Darshan Thoogudeepa: ಹುಟ್ಟುಹಬ್ಬಕ್ಕೆ ಮುನ್ನವೇ ಅಭಿಮಾನಿಗಳಿಗೆ ಶಾಕ್ ಕೊಟ್ಟ ದರ್ಶನ್ ತೂಗುದೀಪ್
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಸದ್ಯ ಜಾಮೀನು ಪಡೆದುಕೊಂಡಿದ್ದು, ತಮ್ಮ ಫಾರ್ಮ್‌ಹೌಸ್‌ನಲ್ಲಿ ಕುಟುಂಬದ ಜೊತೆ ಕಾಲ ಕಳೆಯುತ್ತಿದ್ದಾರೆ. ಜೈಲಿನಲ್ಲಿದ್ದಾಗಲೇ ಬೆನ್ನು ನೋವಿನಿಂದ ಬಳಲುತ್ತಿದ್ದ ಅವರು ಈಗ ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ.
ದರ್ಶನ್ ಹೊರಬಂದ ಬಳಿಕ ಅವರ ಮುಂದಿನ ಸಿನಮಾ ಬಗ್ಗೆ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ದರ್ಶನ್ ಸಂಪೂರ್ಣವಾಗಿ ಗುಣಮುಖರಾದ ಬಳಿಕ ಮೊದಲು ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸುವ ಸಾಧ್ಯತೆ ಇದೆ. ಡೆವಿಲ್ ಶೂಟಿಂಗ್ ಅರ್ಧಕ್ಕೆ ನಿಂತಿದ್ದು ಚಿತ್ರತಂದ ದರ್ಶನ್ ಗುಣಮುಖರಾಗಲು ಕಾಯುತ್ತಿದೆ.

ಈ ಬೆನ್ನಲ್ಲೇ ದರ್ಶನ್ ಅಭಿಮಾನಿಗಳಿಗೆ ದೊಡ್ಡ ಶಾಕ್ ಕೊಟ್ಟಿದ್ದಾರೆ. ದರ್ಶನ್ ಒಪ್ಪಿಕೊಂಡಿದ್ದ ಎರಡು ದೊಡ್ಡ ಸಿನಿಮಾಗಳನ್ನು ಕ್ಯಾನ್ಸಲ್ ಮಾಡಿದ್ದಾರೆ ಎನ್ನುವ ಸುದ್ದಿ ಬಂದಿದೆ. ಮೂಲಗಳ ಪ್ರಕಾರ ಅವರು ಈಗಾಗಲೇ ಇಬ್ಬರು ನಿರ್ಮಾಪಕರಿಂದ ಪಡೆದಿದ್ದ ಅಡ್ವಾನ್ಸ್ ಹಣವನ್ನು ವಾಪಸ್ ಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
ದರ್ಶನ್-ಪ್ರೇಮ್ ಸಿನಿಮಾ ಆಗಲ್ಲ
ದರ್ಶನ್‌ಗೆ ಸಾಕಷ್ಟು ಹೆಸರು ತಂದುಕೊಟ್ಟ ಸಿನಿಮಾ ಕರಿಯ ಪ್ರೇಮ್ ನಿರ್ದೇಶನದ ಈ ಸಿನಿಮಾ ಸ್ಯಾಂಡಲ್‌ವುಡ್‌ನಲ್ಲಿ ಹೊಸ ದಾಖಲೆ ಬರೆದಿತ್ತು. ಈ ಜೋಡಿ ಮತ್ತೊಮ್ಮೆ ಸಿನಿಮಾ ಮಾಡಲು ಮುಂದಾಗಿತ್ತು, ಕೆವಿಎನ್ ಪ್ರೊಡಕ್ಷನ್ ಈ ಜೋಡಿಯ ಸಿನಿಮಾಗೆ ಬಂಡವಾಳ ಹಾಕಲು ಮುಂದೆ ಬಂದಿತ್ತು, ಸಿನಿಮಾದ ಫಸ್ಟ್ ಲುಕ್ ಕೂಡ ಬಿಡುಗಡೆಯಾಗಿತ್ತು. ಈಗ ಬಂದಿರುವ ಮಾಹಿತಿ ಪ್ರಕಾರ ದರ್ಶನ್ ಈ ಸಿನಿಮಾವನ್ನು ಕೈಬಿಟ್ಟಿದ್ದು ನಿರ್ಮಾಪಕರಿಗೆ ಅಡ್ವಾನ್ಸ್ ಹಣ ವಾಪಸ್ ಕೊಟ್ಟಿದ್ದಾರೆ ಎನ್ನಲಾಗಿದೆ.
ಕರಿಯ ಸಿನಿಮಾ ಮಾಡಿದ್ದ ಈ ಜೋಡಿ ಸಿನಿಮಾ ಕನ್ನಡ ಇಂಡಸ್ಟ್ರಿಯಲ್ಲಿ ಹೊಸ ದಾಖಲೆ ಬರೆಯುತ್ತದೆ ಎಂದು ಅಭಿಮಾನಿಗಳು ನಿರೀಕ್ಷೆ ಮಾಡಿದ್ದರು. ಆದರೆ ದರ್ಶನ್ ಇದೀಗ ಈ ಸಿನಿಮಾವನ್ನೇ ಕೈಬಿಟ್ಟಿದ್ದಾರೆ ಎನ್ನಲಾಗಿದ್ದು ಅಭಿಮಾನಿಗಳು ನಿರಾಸೆಗೊಂಡಿದ್ದಾರೆ.
ಕೆವಿಎನ್ ಪ್ರೊಡಕ್ಷನ್ ಮಾತ್ರವಲ್ಲದೆ, ಸೂರಪ್ಪ ಬಾಬು ಅವರಿಂದಲೂ ಪಡೆದಿದ್ದ ಅಡ್ವಾನ್ಸ್ ಹಣವನ್ನು ದರ್ಶನ್ ವಾಪಸ್ ಮಾಡಿದ್ದಾರೆ ಎಂದು ಹೇಳಲಾಗಿದೆ. ದರ್ಶನ್ ಅಭಿಮಾನಿಗಳೇ ಈ ಮಾಹಿತಿಯನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸೂರಪ್ಪ ಬಾಬು ಜೊತೆಗಿನ ಸಿನಿಮಾ ಕೈಬಿಟ್ಟಿದ್ದು ಬೇಸರ ತರದೇ ಇದ್ದರೂ, ಪ್ರೇಮ್ ಜೊತೆಗಿನ ಸಿನಿಮಾ ಮಾಡಲೇಬೇಕು ಎಂದು ಅಭಿಮಾನಿಗಳು ಮನವಿ ಮಾಡಿದ್ದಾರೆ.
ಫೆಬ್ರವರಿ 16ರಂದು ದರ್ಶನ್ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದು, ಅಂದು ಅವರ ಮುಂದಿನ ಸಿನಿಮಾಗಳ ಬಗ್ಗೆ ಅಪ್‌ಡೇಟ್ ಸಿಗುವ ಸಾಧ್ಯತೆ ಇದೆ. ಕಾಟೇರ ಸಿನಿಮಾ ಸೂಪರ್ ಡೂಪರ್ ಹಿಟ್ ಆದ ಬಳಿಕ ದರ್ಶನ್ ಜನಪ್ರಿಯತೆ ಮತ್ತಷ್ಟು ಹೆಚ್ಚಾಗಿತ್ತು, ಈಗ ಅವರ ಕಾಲ್‌ಶೀಟ್‌ಗಾಗಿ ಹಲವು ನಿರ್ಮಾಪಕರು ಮುಂದಾಗಿದ್ದು ದರ್ಶನ್ ಯಾವ ಸಿನಿಮಾ ಒಪ್ಪಿಕೊಳ್ಳುತ್ತಾರೆ ನೋಡಬೇಕಿದೆ.












Click it and Unblock the Notifications