Deepika Das: ಸೈಲೆಂಟಾಗಿ ಮದುವೆಯಾಗಿ ಶಾಕ್ ಕೊಟ್ಟ ನಟಿ ದೀಪಿಕಾ ದಾಸ್
ನಾಗಿಣಿ ಧಾರವಾಹಿ ಮೂಲಕ ಭಾರಿ ಜನಪ್ರಿಯತೆ ಗಳಿಸಿದ್ದ ನಟಿ ದೀಪಿಕಾ ದಾಸ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಶುಕ್ರವಾರ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಮದುವೆ ಫೋಟೊಗಳನ್ನು ಹಂಚಿಕೊಂಡಿರುವ ಅವರು, ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದಾರೆ.
ರಿಯಾಲಿಟಿ ಶೋ ಬಿಗ್ ಬಾಸ್ 9ನೇ ಆವೃತ್ತಿಯಲ್ಲಿ ಭಾಗವಹಿಸಿದ್ದ ದೀಪಿಕಾ ದಾಸ್ ತಮ್ಮ ಜನಪ್ರಿಯತೆಯನ್ನು ಹೆಚ್ಚಿಸಿಕೊಂಡಿದ್ದರು. ಇನ್‌ಸ್ಟಾಗ್ರಾಂನಲ್ಲಿ ಫೋಟೊ ಹಂಚಿಕೊಂಡಿದ್ದರು ಮದುವೆಯಾದ ಹುಡುಗನ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ. ಮಿಸ್ಟರ್ & ಅಂಡ್ ಮಿಸಸ್ ಡಿ ಎಂದು ಮಾತ್ರ ಬರೆದುಕೊಂಡಿದ್ದಾರೆ.

ಮೂಲಗಳ ಪ್ರಕಾರ ನಟಿ ದೀಪಿಕಾ ದಾಸ್ ಗೋವಾದಲ್ಲಿ ಮದುವೆ ಮಾಡಿಕೊಂಡಿದ್ದಾರೆ. ವೆಲ್‌ಕಮ್ ಟು ಅಡ್ವೆಂಚರ್ ವರ್ಲ್ಡ್ ಎಂದು ಅವರು ಬರೆದುಕೊಂಡಿದ್ದಾರೆ. ವಧು ವರರ ಕುಟುಂಬಸ್ಥರು ಮಾತ್ರ ಈ ಮದುವೆಯಲ್ಲಿ ಭಾಗವಹಿಸಿದ್ದರು ಎಂದು ಹೇಳಲಾಗಿದೆ.
ಆರಂಭದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸಿದ್ದ ದೀಪಿಕಾ ದಾಸ್ ಬಳಿಕ ಕಿರುತೆರೆಯಲ್ಲಿ ನಾಗಿಣಿಯಾಗಿ ಕಾಣಿಸಿಕೊಂಡು ಜನಪ್ರಿಯತೆ ಗಳಿಸಿದ್ದರು. ಆ ಬಳಿಕ ಬಿಗ್‌ಬಾಸ್‌ನಲ್ಲಿ ಭಾಗವಹಿಸಿ ಜನಪ್ರಿಯತೆಯನ್ನು ಮತ್ತಷ್ಟು ಹೆಚ್ಚಿಸಿಕೊಂಡಿದ್ದರು.
ಇತ್ತೀಚೆಗೆ ಅಂತರಪಟ ಎನ್ನುವ ಧಾರವಾಹಿಯಲ್ಲಿ ಅತಿಥಿ ಪಾತ್ರದಲ್ಲಿ ಕೂಡ ಕಾಣಿಸಿಕೊಂಡಿದ್ದರು. ದೇಶ-ವಿದೇಶಗಳಲ್ಲಿ ಪ್ರವಾಸ ಮಾಡುತ್ತಿದ್ದ ದೀಪಿಕಾ ದಾಸ್ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪ್ರವಾಸದ ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದರು. ಈಗ ದಿಢೀರ್ ಎಂದು ಮದುವೆ ಚಿತ್ರಗಳನ್ನು ಹಂಚಿಕೊಂಡಿದ್ದು, ಶಾಕ್ ನೀಡಿದ್ದಾರೆ.












Click it and Unblock the Notifications