ದರ್ಶನ್ ಬಂಧನದ ಬಗ್ಗೆ ರಾಮ್ ಗೋಪಾಲ್ ವರ್ಮಾ ಹೇಳಿದ್ದೇನು?
ನಟ ದರ್ಶನ್ ಅಭಿಮಾನಿ ಕೊಲೆ ಪ್ರಕರಣದಲ್ಲೇ ಪೊಲೀಸರ ಅತಿಥಿಯಾಗಿದ್ದು ಸದ್ಯ ಸಾಕಷ್ಟು ಸುದ್ದಿಯಾಗುತ್ತಿದೆ. ಕರ್ನಾಟಕ ಮಾತ್ರವಲ್ಲ ಈಗ ಹೊರ ರಾಜ್ಯಗಳಲ್ಲೂ ದರ್ಶನ್ ಬಂಧನ ಸಾಕಷ್ಟು ಗಮನ ಸೆಳೆಯುತ್ತಿದೆ.
ತೆಲುಗು, ಹಿಂದಿ ಸಿನಿಮಾ ನಿರ್ದೇಶಕ ರಾಮ್‌ಗೋಪಾಲ್ ವರ್ಮಾ ದರ್ಶನ್ ಬಂಧನದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಅಭಿಮಾನಿಗಳಿಗೆ ಬುದ್ದಿ ಹೇಳಿರುವ ಅವರು, ಇದೊಂದು ಸಿಂಡ್ರೋಮ್ ಎಂದಿದ್ದಾರೆ.

ಟ್ವೀಟ್ ಮಾಡಿರುವ ಅವರು, "ಒಬ್ಬ ಸ್ಟಾರ್ ಒಬ್ಬ ಡೈ ಹಾರ್ಡ್ ಫ್ಯಾನ್ ಅನ್ನು ತನ್ನ ವೈಯಕ್ತಿಕ ಜೀವನದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದ ಇನ್ನೊಬ್ಬ ಡೈ ಹಾರ್ಡ್ ಫ್ಯಾನ್ ಅನ್ನು ಕೊಲ್ಲಲು ಬಳಸಿಕೊಂಡಿದ್ದಾನೆ, ಇದು ಸ್ಟಾರ್ ಆರಾಧನಾ ಸಿಂಡ್ರೋಮ್‌ನ ವಿಲಕ್ಷಣ ಉದಾಹರಣೆಯಾಗಿದೆ." ಎಂದು ಹೇಳಿದ್ದಾರೆ.
ಮತ್ತೊಂದು ಟ್ವೀಟ್‌ನಲ್ಲಿ "ಚಿತ್ರ ನಿರ್ಮಾಪಕರು ಚಿತ್ರಕಥೆಯನ್ನು ಅಂತಿಮಗೊಳಿಸಿದ ನಂತರವೇ ಚಿತ್ರೀಕರಣವನ್ನು ಪ್ರಾರಂಭಿಸಬೇಕು ಆದರೆ ಚಿತ್ರೀಕರಣ ನಡೆಯುತ್ತಿರುವಾಗ ನಿರ್ಮಾಪಕರು ಇನ್ನೂ ಸಾಕಷ್ಟು ಬಾರಿ ಬರೆಯುತ್ತಿದ್ದಾರೆ ಆದರೆ ದರ್ಶನ್ ಅವರ ಪ್ರಕರಣದಲ್ಲಿ ಚಿತ್ರ ಈಗಾಗಲೇ ಬಿಡುಗಡೆಯಾದ ನಂತರ ಚಿತ್ರಕಥೆ ಬರೆಯಲು ಪ್ರಾರಂಭಿಸಿತು." ಎಂದಿದ್ದಾರೆ.
A star using one die hard fan to kill another die hard fan who was interfering in his personal life is a fit example of the bizarreness of the star worship syndrome ..Fans wanting to order how their stars should run their lives is a unavoidable side effect of the same syndrome
— Ram Gopal Varma (@RGVzoomin) June 13, 2024
ನಷ್ಟದ ಭೀತಿಯಲ್ಲಿ ನಿರ್ಮಾಪಕರು
ದರ್ಶನ್ ಸ್ಯಾಂಡಲ್‌ವುಡ್‌ನಲ್ಲಿ ದೊಡ್ಡ ಸ್ಟಾರ್, ಕಾಟೇರ ಸಿನಿಮಾ ಯಶಸ್ಸಿನ ಬಳಿಕ ಸಾಲು ಸಾಲು ನಿರ್ಮಾಪಕರು ಅವರ ಮೇಲೆ ಹಣ ಹೂಡಲು ಮುಂದೆ ಬಂದಿದ್ದರು. ಸದ್ಯ ಪ್ರಕಾಶ್ ನಿರ್ದೇಶನದ ಡೆವಿಲ್ ಸಿನಿಮಾದಲ್ಲಿ ದರ್ಶನ್ ನಟಿಸುತ್ತಿದ್ದರು. ಡಿಸೆಂಬರ್ ನಲ್ಲಿ ಸಿನಿಮಾ ಬಿಡುಗಡೆ ಮಾಡುವುದಾಗಿ ಘೋಷಣೆಯಾಗಿತ್ತು. ಈಗ ದರ್ಶನ್ ಬಂಧಿಸಿರುವುದು ನಿರ್ಮಾಪಕರಿಗೆ ನಷ್ಟದ ಭೀತಿ ಉಂಟು ಮಾಡಿದೆ.
ಹಲವು ನಿರ್ಮಾಪಕರು ಈಗಾಗಲೇ ದರ್ಶನ್ ಜೊತೆ ಸಿನಿಮಾ ಮಾಡಲು ಅಡ್ವಾನ್ಸ್ ಕೊಟ್ಟಿದ್ದರು. ಅವರು ಕೂಡ ಈಗ ಕಂಗಾಲಾಗಿದ್ದಾರೆ. ಡೆವಿಲ್ ಸಿನಿಮಾ ಶೂಟಿಂಗ್ ಈಗ ಅರ್ಧಕ್ಕೆ ನಿಂತಿದ್ದು ನಿರ್ಮಾಪಕರಿಗೆ ನಷ್ಟ ಉಂಟು ಮಾಡಿದೆ.
ಡೆವಿಲ್ ಬಳಿಕ ದರ್ಶನ್ ಪ್ರೇಮ್ ಜೊತೆ ಸಿನಿಮಾ ಮಾಡಬೇಕಿತ್ತು, ಬಳಿಕ ಸಿಂಧೂರ ಲಕ್ಷ್ಮಣ ಸಿನಿಮಾ ಕೂಡ ಘೋಷಣೆಯಾಗಿತ್ತು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications