Shilpa Shetty: ನಟಿ ಶಿಲ್ಪಾ ಶೆಟ್ಟಿಗೆ ಬಿಗ್ ಶಾಕ್, 98ಕೋಟಿ ರೂ ಆಸ್ತಿ ED ವಶ
ಮುಂಬೈ, ಏಪ್ರಿಲ್ 18: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ಉದ್ಯಮಿ ರಾಜ್ ಕುಂದ್ರಾ ದಂಪತಿಗೆ ಜಾರಿ ನಿರ್ದೇಶನಾಲಯ ಅತಿದೊಡ್ಡ ಶಾಕ್ ನೀಡಿದೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶಿಲ್ಪಾ ಶೆಟ್ಟಿ ದಂಪತಿಗೆ ಸೇರಿದ ಬರೋಬ್ಬರಿ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹಾಗೂ ಫ್ಲಾಟ್ ಅನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಉದ್ಯಮಿ ರಾಜ್ ಕುಂದ್ರಾ ಅವರನ್ನು ಬಿಟ್‌ಕಾಯಿನ್ ಸೇರಿದಂತೆ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆ ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ ಕುಂದ್ರಾ ಅವರಿಗೆ ಸಂಬಂಧಪಟ್ಟ ಸ್ಥಿರ ಮತ್ತು ಚರ ಆಸ್ತಿಯ ಜೊತೆಗೆ ಪುಣೆಯಲ್ಲಿರುವ ಬಂಗ್ಲೆ ಮತ್ತು ಷೇರುಗಳನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

2017ರಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ರಾಜ್ ಕುಂದ್ರಾ ಅವರನ್ನು 6,600 ಕೋಟಿ ರೂಪಾಯಿ ಹಣ ವರ್ಗಾವಣೆ ಮಾಡಿದ ಆರೋಪದಲ್ಲಿ ತನಿಖೆ ನಡೆಸಿತ್ತು. ಈ ಪ್ರಕರಣದಲ್ಲಿ ಬಿಟ್‌ಕಾಯಿನ್ ಮೂಲಕ ಹಲವರಿಗೆ ಶೇಕಡಾ 10 ರಷ್ಟು ಹಣ ರಿಟರ್ನ್ ಮಾಡುವ ಭರವಸೆ ನೀಡಿ ಮೋಸ ಮಾಡಿದ ಆರೋಪ ಕೂಡ ಕೇಳಿ ಬಂದಿತ್ತು. ಇದೇ ಹಗರಣದಲ್ಲಿ ತನಿಖೆ ನಡೆಸಿದ ಜಾರಿ ನಿರ್ದೇಶನಾಲಯ ಇದೀಗ ಆಸ್ತಿಯನ್ನು ವಶಕ್ಕೆ ಪಡೆದುಕೊಂಡಿದೆ ಎನ್ನಲಾಗಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ರಾಜ್ ಕುಂದ್ರಾ ಅವರಿಗೆ ಸಂಬಂಧ ಪಟ್ಟ 97.79 ಕೋಟಿ ರೂಪಾಯಿ ಆಸ್ತಿಯನ್ನು ವಶಕ್ಕೆ ಪಡೆದಿದೆ. ಇದರ ಜೊತೆಗೆ ಮುಂಬೈನ ಜುಹುನಲ್ಲಿರುವ ಫ್ಲಾಟ್ ಅನ್ನು ತನ್ನ ಸುಪರ್ದಿಗೆ ಪಡೆದುಕೊಂಡಿದೆ. ಜುಹುನಲ್ಲಿರುವ ಫ್ಲಾಟ್ ನಟಿ ಶಿಲ್ಪಾ ಶೆಟ್ಟಿ ಅವರ ಹೆಸರಿನಲ್ಲಿತ್ತು. ಒಟ್ಟಾರೆ ಶಿಲ್ಪಾ ಶೆಟ್ಟಿ ಹಾಗೂ ಉದ್ಯಮಿ ರಾಜ್ ಕುಂದ್ರಾ ದಂಪತಿಯ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಸದ್ಯ ಜಾರಿ ನಿರ್ದೇಶನಾಲಯದ ವಶದಲ್ಲಿದೆ.
ED, Mumbai has provisionally attached immovable and movable properties worth Rs. 97.79 Crore belonging to Ripu Sudan Kundra aka Raj Kundra under the provisions of PMLA, 2002. The attached properties include Residential flat situated in Juhu presently in the name of Smt. Shilpa…
— ED (@dir_ed) April 18, 2024
ಜಾರಿ ನಿರ್ದೇನಾಲಯದ ಅಧಿಕಾರಿಗಳು ಈ ಬಗ್ಗೆ ಟ್ವೀಟ್((ಎಕ್ಸ್)ನಲ್ಲಿ ಹಂಚಿಕೊಂಡಿದ್ದು, 'ರಾಜ್ ಕುಂದ್ರಾಗೆ ಸೇರಿದ 97.7 ಕೋಟಿ ರೂಪಾಯಿ ಆಸ್ತಿಯನ್ನು ತಾತ್ಕಲಿಕವಾಗಿ. ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಇರುವ ಜುಹು ಮನೆ, ಪುಣೆಯಲ್ಲಿರುವ ನಿವಾಸ, ರಾಜ್ ಕುಂದ್ರಾ ಹೆಸರಲ್ಲಿರುವ ಇಕ್ವಿಟಿ ಷೇರುಗಳನ್ನು ಸೀಜ್ ಮಾಡಲಾಗಿದೆ' ಎಂದು ಮಾಹಿತಿ ನೀಡಿದೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications