Deepika Padukone: ಹೆಣ್ಣು ಮಗುವಿನ ತಾಯಿಯಾದ ದೀಪಿಕಾ ಪಡುಕೋಣೆ

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹೆಣ್ಣು ಮಗುವಿನ ತಾಯಿಯಾಗಿದ್ದಾರೆ ಎಂದು ವರದಿಯಾಗಿದೆ. ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ದಂಪತಿ ಫೆಬ್ರವರಿಯಲ್ಲಿ ಪೋಷಕರಾಗುತ್ತಿರುವ ವಿಚಾರವನ್ನು ಬಹಿರಂಗಪಡಿಸಿದ್ದರು. ಐಎಎನ್‌ಎಸ್‌ ವರದಿ ಮಾಡಿರುವ ಪ್ರಕಾರ ದೀಪಿಕಾ ಪಡುಕೋಣೆ ಭಾನುವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ ಈ ಬಗ್ಗೆ ದಂಪತಿಗಳು ಇನ್ನೂ ಅಧಿಕೃತವಾಗಿ ಘೋಷಣೆ ಮಾಡಬೇಕಿದೆ.

ಶನಿವಾರದಂದು ಮುಂಬೈನ ಗಿರ್ಗಾಂವ್‌ನಲ್ಲಿರುವ ಹೆಚ್.ಎನ್.ರಿಲಯನ್ಸ್ ಆಸ್ಪತ್ರೆಯಲ್ಲಿ ನಟಿ ದೀಪಿಕಾ ಪಡುಕೋಣೆ ಕಾಣಿಸಿಕೊಂಡಿದ್ದರು. ಶುಕ್ರವಾರ ಆಸ್ಪತ್ರೆಗೆ ತೆರಳುವ ಮುನ್ನ ಅವರು ಕುಟುಂಬದ ಜೊತೆ ಮುಂಬೈನ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

Deepika Padukone and Ranveer Singh Welcome Their First Child a Baby Girl

2018 ರಲ್ಲಿ ಇಟಲಿಯ ಲೇಕ್ ಕೊಮೊದಲ್ಲಿ ಆಪ್ತ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಈ ಜೋಡಿ ವೈವಾವಿಕ ಜೀವನಕ್ಕೆ ಕಾಲಿಟ್ಟಿತ್ತು. ಬೆಂಗಳೂರು ಮತ್ತು ಮುಂಬೈನಲ್ಲಿ ಆರತಕ್ಷತೆ ಸಮಾರಂಭ ನಡೆದಿತ್ತು.

ಬೇಬಿ ಬಂಪ್ ಫೋಟೊ ವೈರಲ್

ಕೆಲವು ದಿನಗಳ ಹಿಂದಷ್ಟೇ ದಂಪತಿಗಳು ಬೇಬಿ ಬಂಪ್ ಫೋಟೊಗಳನ್ನು ಹಂಚಿಕೊಂಡಿದ್ದರು. ಈ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದವು. ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಮಗುವನ್ನು ಸ್ವಾಗತಿಸಲು ಖುಷಿಯಿಂದ ಸಜ್ಜಾಗಿರುವ ಫೋಟೊಗಳನ್ನು ನೋಡಿ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಅದಿತಿ ರಾವ್ ಹೈದರಿ, ಹೋಮಿ ಅದಾಜಾನಿಯಾ, ಅನೈತಾ ಶ್ರಾಫ್ ಅದಾಜಾನಿಯಾ ಸೇರಿದಂತೆ ಹಲವು ಬಾಲಿವುಡ್ ತಾರೆಯರು ಕಾಮೆಂಟ್ ಮೂಲಕ ಶುಭಾಶಯ ತಿಳಿಸಿದ್ದರು.

ಶುಭಾಶಯಗಳ ಮಹಾಪೂರ

ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹೆಣ್ಣು ಮಗು ಜನಿಸಿರುವ ಬಗ್ಗೆ ಪೋಸ್ಟ್ ಹಂಚಿಕೊಂಡಿದ್ದು, ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ. ಈ ಪೋಸ್ಟ್‌ಗೆ ಈವರೆಗೂ 43 ಲಕ್ಷಕ್ಕೂ ಅಧಿಕ ಲೈಕ್ಸ್ ಬಂದಿದ್ದು, ಲಕ್ಷಾಂತರ ಅಭಿಮಾನಿಗಳು ಸ್ಟಾರ್ ಜೋಡಿಗೆ ಶುಭಾಶಯ ತಿಳಿಸಿದ್ದಾರೆ.

ಹೆರಿಗೆಗೂ ಮುನ್ನ ದೀಪಿಕಾ ಪಡುಕೋಣೆ ತನ್ನ ಸ್ನೇಹಿತರು ಮತ್ತು ಕುಟುಂಬ ಸದಸ್ಯರೊಂದಿಗೆ ಕಾಣಿಸಿಕೊಂಡಿದ್ದರು. ಷಟ್ಲರ್ ಲಕ್ಷ್ಯ ಸೇನ್ ಅವರೊಂದಿಗೆ ಡಿನ್ನರ್ ಡೇಟ್‌ನಲ್ಲಿ ಕಾಣಿಸಿಕೊಂಡರು. ಪತಿ ರಣವೀರ್ ಸಿಂಗ್ ಅವರ ತಂದೆ ಜಗಜಿತ್ ಸಿಂಗ್ ಭಾವನಾನಿ, ತಾಯಿ ಅಂಜು ಭವ್ನಾನಿ ಮತ್ತು ಸಹೋದರಿ ರಿತಿಕಾ ಭಾವನಾನಿ ಸೇರಿದಂತೆ ಅವರ ಕುಟುಂಬದವರು ಕೂಡ ಜೊತೆಗಿದ್ದರು. ದೀಪಿಕಾ ಅವರ ತಂದೆ ಮತ್ತು ಬ್ಯಾಡ್ಮಿಂಟನ್ ಪಟು ಪ್ರಕಾಶ್ ಪಡುಕೋಣೆ ಲಕ್ಷ್ಯ ಸೇನ್ ಅವರಿಗೆ ತರಬೇತಿ ನೀಡಿದ್ದರು.

ದೀಪಿಕಾ ಪಡುಕೋಣೆ ಇತ್ತೀಚೆಗೆ ಕಲ್ಕಿ 2898 ಎಡಿ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಪ್ರಭಾಸ್, ಅಮಿತಾಬ್ ಬಚ್ಚನ್ ಮತ್ತು ಕಮಲ್‌ ಹಾಸನ್‌ ಜೊತೆ ದೀಪಿಕಾ ಪ್ರಮುಖ ಪಾತ್ರ ನಿಭಾಯಿಸಿದ್ದರು. ಬಿಡುಗಡೆಯಾಗಲಿರುವ ರೋಹಿತ್ ಶೆಟ್ಟಿಯವರ ಸಿಂಗಂ ಅಗೇನ್ ಚಿತ್ರದಲ್ಲೂ ಅವರು ಕಾಣಿಸಿಕೊಳ್ಳಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+