Ranya Rao: 'ಚಿನ್ನ ಕಳ್ಳಿ, ಹೆಂಗಿದೆ ಜೈಲು?' ನಟಿ ರನ್ಯಾ ರಾವ್‌ಗೆ ಕೈದಿಗಳಿಂದ ಕಾಟ
ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಜೈಲು ಸೇರಿರುವ ಮಾಣಿಕ್ಯ ಸಿನಿಮಾ ನಟಿ ರನ್ಯಾ ರಾವ್ ಅವರಿಗೆ ಜೈಲಿನಲ್ಲೂ ನೆಮ್ಮದಿ ಇಲ್ಲದಂತಾಗಿದೆ. ಹಿರಿಯ ಪೊಲೀಸ್ ಅಧಿಕಾರಿ ಪುತ್ರಿಯಾಗಿ, ನಟಿಯಾಗಿ ಮಿಂಚಿದ್ದ ಅವರಿಗೆ ಇದೀಗ ಜೈಲುವಾಸ ದೊಡ್ಡ ನರಕವಾಗಿಬಿಟ್ಟಿದೆ. ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ರನ್ಯಾ ರಾವ್ ಅವರಿಗೆ ಹೊಸ ಸಮಸ್ಯೆಯೊಂದು ಹುಟ್ಟಿಕೊಂಡಿದೆ. ಜೈಲಿನಲ್ಲಿರುವ ಮಹಿಳಾ ಕೈದಿಗಳ ಕಾಟ ಕೊಡುತ್ತಿದ್ದಾರೆ ಎಂದು ರನ್ಯಾ ಅವರು ಜೈಲಾಧಿಕಾರಿಗಳ ಬಳಿ ಅಳಲು ತೋಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಹೌದು, ಸ್ಯಾಂಡಲ್‌ವುಡ್‌ನಲ್ಲಿ ಮಿಂಚಿದ್ದ ರನ್ಯಾ ರಾವ್ ಅವರು ದುಬೈನಿಂದ ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದರು. ತನಿಖೆ ವೇಳೆ ಈ ಬಗ್ಗೆ ಶಾಕಿಂಗ್ ವಿಚಾರಗಳು ಹೊರಬಂದಿದ್ದವು. ಈ ಹಿನ್ನೆಲೆ ರನ್ಯಾ ಅವರನ್ನು ಪೊಲೀಸರು ತನಿಖೆ ನಡೆಸಿ, ಜೈಲಿಗಟ್ಟಿದ್ದರು. ಇನ್ನು ಅರೆಸ್ಟ್ ಆದ ಸಂದರ್ಭದಲ್ಲಿ ರನ್ಯಾ ಅವರು ಗುರುತೇ ಸಿಗದ ಸ್ಥಿತಿಯಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಜೈಲಿನಲ್ಲಿ ಅವರಿಗೆ ಮಹಿಳಾ ಕೈದಿಗಳಿಂದ ಟಾರ್ಚರ್ ಹೆಚ್ಚಾಗಿದೆ ಎಂದು ವರದಿಯಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಇತರೆ ಮಹಿಳಾ ಕೈದಿಗಳು ರನ್ಯಾ ರಾವ್‌ಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ರನ್ಯಾರಾವ್‌ಗೆ ಚಿನ್ನ ಕಳ್ಳಿ ಅಂತೆಲ್ಲ ಅವಮಾನ ಮಾಡುವುದು, ಜೈಲು ಹೇಗಿದೆ ಎಂದು ಚುಚ್ಚಿ ಮಾತನಾಡುತ್ತಿದ್ದಾರೆ. ಹಾಗಾಗಿ ದಯವಿಟ್ಟು ನನ್ನನ್ನು ಬೇರೆ ಬ್ಯಾರಕ್‌ಗೆ ಶಿಫ್ಟ್ ಮಾಡಿ ಎಂದು ಜೈಲಿನ ಅಧಿಕಾರಿಗಳಿಗೆ ಬೇಡಿಕೊಂಡಿದ್ದಾರಂತೆ. ಅಲ್ಲದೆ ರನ್ಯಾ ಅವರ ಮನವಿಗೆ ಸ್ಪಂದಿಸಿರುವ ಅಧಿಕಾರಿಗಳು ಅವರನ್ನು ಬೇರೆ ಬ್ಯಾರಕ್‌ಗೆ ಶಿಫ್ಟ್ ಮಾಡಲು ತಯಾರಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಬರೋಬ್ಬರಿ 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಕೇಸ್‌ನಲ್ಲಿ ಅರೆಸ್ಟ್ ಆಗಿರುವ ನಟಿ ರನ್ಯಾ ರಾವ್ ಅವರಿಗೆ ಇತ್ತೀಚೆಗೆ ಬೆಂಗಳೂರಿನ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಆದರೆ ಜಾಮೀನು ಸಿಕ್ಕರೂ ರನ್ಯಾಗೆ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ರನ್ಯಾ ರಾವ್ ಮತ್ತು ಅವರ ಇಬ್ಬರು ಸಹಚರರಾದ ತರುಣ್, ಸಾಹಿಲ್ ಅವರನ್ನು ಕಠಿಣ ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಿರುವುದರಿಂದ ನಟಿಯನ್ನು ಜೈಲಿನಿಂದ ರಿಲೀಸ್ ಮಾಡಿರಲಿಲ್ಲ. ಹಾಗಾಗಿ ಅವರು ಜೈಲಿನಲ್ಲೇ ಇದ್ದಾರೆ.
ಅಲ್ಲದೆ ಈ ಕೇಸ್ ತನಿಖೆ ನಡೆಸುತ್ತಿರುವ ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಶಿಫಾರಸಿನ ಮೇರೆಗೆ ನಟಿ ಮತ್ತು ಇತರೆ ಆರೋಪಿಗಳ ವಿರುದ್ಧ ಕೇಂದ್ರೀಯ ಆರ್ಥಿಕ ಗುಪ್ತಚರ ಬ್ಯೂರೋ ಕೂಡ ಕಠಿಣ ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯ್ದೆ ಜಾರಿಗೊಳಿಸಿದೆ. ಈ ಕಾಯ್ದೆಯ ಅನ್ವಯ ಆರೋಪಿ ರನ್ಯಾ ರಾವ್‌ಗೆ ಒಂದು ವರ್ಷ ಜಾಮೀನು ಪಡೆಯಲು ಅವಕಾಶವಿಲ್ಲ. ಈಗ ಜೈಲಿನಲ್ಲೂ ರನ್ಯಾ ರಾವ್‌ಗೆ ಕೈದಿಗಳಿಂದ ಕಾಟ ಹೆಚ್ಚಾಗಿದೆ.












Click it and Unblock the Notifications