ರಜನಿಕಾಂತ್‌ರ ಜೈಲರ್ ಸಿನಿಮಾ ವಿಲನ್ ವಿನಾಯಕನ್ ಬಂಧನ!
ಇತ್ತೀಚೆಗೆ ಬಿಡುಗಡೆಯಾಗಿ ಭಾರಿ ಯಶಸ್ಸು ಕಂಡ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಜೈಲರ್ ಸಿನಿಮಾದಲ್ಲಿ ವಿಲನ್ ಆಗಿದ್ದ ವಿನಾಯಕನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅಸಭ್ಯ ವರ್ತನೆ ತೋರಿದ ಆರೋಪದ ಮೇಲೆ ಮಲಯಾಳಂನ ಜನಪ್ರಿಯ ನಟ ವಿನಾಯಕನ್‌ರನ್ನು ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ಮಲಯಾಳಂ ನಟ ವಿನಾಯಕನ್ ಶನಿವಾರ ಹೈದರಾಬಾದ್ ವಿಮಾನ ನಿಲ್ದಾಣದ ಏರೋಡ್ರೋಮ್‌ನಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ದೂರನ್ನು ಆಧರಿಸಿ ಆರ್‌ಜಿಐ ವಿಮಾನ ನಿಲ್ದಾಣ ಪೊಲೀಸರು ನಗರ ಪೊಲೀಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಬಂಧನದ ವೇಳೆ ವಿನಾಯಕನ್ ಅವರು ಮದ್ಯವನ್ನು ಸೇವಿಸಿದ್ದು, ಅಮಲು ಇಳಿದ ಬಳಿಕ ವಿಚಾರಣೆ ನಡೆಸಿ ಬಿಡುಗಡೆ ಮಾಡಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆದರೆ ನಟ ಮಾತ್ರ ತಾನು ಯಾವ ತಪ್ಪು ಮಾಡಿಲ್ಲ, ನನ್ನ ಮೇಲೆ ಭದ್ರತಾ ಸಿಬ್ಬಂದಿಯೇ ಹಲ್ಲೆ ಮಾಡಿದ್ದಾರೆ ಎಂದು ವಿನಾಯಕನ್ ಆರೋಪ ಮಾಡಿದ್ದಾರೆ ಎಂದು ಹೇಳಿರುವುದಾಗಿ ಮಲಯಾಳಂ ಮಾಧ್ಯಮಗಳು ವರದಿ ಮಾಡಿವೆ.
ಕೊಚ್ಚಿಯಿಂದ ಹೈದರಾಬಾದ್ ಮೂಲಕ ಗೋವಾಕ್ಕೆ ಹಾರುತ್ತಿದ್ದ ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದ ವಿನಾಯಕನ್ ಶನಿವಾರ ಸಂಜೆ ಏರ್‌ಲೈನ್‌ನ ಗೇಟ್ ಸಿಬ್ಬಂದಿಯೊಂದಿಗೆ ಜಗಳವಾಡಿದ್ದಲ್ಲದೆ, ಅಸಭ್ಯವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಅವರನ್ನು ಸಿಐಎಸ್‌ಎಫ್‌ಗೆ ಹಸ್ತಾಂತರಿಸಲಾಯಿತು.
ಸಿಐಎಸ್ಎಫ್ ನೀಡಿದ ದೂರಿನ ಮೇರೆಗೆ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿನಾಯಕನ್ ಮಲಯಾಳಂನಲ್ಲಿ ಜನಪ್ರಿಯ ನಟ, ಕಮ್ಮಟಿಪಾದಂ, ತೊಟ್ಟಪ್ಪನ್‌ನಂತಹ ಚಿತ್ರಗಳಲ್ಲಿ ನಟಿಸಿ ಜನ ಮೆಚ್ಚುಗೆ ಪಡೆದಿದ್ದಾರೆ.
ಇತ್ತೀಚೆಗೆ ಬಿಡುಗಡೆಯಾಗಿದ್ದ ಜೈಲರ್ ಸಿನಿಮಾದಲ್ಲಿ ರಜನಿಕಾಂತ್ ವಿರುದ್ಧ ಖಳನಟನಾಗಿ ಅಭಿನಯಿಸಿದ್ದ ಅವರು ಭಾರಿ ಮೆಚ್ಚುಗೆ ಪಡೆದುಕೊಂಡಿದ್ದರು. ದೊಡ್ಡ ಮಟ್ಟದ ಯಶಸ್ಸು ಕೂಡ ಅವರಿಗೆ ಸಿಕ್ಕಿದೆ.












Click it and Unblock the Notifications