Darshan Thoogudeepa: ಪ್ರೀತಿಯ ಸೆಲೆಬ್ರಿಟಿಸ್‌ಗಳೇ ಅಂತ ಹೊಸ ಪೋಸ್ಟ್ ಹಂಚಿಕೊಂಡ ದರ್ಶನ್!
Darshan Thoogudeepa: ನಟ ದರ್ಶನ್ ಅವರ ಬರ್ತಡೇಯನ್ನು ಅವರ ಅಭಿಮಾನಿಗಳು ಅದ್ಧೂರಿಯಾಗಿ ಆಚರಣೆ ಮಾಡಿದ್ದಾರೆ. ದರ್ಶನ್ ಅವರ ಜನ್ಮದಿನಕ್ಕೆ ಶುಭಕೋರಿದ ಅಭಿಮಾನಿಗಳಿಗೆ ಅವರು ಸಹ ಸಂತೋಷದಿಂದಲೇ ಪೋಸ್ಟ್‌ವೊಂದನ್ನು ಮಾಡಿದ್ದು. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್‌ನಿಂದ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು. ಈಗ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ.
ದರ್ಶನ್ ಅವರ ಬರ್ತಡೇ ಪ್ರತಿ ವರ್ಷವೂ ಅದ್ಧೂರಿಯಾಗಿ ನೆರವೇರುತ್ತಿತ್ತು. ದರ್ಶನ್ ಅವರ ಮನೆಯ ಮುಂದೆ ಸೇರುತ್ತಿದ್ದ ಸಾವಿರಾರು ಜನ ಡಿ - ಬಾಸ್ ಅಭಿಮಾನಿಗಳು ದರ್ಶನ್‌ಗೆ ವಿಶ್ ಮಾಡುತ್ತಿದ್ದರು. ಆದರೆ, ಈ ಬಾರಿ ಸಾರ್ವಜನಿಕವಾಗಿ ನಟ ದರ್ಶನ್ ಅವರು ಜನ್ಮದಿನಾಚರಣೆಯನ್ನು ಆಚರಿಸಿಕೊಂಡಿರಲಿಲ್ಲ. ಆದರೆ ಅವರ ಅಭಿಮಾನಿಗಳು ಭರ್ಜರಿಯಾಗಿ ಸೆಲೆಬ್ರೇಟ್ ಮಾಡಿದ್ದರು. ಇದೀಗ ಎಲ್ಲಾ ಅಭಿಮಾನಿಗಳಿಗೆ ವಿಶ್ ಮಾಡಲಾಗಿದೆ.
ದರ್ಶನ್ ಅವರು ಪ್ರೀತಿಯ ಸೆಲೆಬ್ರಿಟಿಸ್‌ಗಳೇ ಅಂತ ಪೋಸ್ಟ್ ಮಾಡಿದ್ದು. ಕೇವಲ 20 ನಿಮಿಷದಲ್ಲಿ ಸಾವಿರಾರು ಲೈಕ್‌ಗಳು ಬಂದಿವೆ. ಶೇರ್ ಸಹ ಜೋರಾಗಿದೆ. ಕಷ್ಟದ ದಿನಗಳನ್ನು ಕಳೆದ ಮೇಲೆ ನಟ ದರ್ಶನ್ ಅವರು ಫ್ಯಾಮಿಲಿಯೊಂದಿಗೆ ಟೈಮ್‌ಸ್ಪೆಂಡ್ ಮಾಡಿದ್ದಾರೆ. ಅವರು ಈಚೆಗೆ ಮಾಡಿದ್ದ ವಿಡಿಯೋ ಸಹ ಸಾಕಷ್ಟು ವೈರಲ್ ಆಗಿತ್ತು. ಜೈಲಿನಿಂದ ಬಿಡುಗಡೆಯಾಗಿ ಬಂದ ಮೇಲೆ ನಟ ದರ್ಶನ್ ಅವರು ಸಂಕ್ರಾಂತಿ ಹಬ್ಬಕ್ಕೆ ಮೊದಲ ಬಾರಿ ಬರೋಬ್ಬರಿ 8 ತಿಂಗಳ ನಂತರ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಆ ವಿಡಿಯೋ ಸಹ ಸಾಕಷ್ಟು ವೈರಲ್ ಆಗಿತ್ತು. ಇದೀಗ ಬರ್ತಡೇ ವಿಶ್ ಮಾಡಿದ್ದಕ್ಕೆ ಥ್ಯಾಂಕ್ಸ್ ಅಂತ ಹೇಳಿ ಪ್ರೀತಿಯ ಸೆಲೆಬ್ರಿಟಿಸ್‌ಗಳೇ ಅಂತ ಶುರು ಮಾಡಿದ್ದಾರೆ.

ಮುಂದುವರಿದು ನಿಮ್ಮ ಬಗ್ಗೆ ಎಷ್ಟು ಹೇಳಿದರೂ ಕಡಿಮೆ ಎಂದು ಭಾಸವಾಗುತ್ತದೆ. ಕಷ್ಟದಲ್ಲಿದ್ದಾಗ ಸದಾ ಬೆಂಬಲದಲ್ಲಿ ನಿಲ್ಲುವಂತ ಈ ನಿಷ್ಕಲ್ಮಶ ಹೃದಯಗಳಿಗೆ ನಾನು ಸದಾ ಚಿರಋಣಿ. ನಿಮ್ಮ ಪ್ರೀತಿ-ಪ್ರೋತ್ಸಾಹ ಮತ್ತು ಬೆಂಬಲವೇ ನನ್ನ ಜೀವನದ ನಿಜವಾದ ಆಸ್ತಿ.
ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿಸುವ ನಿಮ್ಮ ಪ್ರೀತಿಯ ಆಶೀರ್ವಾದಕ್ಕೆ ನಾನು ಮನದಾಳದಿಂದ ಕೃತಜ್ಞನಾಗಿದ್ದೇನೆ ಎಂದು ಹೇಳಿದ್ದಾರೆ.
ಅಲ್ಲದೆ ನೀವು ಹಲವೆಡೆ ಮಾಡುತ್ತಿರುವ ದಾನ-ಧರ್ಮ ಕಾರ್ಯಗಳು ಸಹಸ್ರಾರು ಹೃದಯಗಳನ್ನು ಸ್ಪರ್ಶಿಸುವಂತಹದ್ದು. ನಿಮ್ಮ ಈ ಕೆಲಸಗಳು ಅನೇಕರಿಗೆ ದಾರಿದೀಪವಾಗಲಿ. ನಿಮ್ಮ ಮನದಾಳದ ಪ್ರೀತಿಯ ಹಾರೈಕೆಗಳು ನನ್ನ ಮುಂದಿನ ಹೆಜ್ಜೆಗೆ ದಾರಿ ತೋರುವ ಬೆಳಕು ಎಂದರೆ ಅತಿಶಯೋಕ್ತಿಯಲ್ಲ. ಆದಷ್ಟು ಬೇಗ ನಿಮ್ಮನ್ನು ಕಾಣುವ ಹಂಬಲ, ಕಾತುರ ನನ್ನಲಿಯೂ ಇದೆ. ನಿಮ್ಮನ್ನು ಪಡೆದಿರುವ ನಾನೇ ಧನ್ಯ 🙏🏾 ನಿಮ್ಮ ದಾಸ ದರ್ಶನ್ ಎಂದು ಪೋಸ್ಟ್ ಮಾಡಿದ್ದಾರೆ.
ಸಿನಿಮಾಗಾಗಿ ಕಾಯುತ್ತಿರುವ ಅಭಿಮಾನಿಗಳು
ಇನ್ನು ನಟ ದರ್ಶನ್ ಅವರು ಸೋಷಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗುತ್ತಿದ್ದಂತೆಯೇ ಅವರು ಯಾವಾಗ ಸಿನಿಮಾ ಮಾಡಲಿದ್ದಾರೆ ಎಂದು ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ದರ್ಶನ್ ಅವರು ಈಗಾಗಲೇ ಎರಡರಿಂದ ಮೂರು ಪ್ರಾಜೆಕ್ಟ್‌ಗಳಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಈ ಸಿನಿಮಾಗಳು ಬೇಗ ಬಿಡುಗಡೆಯಾಗಲಿ ಎಂದು ಅವರ ಅಭಿಮಾನಿಗಳು ಕಾಯುತ್ತಿದ್ದಾರೆ.












Click it and Unblock the Notifications