Deepika Padukone: ಮೊದಲ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ & ರಣವೀರ್ ಸಿಂಗ್
ಬಾಲಿವುಡ್ ತಾರಾ ಜೋಡಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಬಗ್ಗೆ ಸ್ವತಃ ದೀಪಿಕಾ ಪಡುಕೋಣೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
2018ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ದಂಪತಿ 2024ರ ಸೆಪ್ಟೆಂಬರ್‌ನಲ್ಲಿ ತಮ್ಮ ಚೊಚ್ಚಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ.

ದೀಪಿಕಾ ಪಡುಕೋಣೆ ಗರ್ಭಿಣಿಯಾಗಿರಬಹುದು ಎಂಬ ಊಹಾಪೋಹಗಳು ಹಬ್ಬಿದ್ದವು. ದೀಪಿಕಾ ಪಡುಕೋಣೆ ಇತ್ತೀಚಿಗೆ 77ನೇ ಬ್ರಿಟಿಷ್ ಅಕಾಡೆಮಿ ಫಿಲ್ಮ್ ಅವಾರ್ಡ್ಸ್ (BAFTA)ನಲ್ಲಿ ಭಾಗವಸಿದ್ದರು. ಈ ಕಾರ್ಯಕ್ರಮದಲ್ಲಿ ಅವರು ರೆಡ್ ಕಾರ್ಪೆಟ್‌ನಲ್ಲಿ ಸೀರೆಯನ್ನು ಧರಿಸಿ ಕಾಣಿಸಿಕೊಂಡಿದ್ದರು. ಈ ವೇಳೆ ದೀಪಿಕಾ ಪಡುಕೋಣೆ ತಾಯಿಯಾಗುತ್ತಿರಬಹುದು ಎಂದು ಹಲವರು ಊಹಿಸಿದ್ದರು.
ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಮದುವೆಯಾಗಿ 5 ವರ್ಷ ಕಳೆದಿದ್ದು, ರಣ್-ದೀಪ್ ಜೋಡಿ ಬಾಳಲ್ಲಿ ಹೊಸ ಅಧ್ಯಾಯ ಶುರುವಾಗಿದೆ. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ದಂಪತಿಗೆ ಬಾಲಿವುಡ್‌ನ ನಟ-ನಟಿಯರು ಸೇರಿದಂತೆ ಅಭಿಮಾನಿಗಳು ಶುಭಾಶಯಕೋರಿದ್ದಾರೆ.
ಇನ್ನು ದೀಪಿಕಾ ಪಡುಕೋಣೆ ಇತ್ತೀಚಿಗೆ ಇನ್ಸ್ಟಾಗ್ರಾಮ್‌ನಲ್ಲಿ ಬ್ರೇಕ್ ಫಾಸ್ಟ್ ಮಾಡುವ ಫೋಟೋವನ್ನು ಶೇರ್ ಮಾಡಿದ್ದರು. ಈ ಫೋಟೋಗಳು ನೋಡಿದ ನೆಟ್ಟಿಗರು ಇದು ಬಸರಿ ಬಯಕೇನಾ ಎಂದು ಕಮೆಂಟ್ ಮಾಡಿದ್ದರು. ಈ ವರ್ಷ ಪೋಷಕರಾಗುತ್ತೀರ ಎನ್ನುವ ಪ್ರಶ್ನೆಗೆ ದೀಪಿಕಾ ನಗುತ್ತಲೇ ಖಂಡಿತವಾಗಿ. ರಣವೀರ್ ಮತ್ತು ನಾನು ಮಕ್ಕಳನ್ನು ಪ್ರೀತಿಸುತ್ತೇವೆ. ನಾವು ನಮ್ಮದೇ ಆದ ಕುಟುಂಬವನ್ನು ಪ್ರಾರಂಭಿಸುವ ದಿನಕ್ಕಾಗಿ ನಾವು ಎದುರು ನೋಡುತ್ತಿದ್ದೇವೆ' ಎಂದಿದ್ದರು.












Click it and Unblock the Notifications