Darshan Thoogudeepa: ಬಳ್ಳಾರಿ ಜೈಲಿನಿಂದ ದರ್ಶನ್ ತೂಗುದೀಪ್ ರಿಲೀಸ್ ಆಗುತ್ತಿದ್ದಂತೆ...
ಡಿ-ಬಾಸ್... ಡಿ-ಬಾಸ್... ಡಿ-ಬಾಸ್... ಹೀಗೆ ದರ್ಶನ್ ತೂಗುದೀಪ್ ಅವರ ಅಭಿಮಾನಿ ಬಳಗದ ಹೃದಯ ಇವತ್ತು ಸಿಕ್ಕಾಪಟ್ಟೆ ಬಡಿದುಕೊಳ್ಳುತ್ತಿದೆ, ಅಭಿಮಾನಿಗಳು ಕಾಯುತ್ತಿದ್ದಾರೆ. ದರ್ಶನ್ ತೂಗುದೀಪ್ ಅವರು ಬಳ್ಳಾರಿ ಜೈಲಿನಲ್ಲಿ ನರಳುತ್ತಿರುವ ಸಮಯದಲ್ಲೇ ಈಗ ಭಾರಿ ಭರ್ಜರಿ ಗುಡ್ ನ್ಯೂಸ್ ಸಿಗುವುದು ಗ್ಯಾರಂಟಿ ಆಗುತ್ತಿದೆ. ಅಭಿಮಾನಿಗಳ ಪಾಲಿನ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಇದೀಗ ಬಳ್ಳಾರಿ ಜೈಲಿನಿಂದ ಮುಕ್ತಿ ಪಡೆಯಲಿದ್ದಾರೆ ಎಂಬ ಖುಷಿಯಲ್ಲಿ ಅಭಿಮಾನಿಗಳು ಇದ್ದಾರೆ. ಹೀಗಿದ್ದಾಗ, ಬಳ್ಳಾರಿ ಜೈಲಿಂದ ದರ್ಶನ್ ತೂಗುದೀಪ್ ರಿಲೀಸ್ ಆಗುತ್ತಿದ್ದಂತೆ...
ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾಗ, ನಟ ದರ್ಶನ್ ತೂಗುದೀಪ್ ಅವರ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿತ್ತು. ದರ್ಶನ್ ತೂಗುದೀಪ್ ಮತ್ತು ರೌಡಿಶೀಟರ್ ನಾಗ ಸೇರಿ, ಮತ್ತಿಬ್ಬರು ಪಾತಕಿಗಳು ಒಟ್ಟಾಗಿ ಕೂತು ಸಿಗರೇಟು ಸೇದುತ್ತಾ ಟೀ ಕುಡಿಯುತ್ತಿದ್ದ ಫೋಟೋ ಫುಲ್ ವೈರಲ್ ಆಗಿತ್ತು. ಆ ನಂತರವೇ ದರ್ಶನ್ ತೂಗುದೀಪ್ ಅವರ ಜೊತೆಗೆ ಇನ್ನುಳಿದ ಆರೋಪಿ ಪಡೆಯನ್ನ ಕೂಡ ಬೇರೆ ಬೇರೆ ಜೈಲಿಗೆ ಎತ್ತಂಗಡಿ ಮಾಡಲಾಗಿತ್ತು. ಹೀಗೆ ಬಳ್ಳಾರಿ ಜೈಲಿಗೆ ಹೋಗಿದ್ದ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಸಾಲು ಸಾಲು ಸಂಕಷ್ಟ ಎದುರಾಗಿತ್ತು. ಆದರೆ ಈಗ ಆ ಎಲ್ಲಾ ಸಂಕಷ್ಟಗಳು ಮುಗಿಯುವ ಮುನ್ಸೂಚನೆ ಬಂದಿದೆ. ಬಳ್ಳಾರಿ ಜೈಲಿನಿಂದ ದರ್ಶನ್ ತೂಗುದೀಪ್ ರಿಲೀಸ್ ಆಗುತ್ತಿದ್ದಂತೆ...

ದರ್ಶನ್ ತೂಗುದೀಪ್ ರಿಲೀಸ್ ಆಗುತ್ತಿದ್ದಂತೆ...
ಕನ್ನಡ ಸಿನಿಮಾ ಇಂಡಸ್ಟ್ರಿಯ ಬಾಕ್ಸ್ ಆಫಿಸ್ ಸುಲ್ತಾನ ಎಂಬ ಬಿರುದು ಪಡೆದಿರುವ ನಟ ದರ್ಶನ್ ತೂಗುದೀಪ್ ಇದೀಗ ರಿಲೀಸ್ ಆಗಲು ಕ್ಷಣಗಣನೆ ಶುರುವಾಗಿದೆ. ಇದೇ ಕಾರಣಕ್ಕೆ, ಅಭಿಮಾನಿಗಳು ಡಿ-ಬಾಸ್... ಡಿ-ಬಾಸ್... ಅಂತಾ ಘೋಷಣೆಯ ಕೂಗಲು ಸಜ್ಜಾಗಿದ್ದಾರೆ. ಅಭಿಮಾನಿಗಳ ಪಾಲಿನ ದಾಸ & ಡಿ-ಬಾಸ್ ದರ್ಶನ್ ತೂಗುದೀಪ್ ಅವರು ರಿಲೀಸ್ ಆಗಿದ್ದೇ ತಡ ದೊಡ್ಡ ಮಟ್ಟದಲ್ಲಿ ಸಂಭ್ರಮಾಚರಣೆ ನಡೆಸಲು ಇದೀಗ ದರ್ಶನ್ ತೂಗುದೀಪ್ ಅವರ ಫ್ಯಾನ್ಸ್ ಕಾಯುತ್ತಿದ್ದಾರೆ.
ಅದರಲ್ಲೂ ಬಳ್ಳಾರಿ ಜೈಲಿನಿಂದ ದರ್ಶನ್ ತೂಗುದೀಪ್ ರಿಲೀಸ್ ಆಗುತ್ತಿದ್ದಂತೆ ಬಳ್ಳಾರಿಯಿಂದ ಹೆಲಿಕಾಪ್ಟರ್ ಮೂಲಕ ದರ್ಶನ್ ಅವರನ್ನ ಬೆಂಗಳೂರು ನಗರಕ್ಕೆ ಕರೆದುಕೊಂಡು ಬರಲು ಈಗ ತಯಾರಿ ಸಾಗಿದೆ. ಮತ್ತೊಂದು ಕಡೆ ಇಂದು ದರ್ಶನ್ ತೂಗುದೀಪ್ ಅವರ ಜಾಮೀನು ಅರ್ಜಿಯ ಆದೇಶ ಹೊರ ಬೀಳಲಿದ್ದು, ಬಳ್ಳಾರಿ ಜೈಲಿನಿಂದ ರಿಲೀಸ್ ಆಗಿ ಹೊರ ಬರುವ ನಿರೀಕ್ಷೆಯಲ್ಲಿ ಇದ್ದಾರೆ ದರ್ಶನ್ ತೂಗುದೀಪ್ ಅಭಿಮಾನಿಗಳು.
ಫ್ಯಾನ್ಸ್ ವಾರ್ ಇಲ್ಲಿಗೆ ನಿಲ್ಲೋದಿಲ್ವಾ?
ಒಂದು ಕಡೆ ದರ್ಶನ್ ತೂಗುದೀಪ್ ಅವರು ಬಳ್ಳಾರಿ ಜೈಲಿನಿಂದ ರಿಲೀಸ್ ಆಗಲಿದ್ದಾರೆ ಎಂಬ ಆಸೆ ಅಭಿಮಾನಿಗಳಲ್ಲಿ ಮೂಡಿರುವ ಸಮಯದಲ್ಲೇ, ಫ್ಯಾನ್ಸ್ ವಾರ್ ಕೂಡ ಜೋರಾಗುತ್ತಿದೆ. ಒಟ್ನಲ್ಲಿ ಮತ್ತೊಮ್ಮೆ ಫ್ಯಾನ್ಸ್ ವಾರ್ ಜೋರಾಗಿದೆ, ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಇದೇ ಫ್ಯಾನ್ಸ್ ವಾರ್ ಸಿನಿಮಾಗಳನ್ನ ಹಳ್ಳ ಹಿಡಿಯುವಂತೆ ಮಾಡುತ್ತಿದೆ ಎಂಬ ಆರೋಪಗಳು ಕೂಡ ಕೇಳಿಬರುತ್ತಿವೆ. ಹೀಗಿದ್ದಾಗ ಫೈಟಿಂಗ್ ಕೂಡ ಜೋರಾಗಿದ್ದು, ಮುಂದೆ ಧ್ರುವ ಸರ್ಜಾ ಫ್ಯಾನ್ಸ್ & ದರ್ಶನ್ ತೂಗುದೀಪ್ ಅವರ ಅಭಿಮಾನಿಗಳ ನಡುವೆ ದೊಡ್ಡ ತಿಕ್ಕಾಟಕ್ಕೂ ಕಾರಣವಾಗುವ ಮುನ್ಸೂಚನೆ ನೀಡುತ್ತಿದೆ.
ದರ್ಶನ್ ತೂಗುದೀಪ್ ದೂರ.. ದೂರ..?
ಪವಿತ್ರಾ ಗೌಡ ಮತ್ತು ದರ್ಶನ್ ತೂಗುದೀಪ್ ನಡುವೆ 10 ವರ್ಷಗಳ ಸುದೀರ್ಘ ಸಂಬಂಧವಿದೆ. ದರ್ಶನ್ ತೂಗುದೀಪ್‌ಗೂ ಮೊದಲು ಪವಿತ್ರಾ ಗೌಡ ಒಂದು ಮದುವೆ ಕೂಡ ಆಗಿದ್ದರಂತೆ. ದರ್ಶನ್ ತೂಗುದೀಪ್ & ಪವಿತ್ರಾ ಗೌಡ ನಡುವೆ ಸಂಬಂಧ ಸರಿಯಾಗಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಯಾಕಂದ್ರೆ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ-ಬಾಸ್ ನಟ ದರ್ಶನ್ ತೂಗುದೀಪ್ ವಿರುದ್ಧವೇ ಪವಿತ್ರಾ ಗೌಡ ಆರೋಪ ಮಾಡಿದ್ರು ಎಂಬ ಆರೋಪವು ಕೇಳಿಬಂತು. ಪೊಲೀಸರ ಎದುರು ದರ್ಶನ್ ತೂಗುದೀಪ್ ವಿರುದ್ಧ ಪವಿತ್ರಾ ಗೌಡ ಆರೋಪ ಮಾಡಿದ್ದರಂತೆ. ಹೀಗಾಗಿ ಇಬ್ಬರೂ ಈಗ ದೂರವಾಗಲು ಇಚ್ಛಿಸಿದ್ದಾರೆ ಎನ್ನಲಾಗಿದೆ.












Click it and Unblock the Notifications