Darshan Thoogudeepa: ಪರಪ್ಪನ ಅಗ್ರಹಾರದಿಂದ ತುಮಕೂರು ಜೈಲಿಗೆ ದರ್ಶನ್ ಶಿಫ್ಟ್? ಸ್ಫೋಟಕ ಕಾರಣ ಇಲ್ಲಿದೆ!
ದರ್ಶನ್ ತೂಗುದೀಪ್ ಕೊಲೆ ಆರೋಪದಲ್ಲಿ ಜೈಲು ಸೇರಿ ಕಂಬಿ ಎಣಿಸುತ್ತಿರುವ ಸಮಯಕ್ಕೆ ಭರ್ಜರಿ ಸಂಚಲನ ಸೃಷ್ಟಿ ಮಾಡುವ ಸುದ್ದಿ ಹೊರಬೀಳುತ್ತಿದೆ. ಇದೀಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮುದ್ದೆ ಮುರಿಯುತ್ತಿರುವ ದರ್ಶನ್ ತೂಗುದೀಪ್ ಶೀಘ್ರದಲ್ಲೇ ತುಮಕೂರು ಜೈಲಿಗೆ ಶಿಫ್ಟ್ ಆಗಲಿದ್ದಾರೆ ಎಂಬ ಸುದ್ದಿ ಬಲವಾಗಿ ಓಡಾಡತೊಡಗಿದೆ. ಹಾಗಾದ್ರೆ ಈ ಸುದ್ದಿ ಹಿಂದಿನ ಅಸಲಿ ಕಹಾನಿ ಏನು? ದರ್ಶನ್ ತೂಗುದೀಪ್ ಯಾವಾಗ ಪರಪ್ಪನ ಅಗ್ರಹಾರ ಜೈಲಿನಿಂದ ತುಮಕೂರು ಜೈಲಿಗೆ ಶಿಫ್ಟ್ ಆಗಬಹುದು? ಬನ್ನಿ ತಿಳಿಯೋಣ.
ದರ್ಶನ್ ತೂಗುದೀಪ್‌ಗೆ ಈಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ಊಟ ಹೊಂದಾಣಿಕೆ ಆಗ್ತಿಲ್ಲ. ಇದೇ ಕಾರಣಕ್ಕೆ ಕರ್ನಾಟಕ ಹೈಕೋರ್ಟ್‌ಗೆ ಮನೆ ಊಟ ಬೇಕು ಎಂಬ ಬೇಡಿಕೆ ಸಲ್ಲಿಸಿದ್ದಾರೆ ನಟ ದರ್ಶನ್. ಹೀಗಿದ್ದಾಗ ಪರಪ್ಪನ ಅಗ್ರಹಾರ ಜೈಲಿನ ವಾತಾವರಣ ನಟ ದರ್ಶನ್ ಅವರಿಗೆ ಸೆಟ್ ಆಗುತ್ತಿಲ್ಲ. ಇದೇ ಕಾರಣಕ್ಕೆ ಇದೀಗ, ದರ್ಶನ್ ತೂಗುದೀಪ್ & ಗ್ಯಾಂಗ್‌ನ ತುಮಕೂರು ಜೈಲಿಗೆ ಶಿಫ್ಟ್ ಮಾಡಲು ಜೈಲು ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ ಎಂಬ ಸುದ್ದಿ ಇದೀಗ ಸಂಚಲನ ಸೃಷ್ಟಿ ಮಾಡಿದೆ. ಹಾಗಾದ್ರೆ ಇದಕ್ಕೆ ಬೇಕಾದ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರಾ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು? ಮುಂದೆ ಓದಿ.

ತುಮಕೂರಿಗೆ ದರ್ಶನ್ ಶಿಫ್ಟ್ ಗ್ಯಾರಂಟಿ?
ನಟ ದರ್ಶನ್ ಕನ್ನಡದ ಟಾಪ್ ಹೀರೋ ಆಗಿ ನೂರಾರು ಕೋಟಿ ರೂಪಾಯಿ ಸಂಪಾದಿಸಿದ್ದರು. ಅದ್ರಲ್ಲೂ ನಟ ದರ್ಶನ್ ಸಿನಿಮಾ ಬರುತ್ತೆ ಅಂದ್ರೆ ವರ್ಷಗಟ್ಟಲೇ ಅಭಿಮಾನಿ ಬಳಗ ಕಾಯುತ್ತಾ ಕೂರುತಿತ್ತು ಆದರೆ ಸಿಟ್ಟಿನ ಕೈಗೆ ಬುದ್ಧಿ ಕೊಟ್ಟವರಂತೆ ಎಡವಟ್ಟು ಮಾಡಿಕೊಂಡು ಇದೀಗ ನಟ ದರ್ಶನ್ ಜೈಲಿಗೆ ಹೋಗಿದ್ದಾರೆ ಅನ್ನೋದು ಅವರ ಅಭಿಮಾನಿಗಳ ಕೊರಗು. ಇದೇ ಸಮಯಕ್ಕೆ ಹೊಸ ಸಂಚಲನ ಸೃಷ್ಟಿ ಆಗಿದೆ. ಅದು ಏನೆಂದರೆ ನಟ ದರ್ಶನ್‌ನ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ನೇರವಾಗಿ ತುಮಕೂರಿಗೆ ಶಿಫ್ಟ್ ಮಾಡಲು ತಯಾರಿ ನಡೆದಿದೆ ಎಂಬ ಸುದ್ದಿ ಎಲ್ಲೆಲ್ಲೂ ಹಬ್ಬುತ್ತಿದೆ. ಈ ಮಧ್ಯೆ ತುಮಕೂರು ಜೈಲಿನಲ್ಲೂ ಇದಕ್ಕೆ ಬೇಕಾದ ಸಿದ್ಧತೆ ಸಾಗಿದೆ ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ಜೈಲಿನ ಒಳಗಡೆ ಗಾಂಜಾ & ಎಣ್ಣೆ?
ಪರಪ್ಪನ ಅಗ್ರಹಾರ ಜೈಲಿನ ಅವ್ಯವಸ್ಥೆ ಬಗ್ಗೆ ಬಿಡಿಸಿ ಹೇಳಬೇಕಿಲ್ಲ ಯಾಕಂದ್ರೆ ಈ ಹಿಂದೆ ಕೂಡ ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿ ನಡೆದಾಗ ಗಾಂಜಾ & ಸಿಗರೇಟ್, ಎಣ್ಣೆ ಹೀಗೆ ಏನೇನು ವಸ್ತು ಸಿಗಬಾರದೋ ಅದೆಲ್ಲಾ ಸಿಕ್ಕಿತ್ತು. ಈಗಲೂ ಅಷ್ಟೇ ಪರಪ್ಪನ ಅಗ್ರಹಾರ ಜೈಲಲ್ಲಿ ಖೈದಿಗು ಜೈಲಿನ ಅಧಿಕಾರಿಗಳೇ ಸಹಾಯ ಮಾಡುತ್ತಾರೆ, ಅದರಲ್ಲೂ ಜೈಲಿನ ಒಳಗಡೆ ದುಡ್ಡು ಕೊಟ್ಟರೆ ಏನೇನು ವ್ಯವಸ್ಥೆ ಬೇಕೋ ಅದನ್ನೆಲ್ಲಾ ಜೈಲಿನ ಒಳಗೆ ಮಾಡ್ತಾರೆ ಎಂಬ ಆರೋಪ ಇದೆ.
ಎಲ್ಲಾ ಆರೋಪಗಳ ನಡುವೆ ಇದೀಗ ದರ್ಶನ್ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ತುಮಕೂರಿಗೆ ಶಿಫ್ಟ್ ಮಾಡಲು ಮುಂದೆ ಬಂದಿರುವುದು ಹಲ್‌ಚಲ್ ಎಬ್ಬಿಸಿದೆ. ಆದರೆ ಈ ಬಗ್ಗೆ ಜೈಲು ಅಧಿಕಾರಿಗಳು ಇನ್ನೂ ಅಧಿಕೃತ ಮಾಹಿತಿ ನೀಡಿಲ್ಲ. ಹೀಗಾಗಿ ಇವತ್ತು ಅಥವಾ ನಾಳೆ ಒಳಗೆ ದರ್ಶನ್ ಅವರನ್ನ ತುಮಕೂರು ಜೈಲಿಗೆ ಶಿಫ್ಟ್ ಮಾಡುವ ಬಗ್ಗೆ ಅಧಿಕೃತ ಮಾಹಿತಿ, ಹೊರಬೀಳುವ ಸಾಧ್ಯತೆ ದಟ್ಟವಾಗಿದೆ.
ದರ್ಶನ್ ವಿರುದ್ಧ ತಿರುಗಿಬಿದ್ದ ಪವಿತ್ರಾ ಗೌಡ?
ಹೌದು, ಇದೀಗ ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಸುಲಭವಾಗಿಯೇ ಹೊರಗೆ ಬರುವ ಅವಕಾಶಗಳು ಇವೆ ಎಂದು ಕಾನೂನು ತಜ್ಞರು ಹೇಳುತ್ತಿದ್ದಾರೆ. ಹೀಗಿದ್ದಾಗ ನಟ ದರ್ಶನ್ ವಿರುದ್ಧ ಪವಿತ್ರಾ ಗೌಡ ಹೇಳಿಕೆಗಳನ್ನ ನೀಡುತ್ತಿದ್ದಾರೆ, ಜೈಲಿನಿಂದಲೇ ಹೀಗೆ ಪವಿತ್ರ ಗೌಡ ಹೊಸ ಕುತಂತ್ರ ಮಾಡುತ್ತಿದ್ದಾರೆ ಎಂಬ ಆರೋಪ ಕೂಡ ಕೇಳಿಬಂದಿದೆ. ಈ ಎಲ್ಲಾ ಕಾರಣಕ್ಕೆ ಇದೀಗ ನಟ ದರ್ಶನ್ ಅವರು ಜೈಲಿನಿಂದ ರಿಲೀಸ್ ಆಗಿ ಹೊರಗೆ ಬರುವುದು ಕಷ್ಟದ ಸಂಗತಿ ಎಂಬ ಅಭಿಪ್ರಾಯ ಕೂಡ ಕೇಳಿಬರುತ್ತಿದೆ.
ಮತ್ತೊಂದು ಗಂಭೀರ ಆರೋಪ!
ದರ್ಶನ್ ಜೈಲಿನಲ್ಲಿ ಇದ್ದರೂ ಎಲ್ಲಾ ರೀತಿಯ ಸೇವೆಗಳು ಸಿಗುತ್ತಿವೆ ಎಂಬ ಆರೋಪ ಇದೆ. ಪರಪ್ಪನ ಅಗ್ರಹಾರ ಜೈಲಿನ ಬಗ್ಗೆ ಆಗಾಗ ಆರೋಪಗಳ ಸುರಿಮಳೆಯೇ ಕೇಳಿಬರುತ್ತದೆ. ಈ ವಿಚಾರದಲ್ಲಿ ಹಿಂದೆ ಪೊಲೀಸ್ ಅಧಿಕಾರಿ ಡಿ. ರೂಪ ಅವರು ಕೇಂದ್ರ ಕಾರಾಗೃಹದ ಮೇಲೆ ದಾಳಿ ಮಾಡಿ, ಗಾಂಜಾ, ಅಫೀಮು, ಚಾಕು & ಚೂರಿ ಹೀಗೆ ವಿನಾಶಕಾರಿ ವಸ್ತುಗಳನ್ನ ಸೀಜ್ ಮಾಡಿದ್ದರು. ಪರಪ್ಪನ ಅಗ್ರಹಾರ ಜೈಲಿನಲ್ಲಿ ದುಡ್ಡು ಕೊಟ್ಟರೆ ಏನು ಬೇಕಾದರೂ ಸಿಗುತ್ತೆ ಅನ್ನೋ ಆರೋಪ ನಿಜವಾಗಿತ್ತು. ಈಗ ನೋಡಿದರೆ ದರ್ಶನ್ ತೂಗುದೀಪ್ ಮತ್ತು ನಟನ ಪ್ರೇಯಸಿ ಪವಿತ್ರಾ ಗೌಡ ಒಂದೇ ಕೋಣೆಯಲ್ಲಿ ಇದ್ದಾರೆ ಎಂದು ಆರೋಪ ಮಾಡಲಾಗುತ್ತಿದೆ.












Click it and Unblock the Notifications