Salman Khan: ಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ
ಮುಂಬೈ, ಏಪ್ರಿಲ್ 14: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಕಿಡಿಗೇಡಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್‌ಮೆಂಟ್ ಮೇಲೆ ದುಷ್ಕರ್ಮಿಗಳು ಫೈರಿಂಗ್ ಮಾಡಿದ್ದಾರೆ.
ಇಂದು ಬೆಳಗಿನ ಜಾವಾ 5 ಗಂಟೆ ಸುಮಾರಿಗೆ ಬೈಕ್‌ಗಳಲ್ಲಿ ಗ್ಯಾಲಕ್ಸಿ ಅಪಾರ್ಟ್‌ಮೆಂಟ್ ಬಳಿ ಬಂದ ಅಪರಿಚಿತರು, ಅಪಾರ್ಟ್ಮೆಂಟ್ನ ಹೊರ ಭಾಗದಲ್ಲಿ 5 ಸುತ್ತು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ ಎಂದು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗುಂಡಿನ ದಾಳಿ ನಡೆಸಿರುವ ಅಪರಿಚಿತರು ಹೆಲ್ಮೆಟ್ ಧರಿಸಿದ್ದರು ಎನ್ನಲಾಗಿದೆ. ಘಟನಾ ಸಂಬಂಧ ಮುಂಬೈನ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಕ್ರೈಂ ಬ್ಯಾಂಚ್ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳನ್ನು ಪತ್ತೆ ಹಚ್ಚಲು ಗ್ಯಾಲಕ್ಸಿ ಅಪಾರ್ಟ್‌ಮೆಂಟ್ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಸದ್ಯ ಬಾಂದ್ರಾ ಪೊಲೀಸರು ತನಿಖೆ ಮುಂದುವರಿಸಿದ್ದು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ. ಇನ್ನು ಬೆಳಗಿನ ಜಾವಾ 5 ಗಂಟೆ ಸುಮಾರಿಗೆ ಈ ಘಟನೆ ನಡೆದ ಕಾರಣ ಈ ವೇಳೆ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ತಮ್ಮ ನಿವಾಸದಲ್ಲಿ ಇದ್ದರೋ, ಅಥವಾ ಇಲ್ಲವೋ ಎನ್ನುವ ಬಗ್ಗೆ ಈವರೆಗೆಗೂ ಖಚಿತ ಮಾಹಿತಿ ಲಭ್ಯವಾಗಿಲ್ಲ. ಈ ಗುಂಡಿನ ದಾಳಿ ಘಟನೆಯಿಂದ ಗ್ಯಾಲಕ್ಸಿ ಅಪಾರ್ಟ್‌ಮೆಂಟ್ ಸುತ್ತಮುತ್ತಲಿನ ಸ್ಥಳೀಯರು ಆತಂಕಗೊಂಡಿದ್ದಾರೆ.











Click it and Unblock the Notifications