Darshan Thoogudeepa: ರೇಣುಕಾಸ್ವಾಮಿ ಕೊಲೆ ಪ್ರಕರಣ: ಏಪ್ರಿಲ್ 8ಕ್ಕೆ ವಿಚಾರಣೆ ಮುಂದೂಡಿಕೆ
ಬೆಂಗಳೂರು ಫೆಬ್ರವರಿ 25: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ತೂಗುದೀಪ, ಎ1 ಆರೋಪಿ ಪವಿತ್ರಾ ಗೌಡ ಹಾಗೂ ಗ್ಯಾಂಗ್‌ನ ವಿಚಾರಣೆಯನ್ನು ನಡೆಸಲಾಯಿತು. ವಾದ ವಿವಾದಗಳನ್ನು ಆಲಿಸಿದ ಬಳಿಕ ಕೋರ್ಟ್ ವಿಚಾರಣೆಯನ್ನು ಏ.8ಕ್ಕೆ ಮುಂದೂಡಿದೆ.
ಇಂದು (ಫೆಬ್ರವರಿ 25) 57ನೇ ಸೆಷನ್ಸ್ ಕೋರ್ಟ್ ನಲ್ಲಿ ಆರೋಪಿ ದರ್ಶನ್ ಮತ್ತು ಗ್ಯಾಂಗ್‌ನ ವಿಚಾರಣೆ ಮಾಡಲಾಗಿದೆ. ಕೋರ್ಟ್‌ನಲ್ಲಿ ಪೊಲೀಸರ ವಿರುದ್ಧ ದರ್ಶನ್ ಪರ ವಕೀಲರು ಗಂಭೀರ ಆರೋಪ ಮಾಡಿದರು. ಇತರೆ ಆರೋಪಿಗಳನ್ನು ಮಾಫಿ ಸಾಕ್ಷಿ ಆಗಲು ಒತ್ತಡ ಹೇರುತ್ತಿದ್ದಾರೆ. ಬೇರೆ ಆರೋಪಿಗಳಿಗೆ ಮಾಫಿ ಸಾಕ್ಷಿ ಆಗಿ ಅಂತ ಪೊಲೀಸರಿಂದ ಒತ್ತಡ ಹೇರಲಾಗುತ್ತಿದೆ ಎಂದು ಆರೋಪಿಸಿದರು. ವಾದವನ್ನು ಆಲಿಸಿದ ನ್ಯಾಯಾಧೀಶರು ವಿಚಾರಣೆ ಮುಂದೂಡಿದ್ದಾರೆ. ಏಪ್ರಿಲ್ 8ಕ್ಕೆ ವಿಚಾರಣೆ ನಡೆಯಲಿದೆ.

ಇನ್ನೂ ವಿಚಾರಣೆ ವೇಳೆ ಎಲ್ಲಾ ಆರೋಪಿಗಳು ಹಾಜಾರಾಗಿದ್ದರು. ಆದರೆ ಆರೋಪಿಗಳಾದ ನಿಖಿಲ್ ಮತ್ತು ಕೇಶವಮೂರ್ತಿ ಗೈರಾಗಿದ್ದರು. ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಕೆಲ ಆರೋಪಿಗಳು ಪ್ರಕರಣದಲ್ಲಿ ಜಾಮೀನು ಪಡೆದು ಹೊರಗಿದ್ದಾರೆ. ಹೀಗಾಗಿ ಪ್ರತಿ ತಿಂಗಳು ನ್ಯಾಯಾಲಯಕ್ಕೆ ಹಾಜರಾಗಬೇಕು ಎಂಬ ಷರತ್ತು ಹಿನ್ನೆಲೆಯಲ್ಲಿ ಇಂದು ಎಲ್ಲರೂ ಕೋರ್ಟ್ಗೆ ಹಾಜರಾಗಿದ್ದಾರೆ.
ದರ್ಶನ್ ಅವರು ನ್ಯಾಯಾಲಯಕ್ಕೆ ಹಾಜರಾಗುವ ಮೊದಲೇ ಆರ್.ಆರ್ ನಗರದ ತಮ್ಮ ನಿವಾಸದ ಬಳಿ ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ. ಇದಾದ ಮೇಲೆ ಕೋರ್ಟ್ನತ್ತ ದರ್ಶನ್ ತೆರಳಿದರು. ಈ ವೇಳೆ ದರ್ಶನ್ ಅಭಿಮಾನಿಗಳು ಅವರ ಕಾಲಿಗೆ ಬಿದ್ದಿದ್ದು ಕಂಡು ಬಂದಿದೆ.












Click it and Unblock the Notifications