನ್ನುತ್ತಿದ್ದ ನಟ ದರ್ಶನ್ & ಗ್ಯಾಂಗ್ ಈಗ ಅನ್ನ ಸಾರು ತಿಂದು ಮಲಗುವ ಪರಿಸ್ಥಿತಿ ಬಂದಿದೆ. ಪೊಲೀಸರು ಆರೋಪಿಗಳ ತಂಡಕ್ಕೆ ಅನ್ನ ಸಾರು ನೀಡಿ, ಚಾಪೆ ಕೊಟ್ಟು ಮಲಗಿಸಿದ್ದಾರೆ. ಈ ಮೂಲಕ ಕೊಲೆ ಆರೋಪದ ಹಿನ್ನೆಲೆ ಕಂಬಿ ಹಿಂದೆ ಬಿದ್ದಿರುವ, ಸೋ ಕಾಲ್ಡ್ ಡಿ-ಬಾಸ್ ಇದೀಗ ಹಿಂಸೆ ಅನುಭವಿಸುತ್ತಿದ್ದಾರೆ.

ಇದೇ ರೀತಿ ಮುಂದಿನ ದಿನಗಳಲ್ಲಿ ಮತ್ತಷ್ಟು ಸಂಕಷ್ಟ ದರ್ಶನ್ ಅವರ ಬೆನ್ನುಹತ್ತುವ ಅಪಾಯ ಕಾಡುತ್ತಿದ್ದು, ಏನಾಗುತ್ತೆ ಅನ್ನೋದನ್ನ ಕಾದು ನೋಡಬೇಕಿದೆ. ಮತ್ತೊಂದು ಕಡೆ ತೂಗುದೀಪ ದರ್ಶನ್ ಅವರ ಅಭಿಮಾನಿಗಳು ಸೈಲೆಂಟ್ ಆಗುತ್ತಿದ್ದಾರೆ. ಅಲ್ಲದೆ ಸ್ವತಃ ದರ್ಶನ್ ಅವರೇ ಈ ರೀತಿ ವಿಕೃತವಾಗಿ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ್ದರು ಎಂಬ ಆರೋಪ ಸಂಚಲನವನ್ನೇ ಸೃಷ್ಟಿ ಮಾಡಿದೆ.

ಪತ್ರಕರ್ತರ ತೀವ್ರ ಆಕ್ರೋಶ!

ಪೊಲೀಸ್ ಅಧಿಕಾರಿಗಳ ವರ್ತನೆಯಿಂದ ಮಾಧ್ಯಮ ಸಿಬ್ಬಂದಿ ಆಕ್ರೋಗೊಂಡಿದ್ದಾರೆ ಎಂಬ ಆರೋಪಗಳ ಬೆನ್ನಲ್ಲೇ, ದರ್ಶನ್ ಅಭಿಮಾನಿ ಮಾಧ್ಯಮಗಳ ಎದುರಿಗೆ ಬಂದು ಮಾಧ್ಯಮಗಳ ಕುರಿತು ತುಂಬ ಕೀಳಾಗಿ ಮಾತನಾಡಿದ್ದಾರೆ ಎಂದು ಆರೋಪ ಮಾಡಲಾಗಿದೆ. ಈ ವೇಳೆ ಅಲ್ಲಿದ್ದ ಮಾಧ್ಯಮ ಸಿಬ್ಬಂದಿ ದಿಢೀರ್ ರೊಚ್ಚಿಗೆದ್ದಿದ್ದು ಆತನ ಮುಖಚರಿ ಸೆರೆಹಿಡಿಯಲು ಹೋಗಿದ್ದಾರೆ. ಈ ವೇಳೆ ಹೆದರಿದ ದರ್ಶನ್ ಅಭಿಮಾನಿ, ಆ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಇಷ್ಟಾದರೂ ಮಾಧ್ಯಮಗಳ ಸಿಬ್ಬಂದಿ ಆತನ ಹಿಂದೆ ಓಡಿದ್ದಾರೆ. ಆಗ ತಕ್ಷಣ ಪೊಲೀಸರು ಆತನನ್ನ ಪೊಲೀಸ್ ಠಾಣೆ ಒಳಗೆ ಕರೆದುಕೊಂಡು ಹೋಗಿದ್ದಾರೆ. ಹಾಗೇ ಆತನಿಗೆ ಅವರದ್ದೇ ಭಾಷೆಯಲ್ಲಿ ಬುದ್ಧಿ ಹೇಳಿ, ರುಚಿ ತೋರಿಸಿದ್ದಾರೆ ಎನ್ನಲಾಗಿದೆ.

ದರ್ಶನ್ ಸಹವಾಸದಿಂದ ತಂದೆ ಕಳೆದುಕೊಂಡ

ಅಂದಹಾಗೆ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಎಸ್ಕೇಪ್ ಆಗಿದ್ದ, ಚಿತ್ರದುರ್ಗದ ಅನುಕುಮಾರ್​ ಅಲಿಯಾಸ್​ ಅನು ಈಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಹೀಗೆ ತನ್ನ ಮಗ ಕೊಲೆ ಆರೋಪಿಯಾಗಿ ಪೊಲೀಸರ ಬಲೆಗೆ ಬಿದ್ದ ನಂತರ, ಆರೋಪಿ ಅನುಕುಮಾರ್ ಅಲಿಯಾಸ್ ಅನು ತಂದೆ ಚಂದ್ರಣ್ಣ ಅವರಿಗೆ ಹೃದಯಾಘಾತ ಆಗಿದೆ ಎಂದು ಆರೋಪ ಮಾಡಲಾಗಿದೆ. ಹೃದಯಾಘಾತದ ಕಾರಣಕ್ಕೆ, ಇದೀಗ ಅನುಕುಮಾರ್ ಅಲಿಯಾಸ್ ಅನು ಅವರ ತಂದೆ ಚಂದ್ರಣ್ಣ ಮೃತಪಟ್ಟಿದ್ದಾರೆ. ಹೀಗಿದ್ದಾಗ ಕೊಲೆ ಆರೋಪಿಗೆ ತನ್ನ ತಂದೆಯ ಮುಖ ಕೊನೆಯ ಬಾರಿಗೆ ನೋಡುವ ಭಾಗ್ಯ ಕೂಡ ಸಿಕ್ಕಿಲ್ಲ. ದರ್ಶನ್ ಸಹವಾಸ ಮಾಡಿದ್ದಕ್ಕೆ ಅನುಕುಮಾರ್ ನರಳುವಂತಾಗಿದೆ ಎಂಬ ಆರೋಪ ಕೇಳಿಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+