Drone Prathap sick: ಬಿಗ್‌ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್‌ಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು!
ಬಿಗ್‌ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್‌ಗೆ ಅನಾರೋಗ್ಯ ಉಂಟಾಗಿದ್ದು ಆಸ್ಪತ್ರೆಗೆ ದಾಖಲಾಗಿರುವ ಮಾಹಿತಿ ಲಭ್ಯವಾಗಿದೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಾಪ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನುವ ವದಂತಿ ಹಬ್ಬಿದೆ.
ಬಿಗ್‌ಬಾಸ್ ಮನೆಯಲ್ಲಿ ಉತ್ತಮ ಸ್ಪರ್ಧಿ ಎಂದೆನಿಸಿಕೊಂಡಿರುವ ಡ್ರೋನ್ ಪ್ರತಾಪ್ ಕರುನಾಡಿನ ಜನಮನ ಗೆದ್ದಿರುವ ಸ್ಪರ್ಧಿ. ಕನ್ನಡ ಬಿಗ್‌ಬಾಸ್‌ನಲ್ಲಿ ಉತ್ತಮ ಆಟಗಾರರಾಗಿ ವಿಜೇತರಾಗಬೇಕು ಎನ್ನುವ ಕನಸು ಹೊಂದಿರುವ ಅವರನ್ನು ಬಿಗ್‌ಬಾಸ್ ಮನೆಯಲ್ಲಿ ದ್ವೇಷಿಸುವವರೂ ಇದ್ದಾರೆ.

ಅವರ ಮುಂದೆ ಏರು ಧ್ವನಿಯಲ್ಲಿ ಮಾತನಾಡುವುದು, ಅವರ ವಿರುದ್ಧ ದ್ವೇಷ ಕಾರುವುದು, ಪಿತೂರಿ ಮಾಡುವುದು ಎಲ್ಲವೂ ಬಿಗ್‌ಬಾಸ್ ಮನೆಯಲ್ಲಿ ನಡೆಯುತ್ತಿರುವುದನ್ನು ಜನ ನೋಡುತ್ತಿದ್ದಾರೆ. ಇತ್ತೀಚೆಗೆ ವರ್ಷಗಳಿಂದು ಅವರೊಂದಿಗೆ ಮಾತು ಬಿಟ್ಟಿದ್ದ ತಂದೆ ಮರಿಮಾದಯ್ಯ ಅವರು ಬಿಗ್‌ಬಾಸ್ ಮನೆಗೆ ಹೋಗಿ ಮಗನನ್ನು ಅಪ್ಪಿಕೊಂಡು ಸಾಂತ್ವಾನ ಹೇಳಿದ್ದರು. ಮಾತ್ರವಲ್ಲದೆ ಅವರ ತಾಯಿ ಕೂಡ ಅವರಿಗೆ ಇಷ್ಟವಾದ ಮುದ್ದೆಯನ್ನು ತಯಾರಿಸಿಕೊಂಡು ಹೋಗಿದ್ದರು.
ಆದರೀಗ ಪ್ರತಾಪ್ ಅವರಿಗೆ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದು ದಿನ ವಿಶ್ರಾಂತಿ ಪಡೆಯುವಂತೆಯೂ ಅವರಿಗೆ ವೈದ್ಯರು ತಿಳಿಸಿದ್ದಾರೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ಪ್ರತಾಪ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನುವ ಗುಮಾನಿ ಹರಡಿದೆ. ಇದಕ್ಕೆ ಕೆಲವರು ಡ್ರೋನ್ ಪ್ರತಾಪ್‌ಗೆ ಆರೋಗ್ಯದಲ್ಲಿ ಏರುಪೇರಾಗಲು ಮನೆಯ ಇನ್ನಿತರ ಸದಸ್ಯರೇ ಕಾರಣ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಆದರೆ ಬಿಗ್‌ಬಾಸ್ ಮೂಲಗಳು ಇದನ್ನು ನಿರಾಕರಿಸಿವೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡ ಪ್ರತಾಪ್ ತಂದೆ ಮರಿಮಾದಯ್ಯ, 'ಮಗನಿಗೆ ಫುಡ್ ಪಾಯಿಸನ್ ಆಗಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಶ್ರಾಂತಿ ಬಳಿಕ ಮತ್ತೆ ಬಿಗ್‌ಬಾಸ್ ಮನೆಗೆ ವಾಪಾಸ್ ಹೋಗುತ್ತಾರೆ' ಎಂದು ತಿಳಿಸಿದ್ದಾರೆ.
-
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್ -
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
Vastu Tips: ಈ ವಾಸ್ತು ಟಿಪ್ಸ್ ಪಾಲಿಸಿದರೆ ಧನ ಮತ್ತು ಯಶಸ್ಸು ನಿಮ್ಮದೇ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
Vastu Plants: ಮನೆಯಲ್ಲೇ ಐಶ್ವರ್ಯ ಹೆಚ್ಚಿಸಬೇಕಾ? ಈ 5 ಸಸ್ಯಗಳನ್ನು ಬೆಳೆಸಿ -
ಬೇಸಿಗೆಯಲ್ಲಿ ತಣ್ಣೀರಿನ ಸ್ನಾನ ಮಾಡುವ ಮೊದಲು ತಿಳಿದುಕೊಳ್ಳಬೇಕಾದ ವಿಷಯಗಳು -
Vastu Tips: ವಾಸ್ತು ಪ್ರಕಾರ ನಮ್ಮ ಮನೆಯ ಸುತ್ತಮುತ್ತಲಿನ ವಿನ್ಯಾಸ ಹೇಗಿರಬೇಕು -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ












Click it and Unblock the Notifications