Shivaraj Kumar: ಶಿವರಾಜ್‌ಕುಮಾರ್‌ಗೆ ಆಪರೇಷನ್‌; ಬೇಗ ಗುಣಮುಖರಾಗಿ ಎಂದ ಡಿಕೆ ಶಿವಕುಮಾರ್

ಹ್ಯಾಟ್ರಿಕ್ ಹೀರೋ ಶಿವರಾಜ್‌ ಕುಮಾರ್ ಶಸ್ತ್ರಚಿಕಿತ್ಸೆಗಾಗಿ ಅಮೆರಿಕಾಗೆ ತೆರಳಿದ್ದಾರೆ. ಇಂದು ಅವರಿಗೆ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದು ನಾಡಿನಾದ್ಯಂತ ಅಭಿಮಾನಿಗಳು ಅವರು ಬೇಗ ಗುಣಮುಖರಾಗಿ ಬರಲಿ ಎಂದು ದೇವರಿಗೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಅನೇಕ ನಟ, ನಟಿಯರು, ರಾಜಕೀಯ ನಾಯಕರು ಕೂಡ ಶಿವರಾಜ್‌ಕುಮಾರ್ ಬೇಗ ಗುಣಮುಖರಾಗಿ ಬರಲಿ ಎಂದು ಪ್ರಾರ್ಥಿಸಿದ್ದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ಟ್ವೀಟ್ ಮಾಡುವ ಮೂಲಕ ಶಿವರಾಜ್‌ಕುಮಾರ್ ಗುಣಮುಖರಾಗಿ ಬರಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ.

ಅಮೆರಿಕಾದ ಫ್ಲೊರಿಡಾದಲ್ಲಿರುವ ಮಿಯಾಮಿ ಆಸ್ಪತ್ರೆಯಲ್ಲಿ ಶಿವರಾಜ್‌ಕುಮಾರ್ ಅವರಿಗೆ ಸರ್ಜರಿ ಮಾಡಲಾಗಿದೆ. ಡಾ. ಮುರುಗೇಶ್ ನೇತೃತ್ವದದಲ್ಲಿ ಶಸ್ತ್ರಚಿಕಿತ್ಸೆ ನಡೆದಿದ್ದು, ಶಿವಣ್ಣ ಅವರು ಇನ್ನಷ್ಟು ದಿನಗಳು ಆಸ್ಪತ್ರೆಯಲ್ಲಿ ಇರಲಿದ್ದಾರೆ. ಡಿಸೆಂಬರ್ 18ರಂದು ಅಮೆರಿಕಾಗೆ ತೆರಳಿದ್ದ ಶಿವರಾಜ್‌ಕುಮಾರ್ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಇನ್ನೂ ಒಂದು ತಿಂಗಳು ಅಲ್ಲೇ ಇರಲಿದ್ದಾರೆ.

DK Shivakumar Wishes Shivaraj Kumar a Speedy Recovery

2025ರ ಜನವರಿ 25ರಂದು ಅಮೆರಿಕದಿಂದ ಹೊರಡಲಿದ್ದು ಮರುದಿನ ಬೆಂಗಳೂರಿಗೆ ಆಗಮಿಸಲಿದ್ದಾರೆ. ಹಲವು ತಿಂಗಳಿನಿಂದ ಅವರಿಗೆ ಆರೋಗ್ಯ ಸಮಸ್ಯೆಯಾಗಿದ್ದು ವೈದ್ಯರ ಬಳಿ ಚಿಕಿತ್ಸೆ ಪಡೆಯುತ್ತಿದ್ದರು. ಶಸ್ತ್ರಚಿಕಿತ್ಸೆ ಅಗತ್ಯವಿರುವ ಕಾರಣ ಅವರು ಯುಎಸ್‌ಗೆ ಹೋಗಿದ್ದಾರೆ.

ಡಿಕೆ ಶಿವಕುಮಾರ್ ಪ್ರಾರ್ಥನೆ

ಶಿವರಾಜ್‌ಕುಮಾರ್ ಅವರ ಆರೋಗ್ಯ ಸುಧಾರಿಸಲಿ ಎಂದು ಹಾರೈಸಿ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. "ನಮ್ಮ ನಿಮ್ಮೆಲ್ಲರ ನೆಚ್ಚಿನ ನಟ, ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಅವರು ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದು, ಅವರು ಶೀಘ್ರವೇ ಗುಣಮುಖರಾಗಲಿ ಎಂದು ಭಗವಂತನನ್ನು ಪ್ರಾರ್ಥಿಸುತ್ತೇನೆ. ನನ್ನ ನೆರೆಹೊರೆಯವರೇ ಆದ ಶಿವರಾಜ್‌ ಕುಮಾರ್‌ ಅವರು ಗಂಭೀರ ಕಾಯಿಲೆಗೆ ಒಳಗಾಗಿದ್ದಾರೆ ಎಂದು ತಿಳಿದಾಗ ದುಃಖವಾಯಿತು. ಆದರೆ, ಅವರ ಜೀವನೋತ್ಸಾಹ, ಎಲ್ಲವನ್ನೂ ಗೆಲ್ಲಬಲ್ಲೆ ಎನ್ನುವ ಧೈರ್ಯ ನಿಜಕ್ಕೂ ಎಲ್ಲರಿಗೂ ಸ್ಫೂರ್ತಿದಾಯಕ. ಭಗವಂತ ಅವರಿಗೆ ಇನ್ನಷ್ಟು ಚೈತನ್ಯ ನೀಡಿ ಕಾಪಾಡಲಿ." ಎಂದು ಶಿವರಾಜ್‌ಕುಮಾರ್ ಜೊತೆಗಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ.

ರಾಜ್ಯಾದ್ಯಂತ ಪ್ರಾರ್ಥನೆ

ಶಿವರಾಜ್‌ಕುಮಾರ್ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದು ಅವರು ಶೀಘ್ರದಲ್ಲೇ ಗುಣಮುಖರಾಗಿ ಬರಲಿ ಎಂದು ಪ್ರಾರ್ಥಿಸಿ ರಾಜ್ಯದ ಹಲವು ದೇವಸ್ಥಾನಗಳಲ್ಲಿ ಹೋಮ ಹವನ ಮಾಡಲಾಗಿದೆ. ಅಭಿಮಾನಿಗಳು ತಮ್ಮ ಇಷ್ಟದ ದೇವರಿಗೆ ಪೂಜೆ ಸಲ್ಲಿಸಿ ಶಿವಣ್ಣ ಬೇಗ ಹುಷಾರಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ.

ಭೈರತಿ ರಣಗಲ್‌ ಒಟಿಟಿಗೆ

ಶಿವರಾಜ್‌ಕುಮಾರ್ ಅಭಿನಯದ ಭೈರತಿ ರಣಗಲ್ ಸಿನಿಮಾ ನವೆಂಬರ್ 25 ರಂದು ಬಿಡುಗಡೆಯಾಗಿ ಭರ್ಜರಿ ಯಶಸ್ಸು ಕಂಡಿತ್ತು. ಇನ್ನೂ ಚಿತ್ರಮಂದಿರಗಳಲ್ಲಿ ಯಶಸ್ವೀ ಪ್ರದರ್ಶನ ಕಾಣುತ್ತಿದ್ದು ಒಟಿಟಿಗೆ ಲಗ್ಗೆಯಿಡಲು ಸಜ್ಜಾಗಿದೆ. ಡಿಸೆಂಬರ್ 25ರಿಂದ ಅಮೇಜಾನ್‌ ಪ್ರೈಂನಲ್ಲಿ ಬಿಡುಗಡೆಯಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+