ನಟ ದರ್ಶನ್, ಕಿಚ್ಚ ಸುದೀಪ್ ಫ್ಯಾನ್ಸ್ ವಾರ್ ಮಾಡಿಸೋದೇ ಇವರು ಎಂದ ಅಭಿಮಾನಿಗಳು
Actor Kiccha Sudeep Fans: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಮಾರ್ಕ್ ಸಿನಿಮಾ ಇಂದು (ಡಿಸೆಂಬರ್ 25) ರಾಜ್ಯಾದ್ಯಂತ ಅದ್ಧೂರಿಯಾಗಿ ತೆರೆ ಕಂಡಿದೆ. ಸಿನಿಮಾ ನೋಡಿ ಬಂದ ಅಭಿಮಾನಿಗಳಿಗೆ ಹುಬ್ಬಳ್ಳಿಯಲ್ಲಿನ ಆ ಘಟನೆ ಬಗ್ಗೆ ಕೇಳಲಾಗಿದೆ. ಇದಕ್ಕೆ ಪ್ರಕ್ರಿಯಿಸಿದ ಅವರು ಸುದೀಪ್ ಹಾಗೂ ದರ್ಶನ್ ಗೆಳೆತನ ಎಂತಹದ್ದು ಎಂದು ಹೇಳಿದ್ದಾರೆ. ಇದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಹುಬ್ಬಳ್ಳಿಯಲ್ಲಿ ಇತ್ತೀಚೆಗಷ್ಟೇ ಮಾರ್ಕ್ ಚಿತ್ರದ ಪ್ರೀ-ರಿಲೀಸ್ ಇವೆಂಟ್ ನಡೆಯಿತು. ಆ ವೇದಿಕೆಯಲ್ಲಿ ಸುದೀಪ್ ಅವರು, ಮಾತಿಗೆ ಬದ್ಧ, ಯುದ್ಧಕ್ಕೆ ಸಿದ್ಧ ಸುದೀಪ್ ಹೇಳಿದ್ದರು. ಈ ಹೇಳಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ, ನಟ ದರ್ಶನ್ ಹಾಗೂ ಸುದೀಪ್ ಫ್ಯಾನ್ಸ್ ನಡುವೆ ಟಾಕ್ ವಾರ್ ಶುರುವಾಯಿತು. ಈ ಬಗ್ಗೆ ಕಿಚ್ಚ ಸುದೀಪ್ ಅವರು ಸ್ಪಷ್ಟನೆಯನ್ನೂ ನೀಡಿದರು. "ನಾನು ಪೈರಸಿ ವಿರುದ್ಧ ಯುದ್ಧ ಮಾಡಬೇಕು ಎಂದು ಹೇಳಿದ್ದು. ಬೇರೆ ಯಾವ ಉದ್ದೇಶದಿಂದಲೂ ಹೇಳಿಲ್ಲ," ಎಂದು ಹೇಳುವ ಮೂಲಕ ಗೊಂದಲಗಳಿಗೆ ಫುಲ್ ಸ್ಟಾಪ್ ಇಟ್ಟರು.

ಅಭಿಮಾನಿಗಳ ಹೇಳಿಕೆ ವೈರಲ್: ಇದಾದ ಬಳಿಕ ಮತ್ತೆ ನಟ ಕಿಚ್ಚ ಸುದೀಪ್ ಅವರು ಅಭಿಮಾನಿಯೊಬ್ಬರು ಹಂಚಿಕೊಂಡಿದ್ದ ದರ್ಶನ್ ಜೊತೆಗಿನ ಫೋಟೋವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿಕೊಳ್ಳುವ ಮೂಲಕ ತನ್ನ ಗೆಳೆತನದಲ್ಲಿ ಯಾವುದೇ ಬಿರುಕು ಇಲ್ಲ ಎಂಬ ಸಂದೇಶವನ್ನು ರವಾನೆ ಮಾಡಿದರು. ಆಗ ಫ್ಯಾನ್ಸ್ ಟಾಕ್ ವಾರ್ ತಣ್ಣಗಾಗುತ್ತಾ ಬಂದಿತು. ಇನ್ನೂ ಇದೀಗ ಸಿನಿಮಾ ವೀಕ್ಷಣೆ ಮಾಡಿ ಬಂದವರಿಗೆ ಮಾಧ್ಯಮದವರು ಮತ್ತೆ ಹುಬ್ಬಳ್ಳಿಯಲ್ಲಿ ನಡೆದ ಘಟನೆ ಬಗ್ಗೆ ಕೇಳಿದ್ದಾರೆ. ಇದಕ್ಕೆ ಅಭಿಮಾನಿಗಳು ಕೊಟ್ಟ ಉತ್ತರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅಭಿಮಾನಿಗಳ ಪ್ರತಿಕ್ರಿಯೆ: "ಸಿನಿಮಾ ಅಂತೂ ಸೂಪರ್ ಇದೆ. ದಯವಿಟ್ಟು ಎಲ್ಲರೂ ಫ್ಯಾನ್ಸ್ ವಾರ್ ಇಲ್ಲಿಗೆ ಕೈಬಿಟ್ಟು ಥಿಯೇಟರ್ಗಳಿಗೆ ಬಂದು ಕನ್ನಡ ಮೂವಿ ನೋಡಿ. ಯಾವ ಹಿರೋಗಳಿಗೂ ವಾರ್ ಇಲ್ಲ. ಯಾರೋ ಕೆಲ ಕಿಡಿಗೇಡಿಗಳು ಹೀಗೆ ತಂದಿಡುವ ಕೆಲಸವನ್ನು ಮಾಡುತ್ತಿದ್ದಾರೆ. ಇದರಿಂದ ಫ್ಯಾನ್ಸ್ ವಾರ್ ನಡೆಯುತ್ತಿದೆ. ಈಗ ಅದನ್ನೆಲ್ಲಾ ಬಿಟ್ಟಾಕಿ ಕನ್ನಡ ಸಿನಿಮಾಗಳನ್ನು ಚಿತ್ರಮಂದಿರಗಳಿಗೆ ಬಂದು ನೋಡಿ, ಕನ್ನಡ ಸಿನಿಮಾಗಳನ್ನು ಬೆಳೆಸಿ ಎಂದು ಕರ್ನಾಟಕದ ಜನತೆಗೆ ಕೇಳಿಕೊಳ್ಳುತ್ತೇವೆ," ಎಂದು ಹೇಳಿದ್ದಾರೆ.
"ನಟ ದರ್ಶನ್ ಹಾಗೂ ಸುದೀಪ್ ಸರ್ ಯಾವತ್ತೂ ಜಗಳ ಮಾಡಿಕೊಂಡಿಲ್ಲ. ಪ್ರತಿಯೊಂದು ಥಿಯೇಟರ್ಲ್ಲೂ ಅವರಿಬ್ಬರ ಕಟೌಟ್ಗಳನ್ನು ಅಕ್ಕಪಕ್ಕದಲ್ಲೇ ಹಾಕಲಾಗಿದೆ. ಅವರಿಬ್ಬರ ನಡುವೆ ಇರುವ ಸ್ನೇಹದ ಬಗ್ಗೆ ಮಾತನಾಡುವ ಹಕ್ಕು ಯಾರಿಗೂ ಇಲ್ಲ," ಎಂದು ಹೇಳುವ ಮೂಲಕ ಗಮನ ಸೆಳೆದಿದ್ದಾರೆ.
ಸುದೀಪ್ ಸ್ಪಷ್ಟನೆ ಏನು?: ಈಗಾಗಲೇ ತಾವು ಮಾತನಾಡಿದ್ದು ಪೈರಸಿ ಬಗ್ಗೆ ಎಂದು ಸುದೀಪ್ ಅವರೇ ಸ್ಪಷ್ಟನೆ ನೀಡಿದ್ದಾರೆ. ಅಂದು ನಾನು ಅಲ್ಲಿ ಮಾತನಾಡುವುದಕ್ಕೂ ಮುನ್ನ ನನಗೆ ಒಂದು ಫೋನ್ ಕರೆ ಬಂದಿತ್ತು. ಹಣಕ್ಕಾಗಿ ನಿಮ್ಮ ಸಿನಿಮಾವನ್ನು ಪೈರಸಿ ಮಾಡುತ್ತಿಲ್ಲ. ನಿಮ್ಮ ಸಿನಿಮಾವನ್ನು ಹಾಳು ಮಾಡಬೇಕೆಂಬ ಕಾರಣಕ್ಕೆ ಪೈರಸಿ ಮಾಡಲಿದ್ದಾರೆ ಎಂಬ ಮಾಹಿತಿ ಬಂತು. ಅದರ ವಿರುದ್ಧ ನಾನು ನಿಂತುಕೊಳ್ಳದೇ ಮತ್ತೆ ಯಾರು ಬರಬೇಕು? ಯಾರು ಕೇಳಿಸಿಕೊಳ್ಳುತ್ತಿದ್ದಾರೋ ಅವರಿಗೆ ನಾನು ಆ ಮಾತನ್ನು ಹೇಳಬೇಕಿತ್ತು. ಅವರಿಗೆ ಅರ್ಥ ಆಗಿದೆ ಎಂದು ಹೇಳಿದ್ದರು.
ಆವೇಷದಲ್ಲಿ ಏನೇನೋ ಮಾತಾಡುವವನಾಗಿದ್ದರೆ, ಈಗಾಗಲೇ ಅನೇಕ ವಿವಾದಗಳಲ್ಲಿ ಸಿಕ್ಕಿಕೊಳ್ಳಬೇಕಿತ್ತು. ಬೇರೆಯವರ ಸಿನಿಮಾದಲ್ಲಿ ತಲೆ ಹಾಕುವ ಉದ್ದೇಶ ನನಗೆ ಇಲ್ಲ. ಇಂಥವರಿಗೆ ಹೇಳಿದ್ದು ಅಂತ ನಾನು ಹೇಳಿಲ್ಲ. ಅಷ್ಟು ಜನ ಕಲಾವಿದರಿದ್ದಾರೆ. ಎಲ್ಲರಿಗೂ ಸುದೀಪ್ ಗೊತ್ತು. ಅವರು ಯಾರೂ ಕೂಡ ಪ್ರತಿಕ್ರಿಯಿಸಿಲ್ಲ. ಯಾಕೆ ಪ್ರತಿಕ್ರಿಯಿಸಿಲ್ಲ ಎಂಬುದು ಅವರಿಗೆ ಗೊತ್ತು. ಬೇರೆ ಯಾರದ್ದೋ ಮಾತಿಗೆ ನಾನು ಯಾಕೆ ಪ್ರತಿಕ್ರಿಯೆ ನೀಡಬೇಕು? ನನ್ನ ಹೆಸರು ಹೇಳಿ ಮಾತನಾಡಿದರೆ ನಾನು ಪ್ರತಿಕ್ರಿಯೆ ಕೊಡುತ್ತೇನೆ ಎಂದು ಹೇಳಿದ್ದರು.
ನಮ್ಮ ಸಿನಿಮಾ ಕಾಪಾಡಿಕೊಳ್ಳುವುದು ನಮಗೆ ಮುಖ್ಯ. ನನಗೆ ಅಹಂ ಇಲ್ಲ. ಅದರ ಅವಶ್ಯಕತೆ ನನಗಿಲ್ಲ. ಸಿನಿಮಾ ಬಿಟ್ಟು ಬೇರೆ ವಿಚಾರಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಪೈರಸಿ ಮಾಡುವವರ ವಿರುದ್ಧ ಮಾತನಾಡಿದ್ದೇನೆ. ಪೈರಸಿ ಭೂತದ ವಿರುದ್ಧ ಯುದ್ಧ ಎಂದು ನಾನು ಹೇಳಿರುವುದು ಎಂದು ಹೇಳುವ ಮೂಲಕ ಸ್ಪಷ್ಟನೆ ನೀಡಿದ್ದಾರೆ.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications