Darshan Thoogudeepa: ಆಸ್ಪತ್ರೆಯಲ್ಲಿರುವ ದರ್ಶನ್‌ಗೆ 'ಸುಪ್ರೀಂ' ಶಾಕ್ ಕೊಡಲು ಮುಂದಾದ ಪೊಲೀಸರು

Actor Darshan: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್‌ಗೆ ಬೆನ್ನು ನೋವು ಹಿನ್ನೆಲೆ ಹೈಕೋರ್ಟ್‌ ಮಧ್ಯಂತರ ಜಾಮೀನು ನೀಡಿದೆ. ಇದರ ನಡುವೆಯೇ ಜಾಮೀನು ಅರ್ಜಿಯನ್ನು ಪ್ರಶ್ನಿಸಲು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ಪೊಲೀಸ್‌ ಅಧಿಕಾರಿಗಳು ಮುಂದಾಗಿದ್ದಾರೆ. ಮತ್ತೊಂದೆಡೆ ಇದೀಗ ಸಿಎಂ ಸಿದ್ದರಾಮಯ್ಯ ಅವರು ಈ ಕೇಸ್‌ನಲ್ಲಿ ಎಂಟ್ರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿದ್ದ ನಟ ದರ್ಶನ್ ನನ್ನು ಹೊರತರಲು ಪತ್ನಿ ವಿಜಯಲಕ್ಷ್ಮಿ ಹಾಗೂ ಕುಟುಂಬಸ್ಥರು ಪಟ್ಟ ಕಷ್ಟ ಅಷ್ಟಿಷ್ಟಲ್ಲ. ವಿಜಯಲಕ್ಷ್ಮಿ ಟೆಂಪಲ್‌ ರನ್‌ ಮುಂದುವರೆಸಿದ್ದರು. ಕೊನೆಗೂ ಈ ಹೋರಾಟಕ್ಕೆ ಪ್ರತಿಫಲ ಎಂಬಂತೆ ಬೆನ್ನು ನೋವು ಹಿನ್ನೆಲೆ ನಟ ದರ್ಶನ್‌ಗೆ ಹೈಕೋರ್ಟ್‌ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿತ್ತು.

Darshan Thoogudeepa Police Decide to Approach Supreme Court Against Interim Bail

ನಟ ದರ್ಶನ್‌ಗೆ ಚಿಕಿತ್ಸೆ ಪಡೆದುಕೊಳ್ಳಲು 6 ವಾರಗಳ ಕಾಲ ಹೈಕೋರ್ಟ್‌ ಮಧ್ಯಂತರ ಜಾಮೀನು ನೀಡಿದೆ. ಇದನ್ನು ಪ್ರಶ್ನಿಸಲು ಪೊಲೀಸ್‌ ಅಧಿಕಾರಿಗಳು ಇದೀಗ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದ. ಅಲ್ಲದೆ, ಈಗಾಗಲೇ ಪೊಲೀಸ್‌ ಅಧಿಕಾರಿಗಳು ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ನಿನ್ನೆಯಷ್ಟೆ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಪ್ರಕರಣ ಬಗ್ಗೆ ಚರ್ಚೆ ಮಾಡಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಸಿಎಂ ಕಚೇರಿಯಿಂದ ದರ್ಶನ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ಗೆ ಹೋಗಲು ಅನುಮತಿ ನೀಡುವಂತೆ ಗೃಹ ಸಚಿವಾಲಯಕ್ಕೆ ಸೂಚನೆ ಹೋಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ರೆಸಾರ್ಟ್‌ ರೀತಿಯಲ್ಲಿ ರೌಡಿ ಶೀಟರ್ ವಿಲ್ಸನ್ ಗಾರ್ಡನ್‌ ನಾಗನ ಜೊತೆ ಕುಳಿತುಕೊಂಡು ರೌಂಡ್‌ ಟೇಬಲ್‌ ಪಾರ್ಟ್‌ ಮಾಡಿದ್ದರು. ಈ ವೇಳೆ ನಟ ದರ್ಶನ್‌ ಒಂದು ಕೈಯಲ್ಲಿ ಸಿಗರೇಟ್‌, ಮತ್ತೊಂದು ಕೈಯಲ್ಲಿ ಕಾಫಿ ಮಗ್‌ ಹಿಡಿದಿದ್ದು, ಈ ಫೋಟೋ ಭಾರೀ ವೈರಲ್‌ ಆಗಿತ್ತು. ಇದರ ಬೆನ್ನಲ್ಲೇ ನಟ ದರ್ಶನ್‌ ರೌಡಿ ಶೀಟರ್‌ಗಳ ಜೊತೆ ವಿಡಿಯೋ ಕಾಲ್‌ನಲ್ಲಿ ಮಾತನಾಡಿರುವ ವಿಡಿಯೋ ಭಾರೀ ವೈರಲ್‌ ಆಗಿತ್ತು.

ಇದಕ್ಕೆ ವ್ಯಾಪಕ ಆಕ್ರೋಶಗಳು ಭುಗಿಲೆದ್ದಿದ್ದವು. ಬಳಿಕ ಎಚ್ಚೆತ್ತ ಸರ್ಕಾರ ಅಲ್ಲಿನ 9 ಜೈಲಾಧಿಕಾರಿಗನ್ನು ಅಮಾನತು ಮಾಡಿತ್ತು. ಅಲ್ಲದೆ ಅಲ್ಲದೆ, ಕೋರ್ಟ್‌ ಆದೇಶದ ಮೇರೆಗೆ ಪೊಲೀಸರು ನಟ ದರ್ಶನ್‌ನನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್‌ ಮಾಡಿದ್ದರು. ಹೀಗೆ ಎಲ್ಲಾ ಆರೋಪಿಗಳನ್ನು ಒಂದೊಂದು ಜೈಲಿಗೆ ವರ್ಗಾವಣೆ ಮಾಡಲಾಗಿತ್ತು.

ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿದ್ದ ಎನ್ನುವ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ನಟ ದರ್ಶನ್‌ & ಗ್ಯಾಂಗ್‌ ಬರ್ಬರವಾಗಿ ಹತ್ಯೆ ಮಾಡಿತ್ತು ಎನ್ನುವ ಮಾಹಿತಿ ಪೊಲೀಸ್‌ ವರದಿಗಳಲ್ಲಿ ಉಲ್ಲೇಖವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+