Kaatera: ವಿದೇಶದಲ್ಲೂ ಅಬ್ಬರಿಸಲು ಸಿದ್ಧವಾದ ಕಾಟೇರ: ಯಾವ್ಯಾವ ದೇಶಗಳಲ್ಲಿ ರಿಲೀಸ್ ಗೊತ್ತಾ?

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಸಿನಿಮಾ ಈಗಾಗಲೇ ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿದೆ. ಮೂರೇ ದಿನದಲ್ಲಿ 50 ಕೋಟಿ ರೂಪಾಯಿಗೂ ಹೆಚ್ಚು ಗಳಿಕೆ ಕಂಡಿರುವ ಸಿನಿಮಾ, ಸೋಮವಾರ ಕೂಡ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದೆ.

ಡಿಸೆಂಬರ್ 29ರಂದು ಬಿಡುಗಡೆಯಾದ ಸಿನಿಮಾ ದಿನದಿಂದ ದಿನಕ್ಕೆ ಪ್ರದರ್ಶನದ ಸಂಖ್ಯೆಯನ್ನು ಹೆಚ್ಚಿಸಿಕೊಂಡಿದೆ. ದರ್ಶನ್ ವೃತ್ತಿ ಜೀವನದಲ್ಲೇ ಇದು ದೊಡ್ಡ ಮಟ್ಟದ ಹಿಟ್‌ ಆಗುವ ಎಲ್ಲಾ ಸೂಚನೆ ಸಿಕ್ಕಿದೆ. ಕಲೆಕ್ಷನ್ ವಿಚಾರದಲ್ಲಿ ಕೂಡ ಮತ್ತೊಂದು ಮೈಲಿಗಲ್ಲು ಸಾಧಿಸುವ ಸಾಧ್ಯತೆ ಇದೆ.

 Kaatera Gears Up for a Grand Overseas Release

ರಾಕ್‌ಲೈನ್ ಎಂಟರ್‌ಟೈನ್‌ಮೆಂಟ್ ಅಡಿಯಲ್ಲಿ ತರುಣ್ ಕಿಶೋರ್ ಸುಧೀರ್ ನಿರ್ದೇಶಿಸಿದ ಈ ಕಮರ್ಷಿಯಲ್ ಎಂಟರ್‌ಟೈನರ್ ಇನ್ನೂ ಹಲವು ದಿನ ಚಿತ್ರಮಂದಿರಗಳಲ್ಲಿ ಅಬ್ಬರಿಸುವ ಸೂಚನೆ ನೀಡಿದೆ. ಜನರ ಸ್ಪಂದನೆ ಕಂಡು ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಖುಷಿಯಾಗಿದ್ದು, ಅಭಿಮಾನಿಗಳ ಪ್ರೀತಿಗೆ ಧನ್ಯವಾದ ತಿಳಿಸಿದ್ದಾರೆ.

ವಿದೇಶದಲ್ಲೂ ರಿಲೀಸ್‌ಗೆ ಸಿದ್ಧತೆ

ಯಶಸ್ಸಿನ ಖುಷಿಯಲ್ಲಿರುವ ಕಾಟೇರ ಚಿತ್ರತಂಡ ಈಗ ವಿದೇಶದಲ್ಲೂ ದೊಡ್ಡ ಮಟ್ಟದ ಬಿಡುಗಡೆಗೆ ಸಜ್ಜಾಗಿದೆ. ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಈ ಬಗ್ಗೆ ಮಾಹಿತಿ ನೀಡಿದ್ದು "ಕಾಟೇರಾ ಜನವರಿ 6 ರಂದು ದುಬೈನಲ್ಲಿ ಪ್ರೀಮಿಯರ್ ಆಗಲಿದೆ, ಹೆಚ್ಚುವರಿಯಾಗಿ, ಜರ್ಮನಿ, ಯುಕೆ, ಯುಎಸ್ಎ, ಕೆನಡಾ ಮತ್ತು ಐರ್ಲೆಂಡ್ ಸೇರಿದಂತೆ ಸುಮಾರು 9 ದೇಶಗಳಲ್ಲಿ ಬಿಡುಗಡೆ ಮಾಡುಲು ಸಜ್ಜಾಗಿದೆ. ಬಿಡುಗಡೆ ದಿನಾಂಕಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು." ಎಂದು ಹೇಳಿದ್ದಾರೆ.

ಬೇರೆ ಭಾಷೆಗಳಲ್ಲೂ ಬಿಡುಗಡೆ

ರಾಕ್‌ಲೈನ್ ವೆಂಕಟೇಶ್ ಕಾಟೇರಾವನ್ನು ಡಬ್ ಮಾಡಿ ಶೀಘ್ರದಲ್ಲೇ ಬಹು ಭಾಷೆಗಳಲ್ಲಿ ಬಿಡುಗಡೆ ಮಾಡಲು ಯೋಜಿಸಿದ್ದಾರೆ. ಕಾಂತಾರ ಸಿನಿಮಾ ಕೂಡ ಮೊದಲು ಕನ್ನಡದಲ್ಲಿ ಬಿಡುಗಡೆಯಾದರೂ ನಂತರ ಹಲವು ಭಾಷೆಗಳಿಗೆ ಡಬ್ ಆಗಿ ಅಲ್ಲೂ ಯಶಸ್ಸು ಕಂಡಿತ್ತು. ಕಾಟೇರ ರೈತರ ಸಮಸ್ಯೆಗಳ ಬಗ್ಗೆ ಮಾತನಾಡುವ ಸಿನಿಮಾ ಆಗಿದ್ದು, ಎಲ್ಲಾ ಭಾಷೆಗಳ ಪ್ರೇಕ್ಷಕರನ್ನು ತಲುಪುವ ಸಾಧ್ಯತೆ ಇರುವುದರಿಂದ ವಿವಿಧ ಭಾಷೆಗಳಲ್ಲಿ ಈಗಾಗಲೇ ಡಬ್ಬಿಂಗ್ ಆವೃತ್ತಿಗೆ ಬೇಡಿಕೆ ಹೆಚ್ಚಾಗಿದೆ ಎಂದು ಹೇಳಲಾಗಿದೆ.

ಸೋಮವಾರ ಕೂಡ ರಾಜ್ಯದಾದ್ಯಂತ ಕಾಟೇರ ಸಿನಿಮಾ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದ್ದು, ಸುಮಾರು 15 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್ ಮಾಡುವ ಸಾಧ್ಯತೆ ಇದೆ. 4 ದಿನದಲ್ಲೇ ಸಿನಿಮಾ ಕಲೆಕ್ಷನ್ 70 ಕೋಟಿ ರೂಪಾಯಿ ದಾಟುವುದು ಪಕ್ಕಾ ಆಗಿದ್ದು, 100 ಕೋಟಿ ರೂಪಾಯಿ ಕ್ಲಬ್ ಸೇರುವುದು ಪಕ್ಕಾ ಆಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+