Get Updates
Get notified of breaking news, exclusive insights, and must-see stories!

Puneeth Rajkumar: ಅಪ್ಪು ಅಭಿಮಾನಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಅಶ್ವಿನಿ ಪುನೀತ್ ರಾಜ್‌ಕುಮಾರ್

ಹೊಸ ವರ್ಷದ ಬೆನ್ನಲ್ಲೇ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಪವರ್ ಸ್ಟಾರ್ ದಿ. ಪುನೀತ್ ರಾಜ್‌ಕುಮಾರ್ ಅವರ ಅಭಿಮಾನಿಗಳು ಸಿಹಿ ಸುದ್ದಿ ಕೊಟ್ಟಿದ್ದಾರೆ. ಪುನೀತ್ ರಾಜ್‌ಕುಮಾರ್ ಅವರು ಅಜರಾಮರ. ಅವರು ಕನ್ನಡಿಗರಿಗೆ ಕೊಟ್ಟ ಪ್ರೀತಿ ಹಾಗೂ ಕನ್ನಡ ಸಿನಿಮಾಗಳಿಗೆ ಕೊಟ್ಟ ಕೊಡುಗೆ ಅನನ್ಯ. ಪ್ರತಿ ಬಾರಿ ಸ್ಟಾರ್ ನಟರ ಸಿನಿಮಾಗಳು ಬಿಡುಗಡೆಯಾದಾಗಲೂ ಅವರ ಅಪ್ಪಟ ಅಭಿಮಾನಿಗಳಿಗೆ ಪುನೀತ್ ಅವರು ಇರಬೇಕಿತ್ತು. ಅವರ ಸಿನಿಮಾಗಳು ಸಹ ರಿಲೀಸ್ ಆಗುತ್ತಿತ್ತು ಎನ್ನುವ ಕೊರಗು ಇದ್ದೇ ಇದೆ. ಇದೀಗ ಅಪ್ಪು - ಪರಮಾತ್ಮನ ನೆನಪು ಹಚ್ಚಹಸಿರಾಗಿಸಲು ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಮತ್ತೊಂದು ಪ್ರಯತ್ನಕ್ಕೆ ಮುಂದಾಗಿದ್ದಾರೆ.

ಪುನೀತ್ ರಾಜ್‌ಕುಮಾರ್ ಅವರ ಸ್ಮರಣಾರ್ಥವಾಗಿ ಅವರ ಅಭಿಮಾನಿಗಳು ಹಲವು ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ. ಅಪ್ಪು ಅವರ ಜನ್ಮದಿನದಂದು ಅನ್ನಸಂತರ್ಪಣೆ, ಬಡವರಿಗೆ ಸಹಾಯ ಹಾಗೂ ರಕ್ತದಾನದಂತಹ ಸಮಾಜ ಸೇವೆ ಮಾಡುತ್ತಿದ್ದಾರೆ. ಪ್ರತಿ ವರ್ಷ ಮಾರ್ಚ್ 17ರಂದು ಅಭಿಮಾನಿಗಳು ಅದ್ಧೂರಿಯಾಗಿ ಪುನೀತ್ ರಾಜ್‌ಕುಮಾರ್ ಅವರ ಹುಟ್ಟುಹಬ್ಬ ಆಚರಿಸಿಕೊಂಡು ಬರುತ್ತಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಈ ಸಂಭ್ರಮಾಚರಣೆಯ ಸಂದರ್ಭದಲ್ಲಿಯೇ ಪುನೀತ್ ರಾಜ್ ಕುಮಾರ್ ಅವರು ನಟಿಸಿದ್ದ ಸೂಪರ್ ಹಿಟ್ ಸಿನಿಮಾಗಳನ್ನು ರೀ-ರಿಲೀಸ್ ಮಾಡಲಾಗುತ್ತಿದೆ.

Good News for Appu Fans Ashwini Puneeth Rajkumar s Big Announcement

ಅದ್ಧೂರಿ ಪ್ರತಿಕ್ರಿಯೆ

ಪುನೀತ್ ರಾಜ್‌ಕುಮಾರ್ ಅವರು ಎರಡು ಸಿನಿಮಾಗಳನ್ನು ಈಗಾಗಲೇ ರೀ ರಿಲೀಸ್ ಮಾಡಲಾಗಿದ್ದು. ಈ ಸಿನಿಮಾಗಳಿಗೆ ಅಭಿಮಾನಿಗಳಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇತ್ತೀಚೆಗೆ ಪುನೀತ್ ರಾಜ್‌ಕುಮಾರ್ ಅವರ ಸಿನಿಮಾಗಳಾದ ಜಾಕಿ ಮತ್ತು ಅಪ್ಪು ರೀ - ರಿಲೀಸ್ ಮಾಡಲಾಗಿತ್ತು. ಈ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ಹೊಸ ದಾಖಲೆ ಸೃಷ್ಟಿ ಮಾಡಿದ್ದವು. 2026ನೇ ಸಾಲಿನಲ್ಲಿ ಮತ್ತೊಂದು ಹಿಟ್ ಸಿನಿಮಾ ಮರು ಬಿಡುಗಡೆಗೆ ಮಾಡುವುದಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಅಪ್ಪು ಅವರು ನಟಿಸಿದ ಬಹುತೇಕ ಸಿನಿಮಾಗಳು ಸಕ್ಸಸ್ ಕಂಡಿವೆ. ಅಲ್ಲದೇ ಎಲ್ಲಾ ನಟರ ಅಭಿಮಾನಿಗಳು ನೋಡುವ ಹಾಗೂ ಮನೆ ಮಂದಿಯೆಲ್ಲಾ ಸೇರಿ ನೋಡಬಹುದಾದ ಸಿನಿಮಾ ಎನ್ನುವ ಖ್ಯಾತಿಯನ್ನೂ ಅಪ್ಪು ಅವರ ಸಿನಿಮಾಗಳು ಗಳಿಸಿವೆ. ತಮ್ಮ ಹೋಂ ಬ್ಯಾನರ್ ಸಿನಿಮಾಗಳಲ್ಲಿ ಪುನೀತ್ ರಾಜ್‌ಕುಮಾರ್ ಕೆಲವು ಸಿನಿಮಾಗಳಲ್ಲಿ ನಟಿಸಿದ್ದರು. 2005ರಲ್ಲಿ ತೆರೆಗೆ ಬಂದಿದ್ದ ಆಕಾಶ್ ಸಿನಿಮಾ ಹಿಟ್ ಲಿಸ್ಟ್ ನಲ್ಲಿದೆ. ಅಭಿ ಸಿನಿಮಾದ ನಂತರ ಪುನೀತ್ ಮತ್ತ ರಮ್ಯಾ ಜೋಡಿ ಮತ್ತೊಮ್ಮೆ ಜೊತೆಯಾಗಿ ಅಭಿನಯಿಸಿದ್ದ ಈ ಸಿನಿಮಾ ಪ್ರೇಕ್ಷಕರ ಮನಸ್ಸು ಗೆದ್ದಿತ್ತು. ಮಹೇಶ್ ಬಾಬು ನಿರ್ದೇಶನದ ಈ ರೊಮ್ಯಾಂಟಿಕ್ ಫ್ಯಾಮಿಲಿ ಎಂಟರ್‌ಟೈನರ್ ಈ ವರ್ಷ ರೀ - ರಿಲೀಸ್ ಆಗಲಿದೆ.

ಅಶ್ವಿನಿ ಪುನೀತ್ ರಾಜ್‌ಕುಮಾರ್ ಟ್ವೀಟ್

ಪುನೀತ್ ರಾಜ್ ಕುಮಾರ್ ಅವರ ಜನ್ಮದಿನಾಚರಣೆಯ ಭಾಗವಾಗಿ ಇದೇ ಮಾರ್ಚ್ 13ಕ್ಕೆ ಆಕಾಶ್ ಚಿತ್ರವನ್ನು ಹೊಸ ರೂಪದಲ್ಲಿ ತೆರೆಗೆ ತರುವುದಾಗಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಘೋಷಿಸಿದ್ದಾರೆ. 4K ರೀ-ಮಾಸ್ಟರ್ಡ್ ವರ್ಷನ್‌ ಸಿನಿಮಾ ಬಿಡುಗಡೆ ಆಗಲಿದೆ. ನೀನೆ.. ನೀನೆ ನನಗೆಲ್ಲಾ ನೀನೆ... ಮಾತು ನೀನೆ ಮನಸೆಲ್ಲಾ ನೀನೆ ಎಷ್ಟು ವರ್ಷಗಳಾದರೂ ಆದರೂ ಮರೆಯಾಗದ ಕಥೆಗೆ ಸಾಕ್ಷಿಯಾಗಲು ಸಿದ್ಧರಾಗಿ.

ಡಾ. ಪುನೀತ್ ರಾಜ್‌ಕುಮಾರ್ ಅವರ ಜನ್ಮದಿನದಂದು ಆಕಾಶ್ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣಲಿದೆ ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೇ ಇದೇ ಸಂದರ್ಭದಲ್ಲಿ ಹೊಸ ಪೋಸ್ಟರ್ ಸಹ ಹಂಚಿಕೊಂಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+