Dwarakish Death: ಸ್ಯಾಂಡಲ್‌ವುಡ್‌‌ನ ಪ್ರಚಂಡ ಕುಳ್ಳ ದ್ವಾರಕೀಶ್‌ ಬಗ್ಗೆ ತಿಳಿಯಲೇಬೇಕಾದ ಸಂಗತಿಗಳಿವು

ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ್‌ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಇಂದು ಏಪ್ರಿಲ್‌ 16ರಂದು ಕೊನೆಯುಸಿರೆಳೆದಿದ್ದಾರೆ. ಹಿರಿಯ ನಟ ಹಾಗೂ ನಿರ್ಮಾಪಕ ದ್ವಾರಕೀಶ್‌ ಅವರನ್ನು ಕಳೆದುಕೊಂಡ ಕನ್ನಡ ಚಿತ್ರರಂಗದಲ್ಲಿ ಮೌನ ಆವರಿಸಿದೆ.

1942 ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದ ದ್ವಾರಕೀಶ್‌ ಅವರು, ಶಾರದ ವಿಲಾಸ್ ಮತ್ತು ಬನುಮ್ಯ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದರು. ಫ್ರೌಡಶಿಕ್ಷಣದ ನಂತರ ಸಿಪಿಸಿ ಪಾಕಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮುಗಿಸಿದರು. ಇವರ ತಂದೆ ಶಾಮರಾವ್ ಮತ್ತು ತಾಯಿ ಜಯಮ್ಮ. ಶಿಕ್ಷಣ ಮುಗಿಸಿದ ಬಳಿಕ ದ್ವಾರಕೀಶ್‌ ತಮ್ಮ ಸಹೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಆರಂಭಿಸಿದ್ದರು.

Dwarakish No More Here Is The Some Important Information About Senior Actor

ಆದರೆ ನಟನೆಯಲ್ಲಿ ಅತೀವ ಆಸಕ್ತಿ ಹೊಂದಿದ್ದ ದ್ವಾರಕೀಶ್‌ 1963ರಲ್ಲಿ ವ್ಯಾಪಾರ ಬಿಟ್ಟು ನಟನೆಯತ್ತ ಮುಖ ಮಾಡಿದರು. 1964ರಲ್ಲಿ ವೀರ ಸಂಕಲ್ಪ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪ್ರವೇಶಿಸಿದ ದ್ವಾರಕೀಶ್ ಅವರು, ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ಈವರೆಗೂ ನೂರಾರು ಸಿನಿಮಾಗಳಲ್ಲಿ ನಟಿಸಿದ್ದರು. ದ್ವಾರಕೀಶ್‌ ಅವರ ಪತ್ನಿ ಅಂಬುಜಾ ಅವರು ಕೂಡ ಕಳೆದು ಮೂರು ವರ್ಷಗಳ ಹಿಂದೆ ನಿಧನರಾದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+