Rakshak Bullet: ಚಾಮುಂಡೇಶ್ವರಿ ದೇವಿ ಅವಹೇಳನ! ಹಿಂದೂಗಳ ಆಕ್ರೋಶಕ್ಕೆ ಗುರಿಯಾದ ರಕ್ಷಕ್ ಬುಲೆಟ್

ಬಿಗ್ ಬಾಸ್ ಮಾಜಿ ಸ್ಪರ್ಧಿ ಬುಲೆಟ್ ಪ್ರಕಾಶ್ ಇದೀಗ ಏನೋ ಮಾಡಲು ಹೋಗಿ ವಿವಾದ ಮೈಮೇಲೆ ಎಳದುಕೊಂಡಿದ್ದಾರೆ. ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋನಲ್ಲಿ ದರ್ಶನ್ ಅಭಿನಯದ ಸಿನಿಮಾದ ಡೈಲಾಗ್ ಹೊಡೆದಿದ್ದು ಇದೀಗ ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ರಕ್ಷಕ್‌ಗೆ ಹಿಗ್ಗಾ ಮುಗ್ಗಾ ಕ್ಲಾಸ್ ತೆಗೆದುಕೊಳ್ಳಲಾಗಿದೆ.

ಖ್ಯಾತ ಹಾಸ್ಯನಟ ಬುಲೆಟ್ ಪ್ರಕಾಶ್ ಅವರ ಪುತ್ರ ಬುಲೆಟ್ ಪ್ರಕಾಶ್ ಸ್ಯಾಂಡಲ್‌ವುಡ್‌ನಲ್ಲಿ ನೆಲೆ ನಿಲ್ಲಲು ಪ್ರಯತ್ನ ಮಾಡುತ್ತಿದ್ದಾರೆ. ಬಿಗ್ ಬಾಸ್ ಬಳಿಕ ಮತ್ತೊಂದು ರಿಯಾಲಿಟಿ ಶೋನಲ್ಲಿ ಕಾಣಿಸಿಕೊಳ್ಳುತ್ತಿದ್ದು ಜನರಿಗೆ ಹತ್ತಿರವಾಗಲು ಸರ್ಕಸ್ ಮಾಡುತ್ತಿದ್ದಾರೆ. ದರ್ಶನ್ ಅಭಿಮಾನಿ ಎಂದೇ ಗುರುತಿಸಿಕೊಳ್ಳುವ ಅವರು, ಇದೀಗ ದರ್ಶನ್‌ ಅಭಿನಯದ ಸಿನಿಮಾವೊಂದರ ಡೈಲಾಗ್‌ನಿಂದಲೇ ಜನಾಕ್ರೋಶಕ್ಕೆ ಗುರಿಯಾಗಿದ್ದಾರೆ.

Hindus angry over actor rakshak bullet comment over goddess chamundeshwari

ಏನಿದು ವಿವಾದ?

ಜೀ ಕನ್ನಡದ ಭರ್ಜರಿ ಬ್ಯಾಚುಲರ್ಸ್‌-2 ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ರಕ್ಷಕ್ ಬುಲೆಟ್ ದರ್ಶನ್ ತೂಗುದೀಪ ಅಭಿನಯದ ಬುಲ್ ಬುಲ್ ಸಿನಿಮಾದ ದೃಶ್ಯವನ್ನು ಮರುಸೃಷ್ಟಿಸಲು ಹೋಗಿ ಎಡವಟ್ಟು ಮಾಡಿಕೊಂಡಿದ್ದಾರೆ. ರಮೋಲಾ ಜೊತೆ ಸಿನಿಮಾದ ಡೈಲಾಗ್ ಹೇಳುವಾಗ ಚಾಮುಂಡೇಶ್ವರಿ ತಾಯಿಗೆ ಅವಮಾನ ಮಾಡಿದ್ದಾರೆ ಎಂದು ಹಿಂದೂಗಳು ಈಗ ಸಿಟ್ಟಾಗಿದ್ದಾರೆ.

ದರ್ಶನ್ ಹಾಗೂ ರಚಿತಾ ರಾಮ್ ಅಭಿನಯದ ಬುಲ್ ಬುಲ್ ಸಿನಿಮಾದ ದೃಶ್ಯವನ್ನು ಮರುಸೃಷ್ಟಿ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿದ್ದ ರಚಿತಾ ರಾಮ್‌ ದೃಶ್ಯವನ್ನು ನೋಡಿ ಮೆಚ್ಚಿಕೊಂಡರು. ಬುಲ್ ಬುಲ್ ಸಿನಿಮಾದ ವಿವಾದಿತ ಸಂಭಾಷಣೆಯನ್ನು ರಕ್ಷಕ್ ಬುಲೆಟ್ ಹೇಳಿದ್ದು ವಿವಾದಕ್ಕೆ ಕಾರಣವಾಗಿದೆ.

ಏನದು ಡೈಲಾಗ್‌?

ಬುಲ್ ಬುಲ್ ಸಿನಿಮಾದಲ್ಲಿ ದರ್ಶನ್‌ ರಚಿತಾ ರಾಮ್‌ರನ್ನು ಸ್ವಿಟ್ಜರ್ಲೆಂಡ್‌ನಲ್ಲಿ ಭೇಟಿಯಾದಾಗ ಹೊಡೆಯುವ ಡೈಲಾಗ್‌ ಅನ್ನೇ ರಕ್ಷಕ್ ಬುಲೆಟ್ ಹೇಳಿದ್ದಾರೆ 'ನಿಮ್ಮನ್ನ ನೋಡ್ತಾ ಇದ್ದ ಹಾಗೆಯೇ ಅಂದುಕೊಂಡೆ. ತಾಯಿ ಚಾಮುಂಡೇಶ್ವರಿನೇ ಬೆಟ್ಟದಿಂದ ಇಳಿದು, ಸೀರೆ-ಒಡವೆ ಎಲ್ಲಾ ಬಿಚ್ಚಿಟ್ಟು, ಪ್ಯಾಂಟು-ಶರ್ಟು ಹಾಕಿಕೊಂಡು ಸ್ವಿಜರ್ಲೆಂಡ್‌ಅಲ್ಲಿ ಒಳ್ಳೇ ಟ್ರಿಪ್‌ ಹೊಡೀತಾ ಇದ್ದಾರೆ ಅಂತಾ' ಎನ್ನುವ ಡೈಲಾಗ್‌ ಇದೀಗ ವಿವಾದದ ಕಿಡಿ ಹೊತ್ತಿಸಿದೆ.

ರಕ್ಷಕ್ ಬುಲೆಟ್‌ ಏನೋ ಉತ್ಸಾಹದಲ್ಲೇ ಡೈಲಾಗ್ ಹೊಡೆದಿದ್ದಾರೆ. ಆದರೆ ಚಾಮುಂಡೇಶ್ವರಿ ಸೀರೆ ಒಡವೆ ಬಿಚ್ಚಿಟ್ಟು ಪ್ಯಾಂಟು ಶರ್ಟ್ ಹಾಕಿಕೊಂಡು ಎನ್ನುವ ಸಾಲುಗಳೇ ವಿವಾದಕ್ಕೆ ಕಾರಣವಾಗಿದೆ. ಹಿಂದೂ ಧರ್ಮ, ದೇವರು ಎಂದರೆ ಎಲ್ಲರಿಗೂ ಮನರಂಜನೆಯ ವಸ್ತುವಾಗಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+