Darshan Thoogudeepa: ನಟ ದರ್ಶನ್ ಮತ್ತೆ ಜೈಲಿಗೆ..! ಹೋಂ ಮಿನಿಸ್ಟರ್ ಕೊಟ್ರು ಸುಳಿವು
ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿದ್ದ ನಟ ದರ್ಶನ್ ತೂಗುದೀಪ ಅವರು ಸದ್ಯ ಚಿಕಿತ್ಸೆಗಾಗಿ 6 ವಾರಗಳ ಮಧ್ಯಂತರ ಜಾಮೀನು ಪಡೆದು ಹೊರಬಂದಿದ್ದಾರೆ. ಒಂದೆಡೆ ದರ್ಶನ್ ಅವರು ಜಾಮೀನಿನ ಅವಧಿ ವಿಸ್ತರಿಸುವಂತೆ ಮನವಿ ಮಾಡಲು ಮುಂದಾಗಿದ್ದರೆ, ಮತ್ತೊಂದೆಡೆ ಶೀಘ್ರದಲ್ಲೇ ದರ್ಶನ್ ಅವರು ಮತ್ತೆ ಜೈಲಿಗೆ ಹೋಗುವ ಮುನ್ಸೂಚನೆ ಕೂಡ ಸಿಕ್ಕಿದೆ.
ಹೌದು ಮೈಸೂರಿನಲ್ಲಿ ಈ ಬಗ್ಗೆ ಖುದ್ದು ಗೃಹ ಸಚಿವ ಜಿ.ಪರಮೇಶ್ವರ್ ಅವರೇ ಮಾಹಿತಿ ನೀಡಿದ್ದಾರೆ. ಬೆನ್ನು ನೋವಿನ ಸಂಬಂಧ ಚಿಕಿತ್ಸೆಗಾಗಿ ನಟ ದರ್ಶನ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಚಿಕಿತ್ಸೆ ಮುಗಿದ ಬಳಿಕ ಜಾಮೀನು ಕೊಡಬಾರದು ಎಂದು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ದರ್ಶನ್ ಚಿಕಿತ್ಸೆ ಬಳಿಕ ಮತ್ತೆ ಜಾಮೀನಿಗೆ ಅರ್ಜಿ ಸಲ್ಲಿಸಬಹುದು. ರೇಣುಕಾಸ್ವಾಮಿ ಕೊಲೆ ಕೇಸ್ ಬಗ್ಗೆ ಮತ್ತಷ್ಟು ತನಿಖೆ ನಡೆಯುತ್ತಿದೆ. ತನಿಖೆ ಪೂರ್ಣವಾದ ನಂತರ ಚಾರ್ಜ್‌ಶೀಟ್ ಸಲ್ಲಿಕೆಯಾಗಲಿದೆ. ಹೀಗಾಗಿ ಜಾಮೀನು ನೀಡದಂತೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗುವುದು ಎಂದಿದ್ದಾರೆ.
ದರ್ಶನ್ ಚಿಕಿತ್ಸೆ ಬಳಿಕ ಜೈಲಿಗೆ ಹೋಗಬೇಕು. ದರ್ಶನ್ ಸದ್ಯ ಚಿಕಿತ್ಸೆಯ ಉದ್ದೇಶದಿಂದ ಮೂರು ತಿಂಗಳುಗಳ ಜಾಮೀನು ಪಡೆದಿದ್ದಾರೆ. ಅವರು ಜಾಮೀನಿನ ಅವಧಿ ವಿಸ್ತರಣೆ ಮನವಿ ಮಾಡಿಕೊಂಡಿರುವುದು ನನಗೆ ತಿಳಿದಿಲ್ಲ. ರೇಣುಕಾಸ್ವಾಮಿ ಕೊಲೆ ಕೇಸ್ ತನಿಖೆ ಚುರುಕಾಗಿದ್ದು, ಹೆಚ್ಚುವರಿ ಚಾರ್ಜ್‌ಶೀಟ್ ಸಲ್ಲಿಸುವ ಪ್ರಕ್ರಿಯೆ ನಡೆಯುತ್ತಿದೆ. ಇದಕ್ಕಾಗಿ ಮತ್ತಷ್ಟು ಸಾಕ್ಷಿ ಸಂಗ್ರಹಿಸುವ ಕೆಲಸವೂ ನಡೆಯುತ್ತಿದೆ. ಬಳಿಕ ಚಾರ್ಜ್‌ಶೀಟ್ ಸಲ್ಲಿಸಿ, ಜಾಮೀನು ಕೊಡದಂತೆ ಸುಪ್ರೀಂಕೋರ್ಟ್‌ನಲ್ಲಿ ಕೇಳಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಜಾತಿ ಗಣತಿ ಬಗ್ಗೆ ಪರಮೇಶ್ವರ್ ಮಹತ್ವದ ಮಾಹಿತಿ!
ಜಾತಿಗಣತಿ ಜಾರಿಯಾಗಬೇಕಾ? ಎನ್ನುವ ಬಗ್ಗೆ ಚರ್ಚೆಗಳು ಜೋರಾಗಿ ನಡೆಯುತ್ತಿವೆ. ಯಾವ ಸಮುದಾಯ ಹೆಚ್ಚಿದೆ, ಯಾವ ಸಮುದಾಯ ಕಡಿಮೆ ಇದೆ ಎನ್ನುವ ಮಾಹಿತಿ ಸರ್ಕಾರಕ್ಕೆ ಅಗತ್ಯವಿದೆ. ಜಾತಿಗಣತಿ ವರದಿ ಅನುಷ್ಠಾನದ ವೇಳೆ ಬಿಜೆಪಿ ಸೇರಿದಂತೆ ಪ್ರತಿಪಕ್ಷದ ನಾಯಕರ ಟೀಕೆಗಳಿಗೆ ಉತ್ತರ ನೀಡುತ್ತೇವೆ ಎಂದು ಸಚಿವ ಪರಮೇಶ್ವರ್ ಹೇಳಿದ್ದಾರೆ.
ರಾಜ್ಯದಲ್ಲಿ ನಡೆದಿರುವ ಮೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲುವು ಸಿಗಲಿದೆ. ನಮಗಿರುವ ಮಾಹಿತಿ ಪ್ರಕಾರ ಮೂರೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ. ಎಕ್ಸಿಟ್ ಪೋಲ್‌ಗಳು ಎಲ್ಲ ಸಂದರ್ಭದಲ್ಲಿ ನಿಜವಾಗಿರುವುದಿಲ್ಲ. ಕೆಲ ಸಮೀಕ್ಷೆಗಳು ನಮ್ಮ ಪರವಾಗಿದ್ದರೆ, ಇನ್ನು ಕೆಲವು ಎನ್‌ಡಿಎ ಪರವಾಗಿ ಬಾರಿ ಬಹುಮತದ ವರದಿ ನೀಡುತ್ತವೆ. ನಾನು ಮಹಾರಾಷ್ಟ್ರದ ಉಸ್ತುವಾರಿ ವಹಿಸಿದ್ದೆ, ಅಲ್ಲಿ ಬೇರೆಯೇ ವಾತಾವರಣವಿದೆ ಎಂದಿದ್ದಾರೆ.
ಇನ್ನು ರಾಜ್ಯ ಸಚಿವ ಸಂಪುಟ ಪುನರ್ ರಚನೆ ಸಿಎಂ ವಿವೇಚನೆ ಮತ್ತು ಹೈಕಮಾಂಡ್‌ಗೆ ಬಿಟ್ಟ ವಿಚಾರ. ಸಿಎಂ ಅವರು ಪಕ್ಷದ ಹೈಕಮಾಂಡ್‌ನೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಾರೆ. ಸಚಿವರ ಬದಲಾವಣೆ ವಿಚಾರದ ಬಗ್ಗೆ ನನಗೆ ಏನೂ ಗೊತ್ತಿಲ್ಲ, ಸಚಿವ ಜಮೀರ್ ಅಹ್ಮದ್ ಅವರ ಬದಲಾವಣೆ ವಿಚಾರದ ಬಗ್ಗೆಯೂ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.












Click it and Unblock the Notifications