CCL 2024: ನೀವು ಆರ್‌ಸಿಬಿಗೆ ಬನ್ನಿ; ಸಿಸಿಎಲ್‌ನಲ್ಲಿ ಮಿಂಚುತ್ತಿರುವ ಡಾರ್ಲಿಂಗ್ ಕೃಷ್ಣ ಬಳಿ ಫ್ಯಾನ್ಸ್ ಮನವಿ
ಲವ್ ಮಾಕ್‌ಟೈಲ್ ಮೂಲಕ ಕನ್ನಡಿಗರ ಮನಗೆದ್ದಿರುವ ಡಾರ್ಲಿಂಗ್ ಕೃಷ್ಣ ಸದ್ಯ ನಡೆಯುತ್ತಿರುವ ಸೆಲೆಬ್ರಟಿ ಕ್ರಿಕೆಟ್ ಲೀಗ್‌ನಲ್ಲಿ ಮಿಂಚುತ್ತಿದ್ದಾರೆ. ಸತತ ಮೂರು ಅರ್ಧಶತಕಗಳನ್ನು ಗಳಿಸಿರುವ ಡಾರ್ಲಿಂಗ್ ಕೃಷ್ಣ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ.
ಸಿಸಿಎಲ್ 2024ರ ಆವೃತ್ತಿರುವ ಕರ್ನಾಟಕ ಬುಲ್ಡೋಜರ್ಸ್ ತಂಡ ಆಡಿರುವ ಎರಡೂ ಪಂದ್ಯಗಳಲ್ಲಿ ಕೂಡ ಭರ್ಜರಿ ಗೆಲುವು ಸಾಧಿಸಿದೆ. ಮೊದಲ ಪಂದ್ಯದಲ್ಲಿ ಮುಂಬೈ ಹೀರೊಸ್ ತಂಡದ ವಿರುದ್ಧ ಗೆದ್ದಿದ್ದ ಕಿಚ್ಚ ಸುದೀಪ್ ಪಡೆ ಎರಡನೇ ಪಂದ್ಯದಲ್ಲಿ ಬೆಂಗಾಲ್ ಟೈಗರ್ಸ್ ವಿರುದ್ಧ 30 ರನ್‌ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.

ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ಬುಲ್ಡೋಜರ್ಸ್ ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಮೊದಲ ಇನ್ನಿಂಗ್ಸ್‌ನಲ್ಲಿ ಕರ್ನಾಟಕ 10 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 117 ರನ್ ಗಳಿಸಿತು. ಪ್ರತಾಪ್ 19 ಎಸೆತಗಳಲ್ಲಿ 29 ರನ್ ಗಳಿಸಿದರೆ, ಡಾರ್ಲಿಂಗ್ ಕೃಷ್ಣ 33 ಎಸೆತಗಳಲ್ಲಿ 5 ಬೌಂಡರಿ, 6 ಸಿಕ್ಸರ್ ಸಹಿತ 72 ರನ್ ಗಳಿಸಿದರು.
ಇದಕ್ಕುತ್ತರವಾಗಿ ಬೆಂಗಾಲ್ ಟೈಗರ್ಸ್ 10 ಓವರ್ ಗಳಲ್ಲಿ ಎರಡು ವಿಕೆಟ್ ಕಳೆದುಕೊಂಡು 109 ರನ್ ಗಳಿಸಿತು. ಬಳಿಕ ಕರ್ನಾಟಕ ಬುಲ್ಡೋಜರ್ಸ್ ಎರಡನೇ ಇನ್ನಿಂಗ್ಸ್‌ನಲ್ಲಿ 10 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು ಬರೋಬ್ಬರಿ 130 ರನ್ ಗಳಿಸುವ ಮೂಲಕ ಒಟ್ಟು 138 ರನ್‌ಗಳ ಮುನ್ನಡೆ ಪಡೆದುಕೊಂಡಿತು. ಎರಡನೇ ಇನ್ನಿಂಗ್ಸ್‌ನಲ್ಲೂ ಮಿಂಚಿದ ಡಾರ್ಲಿಂಗ್ ಕೃಷ್ಣ 21 ಎಸೆತಗಳಲ್ಲಿ 6 ಬೌಂಡರಿ 3 ಸಿಕ್ಸರ್ ಸಹಿತ ಅಜೇಯ 54 ರನ್ ಗಳಿಸಿದರು.
ಬಳಿಕ ಎರಡನೇ ಇನ್ನಿಂಗ್ಸ್‌ನಲ್ಲಿ ಬೆಂಗಾಲ್ ಟೈಗರ್ಸ 20 ಓವರ್ ಗಳಲ್ಲಿ 108 ರನ್ ಗಳಿಸುವುದರೊಂದಿಗೆ 30 ರನ್‌ಗಳಿಂದ ಸೋಲೊಪ್ಪಿಕೊಂಡಿತು. ಸತತ ಎರಡನೇ ಗೆಲುವು ಸಾಧಿಸಿದ ಕರ್ನಾಟಕ ಬುಲ್ಡೋಜರ್ಸ್ ಮುಂದಿನ ಪಂದ್ಯದಲ್ಲಿ ಚೆನ್ನೈ ರಿನ್ಹೋಸ್ ತಂಡವನ್ನು ಎದುರಿಸಲಿದೆ.
ಡಾರ್ಲಿಂಗ್ ಕೃಷ್ಣ ಆಟಕ್ಕೆ ಫ್ಯಾನ್ಸ್ ಮೆಚ್ಚುಗೆ
ಸಿಸಿಎಲ್‌ನಲ್ಲಿ ಅಕ್ಷರಶಃ ಅಬ್ಬರಿಸುತ್ತಿರುವ ಡಾರ್ಲಿಂಗ್ ಕೃಷ್ಣ ಅತ್ಯುತ್ತಮ ಬ್ಯಾಟಿಂಗ್ ಮೂಲಕ ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ. ಅವರ ಬ್ಯಾಟಿಂಗ್ ನೋಡಿದ ಅಭಿಮಾನಿಗಳು ನೀವು ನಟರಾಗುವ ಬದಲು ಕ್ರಿಕೆಟರ್ ಆಗಬೇಕಿತ್ತು ಎಂದು ಹೇಳಿದ್ದಾರೆ.
What do you say?#DarlingKrishna #RoyalChallengersBangalore #RCB #CCL2024 #RvcjKannada pic.twitter.com/o2T3W00AfH
— RVCJ Kannada (@RVCJKannada) March 2, 2024
ಅಲ್ಲದೆ ಹಲವು ಅಭಿಮಾನಿಗಳು ಡಾರ್ಲಿಂಗ್ ಕೃಷ್ಣ ಐಪಿಎಲ್‌ನಲ್ಲಿ ಆರ್ ಸಿಬಿ ತಂಡಕ್ಕಾಗಿ ಆಡಬೇಕು ಎಂದು ಒತ್ತಾಯಿಸಿದ್ದಾರೆ.
ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ನಟಿಸಲು ಡಾರ್ಲಿಂಗ್ ಕೃಷ್ಣ ಸಿದ್ಧರಾಗಿದ್ದಾರೆ. ಹಲಗಲಿ ಸಿನಿಮಾ ಹಲವು ಭಾಷೆಗಳಲ್ಲಿ ತಯಾರಾಗಲಿದೆ. ಹಲಗಲಿ ಬೇಡರ ಸಾಹಸಮಯ ಕಥೆಯನ್ನು ಒಳಗೊಂಡಿದ್ದು, ಬಹುಕೋಟಿ ವೆಚ್ಚದಲ್ಲಿ ಸಿನಿಮಾ ತಯಾರಾಗಲಿದೆ.












Click it and Unblock the Notifications