Joe Simon Passes Away: ಫಿಲಂ ಚೇಂಬರ್ನಲ್ಲೇ ಹೃದಯಾಘಾತ: ಹಿರಿಯ ನಿರ್ದೇಶಕ ಜೋ ಸೈಮನ್ ನಿಧನ
Joe Simon Passes Away: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಜೋ ಸೈಮನ್(80) ಅವರು ನಿಧನರಾಗಿದ್ದಾರೆ. ಫಿಲಂ ಚೇಂಬರ್ನಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ಸಮಯದಲ್ಲೇ ಅವರಿಗೆ ಹೃದಯಾಘಾತ ಸಂಭವಿಸಿದ್ದು, ತಕ್ಷಣವೇ ಅವರನ್ನು ಸಮೀಪದ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಯುವ ಪ್ರತಿಭೆಗಳಿಗೆ ಮಾರ್ಗದರ್ಶನ: ದಶಕಗಳ ಕಾಲ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಜೋ ಸೈಮನ್ ಅವರು, ನಿರ್ದೇಶಕನಾಗಿ ಮಾತ್ರವಲ್ಲದೆ ನಟ ಹಾಗೂ ಗೀತರಚನೆಕಾರನಾಗಿಯೂ ಗುರುತಿಸಿಕೊಂಡವರಾಗಿದ್ದರು. ಸುಮಾರು 100ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ವಿಭಿನ್ನ ಪಾತ್ರಗಳಲ್ಲಿ ಕೆಲಸ ಮಾಡುವ ಮೂಲಕ ಅವರು ಚಿತ್ರರಂಗಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ. ವಾಣಿಜ್ಯ ಹಾಗೂ ಕಥಾ ಪ್ರಧಾನ ಎರಡೂ ಶೈಲಿಯ ಸಿನಿಮಾಗಳಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದ ಅವರು, ಹಲವಾರು ಯುವ ಪ್ರತಿಭೆಗಳಿಗೆ ಅವಕಾಶ ನೀಡಿ ಮಾರ್ಗದರ್ಶನ ನೀಡಿದ ಹಿರಿಯ ನಿರ್ದೇಶಕರಾಗಿದ್ದರು.

ಜೋ ಸೈಮನ್ ಅವರ ನಿಧನಕ್ಕೆ ಚಿತ್ರರಂಗದ ಅನೇಕ ಗಣ್ಯರು ಸಂತಾಪ ಸೂಚಿಸಿದ್ದು, ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಅಪಾರ ಸೇವೆ ಸಲ್ಲಿಸಿದ ಅವರ ಅಗಲಿಕೆ ಸ್ಯಾಂಡಲ್ವುಡ್ಗೆ ತುಂಬಲಾರದ ನಷ್ಟವಾಗಿದೆ ಎಂದು ಸಹೋದ್ಯೋಗಿಗಳು ಅಭಿಪ್ರಾಯಪಟ್ಟಿದ್ದಾರೆ.
ಫಿಲ್ಮ್ ಚೇಂಬರ್ನಲ್ಲಿ ನಡೆಯುತ್ತಿದ್ದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಜೊ ಸೈಮನ್ ಭಾಗಿ ಆಗಿದ್ದರು. ಸಭೆಯಲ್ಲಿ ಮಾತನಾಡಿದ ಬಳಿಕ ವಾಶ್ ರೂಮ್ಗೆ ಹೋಗಿದ್ದು, ಈ ವೇಳೆ ಅವರು ವಾಂತಿ ಮಾಡಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಜೊ ಸೈಮನ್ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಜೊ ಸೈಮನ್ ಸಿನಿಮಾ ಜೀವನ: ವಿಷ್ಣುವರ್ಧನ್ ಅಭಿನಯದ ಸಾಹಸಸಿಂಹ ಚಿತ್ರದ ನಿರ್ದೇಶಕರಾಗಿದ್ದ ಜೊ ಸೈಮನ್ ಅವರ ಜೊತೆ, ನನ್ನ ರೋಷ ನೂರು ವರುಷ, ಮಹಾ ಪ್ರಚಂಡರು, ಸಾಹಸಸಿಂಹ ಸೇರಿದಂತೆ ಹಲವು ಹಿಟ್ ಸಿನಿಮಾಗಳನ್ನು ನೀಡಿದ್ದರು. ಮಂಡ್ಯ ಮೂಲದ ಜೊ ಸೈಮನ್ ಆರಂಭದಲ್ಲಿ ಟಚ್ ಅಪ್ ಬಾಯ್, ಸಹಾಯಕ ಮೇಕ್ಅಪ್ ಮ್ಯಾನ್ ಮತ್ತು ಸೆಟ್ ಬಾಯ್ ಆಗಿ ಕೆಲಸ ಮಾಡಿದ್ದರು.
ಬಳಿಕ ಅವರು ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಲು ಪ್ರಾರಂಭಿಸಿದರು. ಅವರು ಕೆ.ಎಸ್.ಆರ್.ದಾಸ್, ಆರ್.ಎನ್. ಜಯಗೋಪಾಲ್, ಕಣಗಾಲ್ ಪ್ರಭಾಕರ ಶಾಸ್ತ್ರಿ, ಎಸ್.ವಿ.ರಾಜೇಂದ್ರ ಸಿಂಗ್ ಬಾಬು ಮುಂತಾದ ನಿರ್ದೇಶಕರೊಂದಿಗೆ ಕೆಲಸ ಮಾಡಿದ್ದಾರೆ. ಕರ್ನಾಟಕ ಚಾಲನಚಿತ್ರ ಅಕಾಡೆಮಿ ಜೊ ಸೈಮನ್ ಅವರ ಜೀವಿತಾವಧಿ ಸಾಧನೆ ಗುರುತಿಸಿ 2013ರಲ್ಲಿ ಬಿ.ಆರ್.ಪಂತುಲು ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications