Darshan Thoogudeepa: ಕೋಟ್ಯಾಧಿಪತಿ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿ ಖರ್ಚು ಮಾಡಿದ ಹಣವೆಷ್ಟು ಗೊತ್ತಾ?-ಇಲ್ಲಿದೆ ಮಾಹಿತಿ
Darshan Thoogudeepa: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ನನ್ನು ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಹಿನ್ನೆಲೆ ಪೊಲೀಸರು ಬಳ್ಳಾರೀ ಜೈಲಿಗೆ ಶಿಫ್ಟ್ ಮಾಡಿದ್ದರು. ಹಾಗಾದರೆ ಕೋಟ್ಯಾಧಿಪತಿ ದರ್ಶನ್ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ಇದುವರೆಗೂ ಪಿಪಿಸಿ ಅಕೌಂಟ್‌ನಲ್ಲಿ ಎಷ್ಟು ಹಣ ಖರ್ಚು ಮಾಡಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಪರಪ್ಪನ ಅಗ್ರಹಾರದಲ್ಲಿ ರೆಸಾರ್ಟ್ ರೀತಿಯಲ್ಲಿ ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗನ ಜೊತೆ ರೌಡ್ ಟೇಬಲ್ ಪಾರ್ಟಿ ಮಾಡಿದ್ದು, ಈ ವೇಳೆ ಒಂದು ಕೈಯಲ್ಲಿ ಕಾಫಿ ಮಗ್, ಮತ್ತೊಂದು ಕೈಯಲ್ಲಿ ಸಿಗರೇಟ್ ಹಿಡಿದು ಹರಟೆ ಹೊಡೆಯುತ್ತಿರುವ ಫೋಟೋ ವೈರಲ್ ಆಗಿತ್ತು. ಅಷ್ಟೇ ಅಲ್ಲದೇ, ವಿಐಪಿ ಸೆಲ್‌ನಿಂದಲೇ ವಿಡಿಯೋ ಕಾಲ್‌ನಲ್ಲಿ ಮಾತನಾಡಿರುವ ವಿಡಿಯೋ ಕೂಡ ವೈರಲ್ ಆಗಿದ್ದು, ಇದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.

ಬಳಿಕ ಎಚ್ಚೆತ್ತ ಪೊಲೀಸರು 9 ಮಂದಿ ಪರಪ್ಪನ ಅಗ್ರಹಾರದ ಜೈಲಾಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದರು. ಬಳಿಕ ಕೋರ್ಟ್ ಆದೇಶದ ಮೇರೆಗೆ ಪೊಲೀಸರು ನಟ ದರ್ಶನ್‌ನನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿದ್ದರು. ಅಷ್ಟದಾರೂ ಕೂಡ ನಟ ದರ್ಶನ್ ಕೊಬ್ಬು ಮಾತ್ರ ಕಡಿಮೆಯಾಗಿಲ್ಲ. ಯಾವುದೇ ಪಶ್ಚಾತಾಪದ ಲಕ್ಷಣಗಳು ಮುಖದಲ್ಲಿ ಕಾಣುತ್ತಿಲ್ಲ.
ಇದೀಗ ಕೋಟ್ಯಾಧಿಪತಿ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿ 9 ದಿನದಲ್ಲಿ ಖರ್ಚು ಮಾಡಿರುವ ಹಣ ಎಷ್ಟು ಎನ್ನುವ ಮಾಹಿತಿ ವೈರಲ್ ಆಗುತ್ತಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಸೆಂಟ್ರಲ್ ಜೈಲಿಗೆ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್‌ನನ್ನು ಶಿಫ್ಟ್ ಮಾಡಲಾಗಿತ್ತು. ಈ ವೇಳೆ ದರ್ಶನ್‌ನ ಪಿಪಿಸಿ ಖಾತೆಯಲ್ಲಿ 35,000 ರೂಪಾಯಿ ಹಣ ಇತ್ತು.
ಇದರಲ್ಲಿ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ 9 ದಿನಗಳಲ್ಲಿ ನಟ ದರ್ಶನ್ 735 ರೂಪಾಯಿ ಹಣವನ್ನು ಖರ್ಚು ಮಾಡಿದ್ದಾರೆ. ಈ ಪೈಕಿ ಬಹುತೇಕ ಹಣವನ್ನು ಕಾಫಿ, ಟೀಗಾಗಿ ಖರ್ಚು ಮಾಡಿದ್ದಾರೆ ಎಂದು ಜೈಲು ಕ್ಯಾಂಟೀನ್ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ.
ಪ್ರತಿ ಕೈದಿ ಮತ್ತು ವಿಚಾರಣಾಧೀನ ಕೈದಿಗೆ ಜೈಲಿನಲ್ಲಿ ಪ್ರತ್ಯೇಕ ಪಿಪಿಸಿ ಖಾತೆ ಇರುತ್ತದೆ. ಪಿಪಿಸಿನಲ್ಲಿ ಕೈದಿ ಹಣ ಬಳಸಿಕೊಳ್ಳಬಹುದಾಗಿದೆ. ಹಾಗೆಯೇ ನಡ ದರ್ಶನ್ 9 ದಿನದಲ್ಲಿ ಅವರ ಖಾತರಯಿಂದ 735 ರೂಪಾಯಿ ಹಣವನ್ನು ಬಳಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ದರ್ಶನ್ ಪರಪ್ಪನ ಅಗ್ರಹಾರ ಜೈಲಿಗೆ ಹೋದಾಗ ಪಿಪಿಸಿ ಹಣ ಇಟ್ಟಿದ್ದರು. ಬಳಿಕ ಬಳ್ಳಾರಿ ಜೈಲಿಗೆ ಶಿಫ್ಟ್ ಆದಾಗ ಆ ಹಣವನ್ನು ಸಹ ಬಳ್ಳಾರಿ ಜೈಲಿಗೆ ವರ್ಗಾಹಿಸಲಾಗಿತ್ತು ಎಂದು ತಿಳಿದುಬಂದಿದೆ.












Click it and Unblock the Notifications