ಅಭಿಷೇಕ್‌-ಅವಿವಾ ಪುತ್ರನಿಗೆ ಅಂಬರೀಷ್‌ ಹೆಸರು: ಯಾಕೆ..?

ಕನ್ನಡ ಚಿತ್ರರಂಗ ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಶ್ ಅವರ ಪುತ್ರ ಜ್ಯೂನಿಯರ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಬಿದ್ದಪ್ಪ ದಂಪತಿ ತಮ್ಮ ಚೊಚ್ಚಲ ಮಗುವನ್ನು ಸ್ವಾಗತಿಸಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ (ನವೆಂಬರ್‌ 12) ಅವಿವಾ ಬಿದ್ದಪ್ಪ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸದ್ಯ ಅವಿವಾ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಆಗಸ್ಟ್‌ ತಿಂಗಳಿನಲ್ಲಿ ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎನ್ನುವ ಸಿಹಿ ಸುದ್ದಿ ಹೊರಬಿದಿತ್ತು. ಅದರ ಬೆನ್ನಲ್ಲೇ ಸೆಪ್ಟೆಂಬರ್‌ 18, 2024ರಂದು ಅವಿವಾ ಸೀಮಂತ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿತ್ತು. ಅವಿವಾ ಸೀಮಂತದಲ್ಲಿ ಅನೇಕ ಸಿನಿಮಾ ತಾರೆಯರು ಭಾಗಿಯಾಗಿದ್ದು, ಫೋಟೋಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದವು.

Fans Guessing Name Of Actor Abishek Ambareesh And Aviva Bidapa Baby Boy

ಸೀಮಂತ ಕಾರ್ಯಕ್ರಮದ ಅವಿವಾ ಫೋಟೋ ನೋಡಿದ ಅಭಿಮಾನಿಗಳು ಗಂಡು ಮಗುವೇ ಜನಿಸುವುದು ಎಂದು ಗೆಸ್‌ ಮಾಡಿದ್ದರು. ಅವಿವಾ ಬಿದ್ದಪ್ಪ ಸಾಮಾಜಿಕ ಜಾಲತಾಣದಲ್ಲಿಗಳಲ್ಲಿ ಫೋಟೋಗಳನ್ನು ಪೋಸ್ಟ್‌ ಮಾಡಿದಾಗಲೂ ಕೂಡ ಅನೇಕರು ಗಂಡು ಮಗು, ಅಂಬರೀಷ್‌ ಮತ್ತೆ ಹುಟ್ಟಿ ಬರುತ್ತಿದ್ದಾರೆ ಎನ್ನುವ ಕಮೆಂಟ್‌ಗಳನ್ನು ಮಾಡುತ್ತಿದ್ದರು.

ಇದೀಗ ಎಲ್ಲರ ನಿರೀಕ್ಷೆಗಳು ಸರಿಯಾಗಿದ್ದು ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪ ದಂಪತಿಗೆ ಗಂಡು ಮಗುವಾಗಿದೆ. ಹೀಗಾಗಿ ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪ ಅವರ ಮಗನಾಗಿ ಅಂಬರೀಷ್‌ ಅವರೇ ಮತ್ತೆ ಹುಟ್ಟಿ ಬಂದಿದ್ದಾರೆ ಎನ್ನುವ ಮಾತುಗಳು ಎಲ್ಲರ ಬಾಯಲ್ಲಿ ಇದೆ. ಜೊತೆಗೆ ಇನ್ನೊಂದು ವಿಶೇಷವಾದ ವಿಚಾರ ಎಲ್ಲೆಡೆ ಹರಿದಾಡುತ್ತಿದೆ. ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪ ಅವರ ಮಗನಿಗೆ ಏನು ಹೆಸರಿಡಬಹುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿದ್ದರೆ. ಮುದ್ದಾದ ಮೊಗ್ಗಗನಿಗೆ ತಾತನ ಹೆಸರೇ ಇಡುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.

ಅಂದರೆ ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪ ಮಗನಿಗೆ ಅಂಬರೀಷ್‌ ಅವರ ಹೆಸರೇ ಇಡಲಾಗುತ್ತದೆ. ಹಳೆಯ ಸಂಪ್ರದಾಯದಂತೆ ತಾತನ ಹೆಸರನ್ನೇ ಮೊಮ್ಮಗನಿಗೆ ಇಡುವ ಪದ್ಧತಿಯನ್ನು ಸುಮಲತಾ ಹಾಗೂ ಅಭಿಷೇಕ್‌ ಮುಂದುವರಿಸುತ್ತಾರೆ ಎನ್ನುವ ಗಾಳಿ ಸುದ್ದಿ ಹರಿದಾಡುತ್ತಿದೆ. ಆದರೆ ಕೆಲವರು ಹೊಸ ಹೆಸರಿಟ್ಟು ಸರ್‌ ನೇಮ್‌ ಅಂಬರೀಷ್‌ ಎಂದು ಇಡುವ ಸಾಧ್ಯತೆ ಎಂದು ಸಹ ಹೇಳುತ್ತಿದ್ದಾರೆ.

ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಪುತ್ರಿ ಅವಿವಾ ಮತ್ತು ಅಭಿಷೇಕ್ ಅಂಬರೀಶ್ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದು, ಜೂನ್ 5, 2023ರಂದು ಪೋಷಕರ ಒಪ್ಪಿಗೆ ಪಡೆದು ಎಲ್ಲರ ಸಮ್ಮುಖದಲ್ಲಿ ಅದ್ಧೂರಿಯಾಗಿ ವಿವಾಹವಾಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+