Martin Trailer: ಇದೇ ನಿಜವಾದ ಮಾಸ್; ಧ್ರುವ ಸರ್ಜಾ ನಮ್ ಡಿಎಸ್ ಬಾಸ್ ಅಂದ್ರು ಫ್ಯಾನ್ಸ್!
ಸ್ಯಾಂಡಲ್‌ವುಡ್‌ನಲ್ಲಿ ಬಹು ನಿರೀಕ್ಷೆ ಮೂಡಿಸಿರುವ ಧ್ರುವ ಸರ್ಜಾ ಅಭಿನಯದ ಮಾರ್ಟಿನ್ ಟ್ರೈಲರ್ ಬಿಡುಗಡೆಯಾಗಿದೆ. ಅಭಿಮಾನಿಗಳಿಗಾಗಿ ಬೆಂಗಳೂರಿನ ವೀರೇಶ್ ಚಿತ್ರಮಂದಿರದಲ್ಲಿ ಟ್ರೈಲರ್ ಪ್ರದರ್ಶನ ಮಾಡಲಾಗಿತ್ತು, ಟ್ರೈಲರ್ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಚಿತ್ರಮಂದಿರದಲ್ಲಿ ಕಿಕ್ಕಿರಿದು ಸೇರಿದ್ದರು.
ಮಾರ್ಟಿನ್ ಟ್ರೈಲರ್ ನೋಡಿದ ಅಭಿಮಾನಿಗಳು ಹುಚ್ಚೆದ್ದು ಕುಣಿದಿದ್ದಾರೆ. ಧ್ರುವ ಸರ್ಜಾ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಅಭಿಮಾನಿಗಳಿಗೆ ಇಷ್ಟವಾಗಿದೆ. ಚಿತ್ರದಲ್ಲಿ ಅದ್ದೂರಿತನವಿದ್ದು ಭಾರಿ ಬಜೆಟ್‌ನಲ್ಲಿ ಸಿನಿಮಾ ನಿರ್ಮಾಣ ಮಾಡಲಾಗಿದೆ.

ಟ್ರೈಲರ್ ಕಣ್ತುಂಬಿಕೊಂಡರ ಅಭಿಮಾನಿಗಳು ಸಖತ್ ಖುಷಿಯಾಗಿದ್ದು, ಮಾಸ್ ಟ್ರೈಲರ್ ಇಷ್ಟವಾಗಿದೆ ಎಂದಿದ್ದಾರೆ. ಧ್ರುವ ಸರ್ಜಾ ನಮ್ ಬಾಸ್ ಟ್ರೈಲರ್ ಫುಲ್ ಮಾಸ್ ಎಂದು ಕೂಗಿದ್ದಾರೆ.
ಡಿಎಸ್ ಬಾಸ್ ಎಂದ ಫ್ಯಾನ್ಸ್
ಅಭಿಮಾನಿಗಳು ಧ್ರುವ ಸರ್ಜಾ ಅವರನ್ನು ಡಿಎಸ್ ಬಾಸ್ ಎಂದು ಕರೆದಿದ್ದಾರೆ. ಸಿನಿಮಾ ಬಿಡುಗಡೆ ದಿನ ಜಾತ್ರೆ ಮಾಡುವುದಾಗಿ ಹೇಳಿದ್ದಾರೆ. ಟ್ರೈಲರ್ ನೋಡಿ ಥಿಯೇಟರ್ ನಿಂದ ಹೊರ ಬಂದ ಅಭಿಮಾನಿಗಳು ವಿವಿಧ ಮಾಧ್ಯಮಗಳಿಗೆ ರಿಯಾಕ್ಷನ್ ಕೊಟ್ಟಿದ್ದಾರೆ.
ಇಷ್ಟು ವರ್ಷ ಕಾದಿದ್ದಕ್ಕೆ ಸಾರ್ಥಕವಾಗಿದೆ. ಟ್ರೈಲರ್ ಅದ್ದೂರಿಯಾಗಿ ಮೂಡಿ ಬಂದಿದ್ದು, ಸಿನಿಮಾ ಬಗ್ಗೆ ಕುತೂಹಲ ಹೆಚ್ಚಾಗಿದೆ. ಆಕ್ಷನ್ ದೃಶ್ಯಗಳಲ್ಲಿ ಧ್ರುವ ಸರ್ಜಾ ಅಬ್ಬರಿಸಿದ್ದು, ಆಕ್ಷನ್ ಸಿನಿಮಾ ಪ್ರಿಯರಿಗೆ, ಅಭಿಮಾನಿಗಳಿಗೆ ಸಿನಿಮಾ ಭರ್ಜರಿ ಮನರಂಜನೆ ನೀಡುವ ಭರವಸೆ ಮೂಡಿಸಿದೆ.
ದರ್ಶನ್ ಅಭಿಮಾನಿಗಳಿಗೆ ಉತ್ತರ!
ನಟ ದರ್ಶನ್ ಬಂಧನವಾದ ಬಳಿಕ ಬೇರೆ ಯಾವ ನಟರ ಸಿನಿಮಾವನ್ನು ನೋಡಲ್ಲ ಎಂದು ಕೆಲವು ದರ್ಶನ್ ಅಭಿಮಾನಿಗಳು ಹೇಳಿದ್ದರು. ಸಾಮಾಜಿಕ ಜಾಲತಾಣದಲ್ಲಿ ಕೂಡ ಬೇರೆ ಯಾವ ನಟರ ಸಿನಿಮಾಗಳನ್ನು ನೋಡಬೇಡಿ ಎಂದು ದರ್ಶನ್ ಅಭಿಮಾನಿಗಳಲ್ಲಿ ಮನವಿ ಮಾಡಿದ್ದರು.
ಇದು ಬೇರೆ ನಟರ ಅಭಿಮಾನಿಗಳ ಕೋಪಕ್ಕೆ ಕಾರಣವಾಗಿತ್ತು. ಮೊದಲು ಕನ್ನಡ ಸಿನಿಮಾಗಳ ಅಭಿಮಾನಿಗಳಾಗಬೇಕು ಎಂದಿದ್ದರು. ಈಗ ಟ್ರೈಲರ್ ನೋಡಿದ ಧ್ರುವ ಸರ್ಜಾ ಫ್ಯಾನ್ಸ್, ಈ ಸಿನಿಮಾ ಗಳಿಕೆಯಲ್ಲಿ ದಾಖಲೆ ಬರೆಯಲಿದೆ ಎಂದು ಅಂದಾಜಿಸಿದ್ದಾರೆ.
ದರ್ಶನ್ ಅಭಿಮಾನಿಗಳ ಮಾತನ್ನು ಸುಳ್ಳಾಗಿಸಲು ಮುಂದಾಗಿರುವ ಧ್ರುವ ಸರ್ಜಾ ಫ್ಯಾನ್ಸ್ ಸಿನಿಮಾ ಬಿಡುಗಡೆ ದಿನ ಚಿತ್ರಮಂದಿರಗಳಲ್ಲಿ ಜಾತ್ರೆ ಮಾಡುವುದಾಗಿ ಹೇಳಿದ್ದಾರೆ.
ಮಾರ್ಟಿನ್ ಸಿನಿಮಾ ಬಗ್ಗೆ
ಮಾರ್ಟಿನ್ ಸಿನಿಮಾಗೆ ಎಪಿ ಅರ್ಜುನ್ ಆಕ್ಷನ್ ಕಟ್ ಹೇಳಿದ್ದಾರೆ. ಅರ್ಜುನ್ ಸರ್ಜಾ ಸಿನಿಮಾಗೆ ಕತೆ ಚಿತ್ರಕತೆ ಮಾಡಿದ್ದಾರೆ. ಉದಯ್ ಕೆ ಮೆಹ್ತಾ ಮತ್ತು ಸೂರಜ್ ಉದಯ್ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ರವಿ ಬಸ್ರೂರು ಹಿನ್ನಲೆ ಸಂಗೀತ ನೀಡಿದ್ದು. ಮಣಿ ಶರ್ಮಾ ಸಂಗೀತ ಚಿತ್ರಕ್ಕಿದೆ.
ಅಕ್ಟೋಬರ್ 11 ರಂದು ಸಿನಿಮಾ ವಿಶ್ವದಾದ್ಯಂತ ತೆರೆ ಕಾಣಲಿದೆ. ಕನ್ನಡ, ತೆಲುಗು, ತಮಿಳು, ಹಿಂದಿ, ಇಂಗ್ಲಿಷ್, ಅರೇಬಿಕ್, ಜಪಾನ್ ಸೇರಿದಂತೆ ಅನೇಕ ಭಾಷೆಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.












Click it and Unblock the Notifications