Duniya Vijay Divorce: ನಟ ದುನಿಯಾ ವಿಜಯ್-ನಾಗರತ್ನ ವಿಚ್ಛೇದನ ಮಂಜೂರು, ₹2 ಕೋಟಿ ಜೀವನಾಂಶಕ್ಕೆ ಹೈಕೋರ್ಟ್ ಆದೇಶ
Duniya Vijay Divorce: ಸ್ಯಾಂಡಲ್ವುಡ್ ನಟ ' ದುನಿಯಾ' ವಿಜಯ್ ಹಾಗೂ ಅವರ ಪತ್ನಿ ನಾಗರತ್ನ ಅವರ ಹಲವು ವರ್ಷಗಳ ದಾಂಪತ್ಯ ಸಂಬಂಧಕ್ಕೆ ಕೊನೆಗೂ ಕಾನೂನಾತ್ಮಕವಾಗಿ ತೆರೆ ಬಿದ್ದಿದೆ. ದಂಪತಿಯ ವಿಚ್ಛೇದನ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು ವಿಚ್ಛೇದನ ಮಂಜೂರು ಮಾಡಿ ಮಹತ್ವದ ಆದೇಶ ಹೊರಡಿಸಿದೆ.
ವಿಜಯ್ ಹಾಗೂ ಅವರ ಪತ್ನಿ ನಾಗರತ್ನ ಅವರ ನಡುವೆ ದೀರ್ಘಕಾಲದಿಂದ ನಡೆಯುತ್ತಿದ್ದ ಕಾನೂನು ಹೋರಾಟಕ್ಕೆ ಅಂತ್ಯ ಕಂಡಂತಾಗಿದೆ. ನ್ಯಾಯಮೂರ್ತಿ ಡಿ.ಕೆ. ಸಿಂಗ್ ಹಾಗೂ ನ್ಯಾಯಮೂರ್ತಿ ಶಾಂತಿಭೂಷಣ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಪ್ರಕರಣದ ವಿಚಾರಣೆ ನಡೆಸಿ ಈ ಆದೇಶ ನೀಡಿದೆ ಎಂದು ತಿಳಿದುಬಂದಿದೆ.

Duniya Vijay Divorce:₹2 ಕೋಟಿ ಜೀವನಾಂಶ
ವಿಚ್ಛೇದನ ಮಂಜೂರು ಮಾಡುವುದರ ಜೊತೆಗೆ, ಪತ್ನಿ ನಾಗರತ್ನ ಅವರಿಗೆ ₹2 ಕೋಟಿ ರೂಪಾಯಿ ಜೀವನಾಂಶ (Alimony) ಪಾವತಿಸುವಂತೆ ನಟ ದುನಿಯಾ ವಿಜಯ್ ಅವರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಪ್ರಕರಣದ ಎಲ್ಲ ಅಂಶಗಳನ್ನು ಪರಿಗಣಿಸಿದ ನ್ಯಾಯಪೀಠವು, ವಿಜಯ್ ಅವರ ಸಾಮಾಜಿಕ ಸ್ಥಾನಮಾನ, ಆರ್ಥಿಕ ಪರಿಸ್ಥಿತಿ ಹಾಗೂ ಪತ್ನಿಯ ಮುಂದಿನ ಜೀವನದ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಜೀವನಾಂಶದ ಮೊತ್ತವನ್ನು ನಿಗದಿಪಡಿಸಿದೆ ಎಂದು ತಿಳಿದುಬಂದಿದೆ.
Duniya Vijay Divorce: ಕಾನೂನು ಸಮರಕ್ಕೆ ತೆರೆ
ದುನಿಯಾ ವಿಜಯ್ ಮತ್ತು ನಾಗರತ್ನ ಅವರ ದಾಂಪತ್ಯ ವಿವಾದ ಹಲವು ವರ್ಷಗಳಿಂದ ಕಾನೂನು ಹೋರಾಟದ ಹಾದಿಯಲ್ಲಿತ್ತು. ವಿಚ್ಛೇದನಕ್ಕೆ ಸಂಬಂಧಿಸಿದಂತೆ ವಿವಿಧ ಹಂತಗಳಲ್ಲಿ ವಿಚಾರಣೆ ನಡೆದಿದ್ದು, ಇದೀಗ ಹೈಕೋರ್ಟ್ ನೀಡಿರುವ ಆದೇಶದೊಂದಿಗೆ ಇಬ್ಬರ ದಾಂಪತ್ಯ ಸಂಬಂಧ ಅಧಿಕೃತವಾಗಿ ಅಂತ್ಯಗೊಂಡಿದೆ. ಈ ತೀರ್ಪು ಇಬ್ಬರ ವೈಯಕ್ತಿಕ ಜೀವನದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ದೀರ್ಘಕಾಲದಿಂದ ನೆನೆಗುದಿಗೆ ಬಿದ್ದಿದ್ದ ಕೌಟುಂಬಿಕ ವಿವಾದಕ್ಕೂ ಕಾನೂನಾತ್ಮಕ ಪರಿಹಾರ ದೊರೆತಂತಾಗಿದೆ.
ಇತ್ತೀಚಿನ ಬೆಳವಣಿಗೆಗಳ ನಡುವೆಯೇ ಮಹತ್ವದ ಆದೇಶ
ಇತ್ತೀಚೆಗೆ ದುನಿಯಾ ವಿಜಯ್ ಅವರ ಪುತ್ರನ ವಿರುದ್ಧ ಸಹಪಾಠಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದ ಬೆಳವಣಿಗೆಗಳು ಸುದ್ದಿಯಾಗಿದ್ದವು. ಈ ಬೆಳವಣಿಗೆಯ ನಡುವೆಯೇ ಇದೀಗ ವಿಜಯ್ ಅವರ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದ ವಿಚ್ಛೇದನ ಪ್ರಕರಣದಲ್ಲೂ ಮಹತ್ವದ ತೀರ್ಪು ಹೊರಬಿದ್ದಿದೆ.
ಹೈಕೋರ್ಟ್ನ ಈ ಆದೇಶದ ಮೂಲಕ ನಟ ದುನಿಯಾ ವಿಜಯ್ ಹಾಗೂ ನಾಗರತ್ನ ಅವರ ಸುದೀರ್ಘ ದಾಂಪತ್ಯ ಜೀವನಕ್ಕೆ ಅಧಿಕೃತವಾಗಿ ತೆರೆ ಬಿದ್ದಿದ್ದು, ಪತ್ನಿಯ ಭವಿಷ್ಯದ ಜೀವನ ಮತ್ತು ಆರ್ಥಿಕ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ₹2 ಕೋಟಿ ಜೀವನಾಂಶ ನೀಡುವಂತೆ ನಿರ್ದೇಶನ ನೀಡಲಾಗಿದೆ. ಹಲವು ವರ್ಷಗಳಿಂದ ಕಾನೂನು ಹೋರಾಟದಲ್ಲಿದ್ದ ದುನಿಯಾ ವಿಜಯ್-ನಾಗರತ್ನ ದಾಂಪತ್ಯ ವಿವಾದಕ್ಕೆ ಇದೀಗ ಹೈಕೋರ್ಟ್ ಆದೇಶದ ಮೂಲಕ ಅಂತಿಮ ತೆರೆ ಬಿದ್ದಂತಾಗಿದೆ.
ನಟ ದುನಿಯಾ ವಿಜಯ್ ಭಾವನಾತ್ಮಕ ಸ್ಪಷ್ಟನೆ
ದಾಂಪತ್ಯ ಜೀವನಕ್ಕೆ ಅಧಿಕೃತ ತೆರೆ ಬಿದ್ದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ದುನಿಯಾ ವಿಜಯ್ ಅವರು,ಸಮಸ್ತ ಅಭಿಮಾನಿಗಳಲ್ಲಿ ಹಾಗೂ ನನ್ನ ಬದುಕಿನುದ್ದಕ್ಕೂ ಜೊತೆಯಾಗಿ ನಿಂತ ಮಾಧ್ಯಮ ಮಿತ್ರರಲ್ಲಿ ಕಳಕಳಿಯ ಮನವಿ...
"ನ್ಯಾಯಾಲಯದ ಆದೇಶಕ್ಕೆ ಶಿರಸಾಷ್ಟಾಂಗ ಪ್ರಣಾಮಗಳೊಂದಿಗೆ ಶರಣಾಗಿದ್ದೇನೆ. ಕಾನೂನಿನ ಮೇಲಿನ ನಂಬಿಕೆ ಮತ್ತಷ್ಟು ಹೆಚ್ಚಾಗಿದೆ. ನ ನ ಮೇಲಿನ ಮಾನಸಿಕ ಕ್ರೌರ್ಯವನ್ನು ಪರಿಗಣಿಸಿ, ಮಾನ್ನ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಶ್ರೀ ಡಿ.ಕೆ. ಸಿಂಗ್ ಹಾಗೂ ಶ್ರೀ ಶಾಂತಿಭೂಷಣ್ ಅವರ ಆದೇಶಕ್ಕೆ ತಲೆಬಾಗಿದ್ದೇನೆ. ಈ ಆದೇಶಕ್ಕೆ ನನ್ನ ಗೌರವಪೂರ್ವಕ ಧನ್ಯವಾದಗಳು. ಹಾಗೆಯೇ ನನ್ನ ವಕೀಲರಾದ ಹಿರಿಯ ಕೌನ್ಸಿಲ್ ಶ್ರೀವತ್ಸ ಹಾಗೂ ಯುಕ್ತ ಅನಿಲ್ ಅವರಿಗೆ ನನ್ನ ಹೃತ್ತೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಮಾಧ್ಯಮಗಳಲ್ಲಾಗಲಿ ಅಥವಾ ಸಾರ್ವಜನಿಕವಾಗಲಿ ಮಾತನಾಡಲು ಇಚ್ಛಿಸುವುದಿಲ್ಲ. ನನ್ನ ಹೆಣ್ಣುಮಕ್ಕಳು ವಯಸ್ಕರಾಗಿದ್ದು, ಸಮಾಜದಲ್ಲಿ ತಮ್ಮದೇ ಆದ ಸ್ಥಾನಮಾನ ಗಳಿಸಿದ್ದಾರೆ; ಅವರಿಗೆ ಯಾವುದೇ ಮುಜುಗರವಾಗಬಾರದು.
ಮಕ್ಕಳ ಭವಿಷ್ಯ ಹಾಗೂ ಹಿತದೃಷ್ಟಿಯಿಂದ, ನನ್ನ ವೈಯಕ್ತಿಕ ಸಾಂಸಾರಿಕ ವಿಚಾರಕ್ಕೆ ನ್ಯಾಯಾಲಯ ನೀಡಿದ ಆದೇಶವನ್ನು ಆತ್ಮಸಾಕ್ಷಿಯಿಂದ ಸ್ವೀಕರಿಸಿದ್ದು, ಇಲ್ಲಿಂದ ಹೊಸ ಬದುಕಿನ ಪ್ರಯಾಣದತ್ತ ಹೆಜ್ಜೆ ಹಾಕುತ್ತಿದ್ದೇನೆ. ನಿಮ್ಮ ಆಶೀರ್ವಾದ ಮತ್ತು ಹಾರೈಕೆ ಹೀಗೆಯೇ ಇರಲಿ. ಧನ್ಯವಾದಗಳು ಎಂದು ದುನಿಯಾ ವಿಜಯ್ ಅವರು ತಿಳಿಸಿದ್ದಾರೆ.


Click it and Unblock the Notifications
