ಡಾ.ವಿಷ್ಣುವರ್ಧನ್ ಅಭಿಮಾನಿಗಳಿಂದ ಬೃಹತ್ ಪ್ರತಿಭಟನೆ: ಕಾರಣ ಏನು?
ಈಗಾಗಲೇ ಕಾವೇರಿ ವಿಚಾರಕ್ಕೆ ಪ್ರತಿಭಟನೆ ಬಿಸಿ ಕಂಡಿರುವ ಕನ್ನಡಿಗರಿಗೆ ಈಗ ಮತ್ತೊಂದು ಪ್ರತಿಭಟನೆಯ ಶಾಕ್ ಎದುರಾಗಲಿದೆ. ಅದೂ ಕನ್ನಡದ ಮೇರು ನಟ, ಡಾ.ವಿಷ್ಣುವರ್ಧನ್ ಅವರ ಅಭಿಮಾನಿಗಳಿಂದ. ಹಾಗಾದ್ರೆ ವಿಷ್ಣುದಾದ ಅವರ ಅಭಿಮಾನಿಗಳು ಈಗ ಪ್ರತಿಭಟನೆ ನಡೆಸಲು ರಣಕಹಳೆ ಮೊಳಗಿಸಿದ್ದು ಏಕೆ ಗೊತ್ತಾ?
ಅಂದಹಾಗೆ ನಟ ಡಾ.ವಿಷ್ಣುವರ್ಧನ್ ಅವರು ಅಭಿಮಾನಿಗಳನ್ನ ಅಗಲಿ 14 ವರ್ಷಗಳಾದವು. ಆದ್ರೆ ಇಂದಿಗೂ ಅವರ ಅಂತ್ಯ ಸಂಸ್ಕಾರವಾದ ಜಾಗವನ್ನು, ಅಭಿವೃದ್ಧಿ ಮಾಡುವ ಕೆಲಸವನ್ನ ಯಾವುದೇ ಸರ್ಕಾರ ಮಾಡಿಲ್ಲ ಎಂದು ವಿಷ್ಣುದಾದ ಫ್ಯಾನ್ಸ್ ಕೋಪಗೊಂಡಿದ್ದಾರೆ. ಹೀಗಾಗಿ ಬೃಹತ್ ಪ್ರತಿಭಟನೆಗೆ ಮುಂದಾಗದಿದ್ದಾರೆ.

ಹಲವು ಗೊಂದಲ ಮಧ್ಯೆ, ಡಾ.ವಿಷ್ಣುವರ್ಧನ್ ಅವರ ಸ್ಮಾರಕ ಮೈಸೂರಿಗೆ ಸ್ಥಳಾಂತರ ಆಗಿತ್ತು. ಆದರೆ ಅಭಿಮಾನಿಗಳು ಸ್ಮಾರಕ ಅಭಿಮಾನ್ ಸ್ಟುಡಿಯೋದಲ್ಲೇ ಆಗಬೇಕು ಎಂದು ಹಠ ಹಿಡಿದಿದ್ದಾರೆ. ನಟ ಡಾ. ವಿಷ್ಣುವರ್ಧನ್ ಅವರ ಅಂತ್ಯ ಸಂಸ್ಕಾರ ನೆರವೇರಿದ ಜಾಗದಲ್ಲೇ ಪುಣ್ಯಭೂಮಿ ಇರಬೇಕು ಎಂದು ಹಠ ಹಿಡಿದಿದ್ದು, ಈ ಹಿನ್ನೆಲೆಯಲ್ಲಿ ಪ್ರತಿಭಟನೆಗೆ ಕೂಡ ನಿರ್ಧರಿಸಿದ್ದಾರೆ.
ಅಭಿಮಾನಿಗಳ ಆರೋಪ ಏನು?
ಅಂದಹಾಗೆ ಈಗ ಅಭಿಮಾನ್ ಸ್ಟುಡಿಯೋದ ಮಾಲೀಕರು ಅಭಿಮಾನಿಗಳಿಗೆ ಒಳ ಪ್ರವೇಶಿಸಲು ನಿರ್ಬಂಧ ವಿಧಿಸುವುದರ ಜೊತೆಗೆ, ಪ್ರತಿವರ್ಷವೂ ಹುಟ್ಟುಹಬ್ಬ & ಪುಣ್ಯಸ್ಮರಣೆಗೆ ಹಲವಾರು ತೊಂದರೆ ನೀಡುತ್ತಿದ್ದಾರೆ ಎಂದು ಅಭಿಮಾನಿಗಳು ಆರೋಪಿಸಿದ್ದಾರೆ. ಈ ಎಲ್ಲಾ ಕಾರಣಕ್ಕೆ & ಬೆಂಗಳೂರಿನಲ್ಲೇ ಸ್ಮಾರಕ ನಿರ್ಮಾಣಕ್ಕೆ ಆಗ್ರಹಿಸಿ ಇದೀಗ ಡಿಸೆಂಬರ್ 17ಕ್ಕೆ ವಿಷ್ಣು ದಾದಾ ಫ್ಯಾನ್ಸ್ ಹೋರಾಟಕ್ಕೆ ಮುಂದಾಗಿದ್ದಾರೆ.

ಹೇಗಿರಲಿದೆ ವಿಷ್ಣುವರ್ಧನ್ ಫ್ಯಾನ್ಸ್ ಹೋರಾಟ?
ಇನ್ನು ಡಾ.ವಿಷ್ಣುವರ್ಧನ್ ಅಭಿಮಾನಿ ಸಂಘಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆಯನ್ನು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಆಯೋಜನೆ ಮಾಡಿರುವ ಬಗ್ಗೆ ತಿಳಿಸಲಾಗಿದೆ. ಹೀಗೆ ಡಿಸೆಂಬರ್ 17ರ ಬೆಳಗ್ಗೆ 10ರಿಂದ ಸಂಜೆ 6 ಗಂಟೆ ತನಕ ಪ್ರತಿಭಟನೆ ಹಮ್ಮಿ ಕೊಳ್ಳಲಾಗಿದೆ. ಈ ಸಂದರ್ಭದಲ್ಲಿ, ನಾಡಿನ ಎಲ್ಲಾ ಕನ್ನಡಪರ ಸಂಘಟನೆಗಳು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಕಲಾವಿದರ ಸಂಘ ಸೇರಿದಂತೆ ಡಾ.ವಿಷ್ಣುವರ್ಧನ್ ಅವರ ಒಡನಾಡಿಗಳೆಲ್ಲರೂ ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಅಭಿಮಾನಿಗಳು ತಿಳಿಸಿದ್ದಾರೆ.
ಕಪ್ಪು ಬಾವುಟ ಪ್ರದರ್ಶನ ಎಚ್ಚರಿಕೆ
ಒಟ್ನಲ್ಲಿ ವಿಷ್ಣುವರ್ಧನ್ ಅವರ ಅಭಿಮಾನಿಗಳು, ಸ್ಮಾರಕ ನಿರ್ಮಾಣಕ್ಕಾಗಿ ಇದೀಗ ಬೃಹತ್ ಪ್ರತಿಭಟನೆಗೆ ನಿರ್ಧರಿಸಿದ್ದಾರೆ. ಅಕಸ್ಮಾತ್ ಈ ಪ್ರತಿಭಟನೆಗೂ ಸರ್ಕಾರ ಸ್ಪಂದಿಸದೇ ಹೋದಲ್ಲಿ ದೆಹಲಿಯಲ್ಲಿ ನಾವು ಹೋರಾಟವನ್ನು ಮುಂದುವರಿಸಲಿದ್ದೇವೆ ಎಂದಿದ್ದಾರೆ ವಿಷ್ಣುವರ್ಧನ್‌ರ ಫ್ಯಾನ್ಸ್. ಹಾಗೇ ಸರ್ಕಾರದ ಮಂತ್ರಿಗಳು ಭಾಗವಹಿಸುವ ಎಲ್ಲಾ ಕಾರ್ಯಕ್ರಮಗಳಲ್ಲಿ ಕೂಡ, ಕಪ್ಪು ಬಾವುಟ ಪ್ರದರ್ಶನ ಮಾಡುವ ಎಚ್ಚರಿಕೆ ನೀಡಿದ್ದಾರೆ.
-
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ












Click it and Unblock the Notifications