ಗಲ್ಲಾಪೆಟ್ಟಿಗೆಯಲ್ಲಿ ಕಾಟೇರ ಸುನಾಮಿ ಎರಡು ದಿನದಲ್ಲಿ ದಾಖಲೆಯ ಗಳಿಕೆ: ಸಿನಿಮಾ ನೋಡಿ ಮೆಚ್ಚಿದ ಕೇಂದ್ರ ಸಚಿವ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ಕಾಟೇರ' ಸಿನಿಮಾ ಕನ್ನಡಿಗರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಮೊದಲ ದಿನ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಬಳಿಕ ಎಲ್ಲ ಕಡೆ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದೆ.
ಹಲವು ಕಡೆಗಳಲ್ಲಿ ಪ್ರದರ್ಶನಗಳ ಸಂಖ್ಯೆಯನ್ನು ಕೂಡ ಹೆಚ್ಚಿಸಲಾಗಿದ್ದು, 2023ರ ಸಾಲಿನ ದೊಡ್ಡ ಹಿಟ್ ಸಿನಿಮಾ ಎನಿಸಿಕೊಂಡಿದೆ. ಚಿತ್ರದ ಕಲೆಕ್ಷನ್ ಎಷ್ಟಿರಬಹುದು ಎನ್ನುಹ ಕುತೂಹಲಕ್ಕೆ ತೆರೆ ಬಿದ್ದಿದೆ. ಸಿನಿಮಾ ತಂಡ ಈಗ ಅಧಿಕೃತವಾಗಿ ಕಲೆಕ್ಷನ್ ಮೊತ್ತವನ್ನು ತಿಳಿಸಿದೆ.
ಮೊದಲ ದಿನ ಕಾಟೇರ ₹19.79 ಕೋಟಿ ಗಳಿಕೆ ಮಾಡಿದ್ದರೆ, ಎರಡನೇ ದಿನ ₹17.35 ಕೋಟಿ ಗಳಿಕೆ ಮಾಡಿದೆ. ಎರಡು ದಿನದಲ್ಲಿ ₹37.14 ಕೋಟಿ ಗಳಿಕೆ ಮಾಡಿದ್ದು ಈ ವರ್ಷದಲ್ಲಿ ದೊಡ್ಡ ಹಿಟ್ ಎನಿಸಿಕೊಂಡಿದೆ.

ಎಲ್ಲ ವರ್ಗಕ್ಕೂ ಇಷ್ಟವಾದ ಕಾಟೇರ
ಇನ್ನು ಕಾಟೇರ ಸಿನಿಮಾ ದರ್ಶನ್ ಅಭಿಮಾನಿಗಳಿಗೆ ಮಾತ್ರವಲ್ಲದೆ, ಎಲ್ಲಾ ವರ್ಗದ ಪ್ರೇಕ್ಷಕರಿಗೂ ಇಷ್ಟವಾಗಿದೆ. ಅದರಲ್ಲೂ ಕುಟುಂಬ ಸಮೇತ ವೀಕ್ಷಕರು ಚಿತ್ರಮಂದಿರಕ್ಕೆ ಬರುತ್ತಿದ್ದು, ಸಿನಿಮಾ ಗಳಿಕೆ ವಿಚಾರದಲ್ಲಿ ಹೊಸ ದಾಖಲೆ ಬರೆಯುವುದು ಖಚಿತ ಎನ್ನಲಾಗಿದೆ.
ಭಾನುವಾರ ಕೂಡ ಚಿತ್ರದ ಬುಕಿಂಗ್ ಜೋರಾಗಿದ್ದು ಮೂರನೇ ದಿನದಲ್ಲಿ ಕಾಟೇರ ಕಲೆಕ್ಷನ್ ₹50 ಕೋಟಿ ದಾಡುವುದು ಪಕ್ಕಾ ಆಗಿದೆ. ಇನ್ನೊಂದು ವಾರ ಸಿನಿಮಾ ಇದೇ ರೀತಿ ಪ್ರದರ್ಶನ ಕಂಡರೆ ಸುಲಭವಾಗಿ ₹100 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಲಿದೆ ಎಂದು ಅಂದಾಜಿಸಲಾಗಿದೆ.
ಚಂದನವನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಕ್‌ಲೈನ್ ವೆಂಕಟೇಶ ಅವರ ನಿರ್ಮಾಣದಲ್ಲಿ ತರುಣ್ ಸುಧೀರ್ ಅವರ ನಿರ್ದೇಶನದಲ್ಲಿ ಮೂಡಿಬಂದ #ಕಾಟೇರ ಚಲನಚಿತ್ರವನ್ನು ಹುಬ್ಬಳ್ಳಿಯಲ್ಲಿ ವೀಕ್ಷಿಸಿದೆನು.
— Pralhad Joshi (@JoshiPralhad) December 31, 2023
ರೈತರಿಗೆ ಪ್ರತಿಯೊಬ್ಬರೂ ನೀಡಬೇಕಾದ ಪ್ರಾಮುಖ್ಯತೆ, ಸಮಾಜದಲ್ಲಿ ಸರ್ವರನ್ನೂ ಸಮಾನವಾಗಿ ಕಾಣಬೇಕೆನ್ನುವ ಸಂದೇಶವನ್ನು ಚಲನಚಿತ್ರದ ಮೂಲಕ… pic.twitter.com/ivxhbQvo6J
ಸಿನಿಮಾ ನೋಡಿದ ಪ್ರಲ್ಹಾದ್ ಜೋಷಿ
ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಕೂಡ ಕಾಟೇರ ಸಿನಿಮಾವನ್ನು ವೀಕ್ಷಿಸಿದ್ದು, ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರೈತರ ಸಮಸ್ಯೆಗಳ ಬಗ್ಗೆ ಸಿನಿಮಾದಲ್ಲಿ ತೋರಿಸಲಾಗಿದ್ದು, ಉತ್ತಮ ಸಂದೇಶ ನೀಡಿದ್ದು, ಚಿತ್ರ ದೊಡ್ಡ ಮಟ್ಟದ ಯಶಸ್ಸು ಕಾಣಲಿ ಎಂದು ಹಾರೈಸಿದ್ದಾರೆ.
ಟ್ವೀಟ್ ಮಾಡಿರುವ ಅವರು, "ಚಂದನವನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಕ್‌ಲೈನ್ ವೆಂಕಟೇಶ ಅವರ ನಿರ್ಮಾಣದಲ್ಲಿ ತರುಣ್ ಸುಧೀರ್ ಅವರ ನಿರ್ದೇಶನದಲ್ಲಿ ಮೂಡಿಬಂದ ಕಾಟೇರ ಚಲನಚಿತ್ರವನ್ನು ಹುಬ್ಬಳ್ಳಿಯಲ್ಲಿ ವೀಕ್ಷಿಸಿದೆನು. ರೈತರಿಗೆ ಪ್ರತಿಯೊಬ್ಬರೂ ನೀಡಬೇಕಾದ ಪ್ರಾಮುಖ್ಯತೆ, ಸಮಾಜದಲ್ಲಿ ಸರ್ವರನ್ನೂ ಸಮಾನವಾಗಿ ಕಾಣಬೇಕೆನ್ನುವ ಸಂದೇಶವನ್ನು ಚಲನಚಿತ್ರದ ಮೂಲಕ ಅಚ್ಚುಕಟ್ಟಾಗಿ ಅದ್ಭುತವಾಗಿ ತೋರಿಸಲಾಗಿದೆ. ದರ್ಶನ್ ಅವರ ಅದ್ಭುತ ನಟನೆ ಅಭಿಮಾನಿಗಳನ್ನು ಚಲನಚಿತ್ರ ಪ್ರಿಯರನ್ನು ಮತ್ತೊಮ್ಮೆ ರಂಜಿಸುವುದರ ಜೊತೆಗೆ ಹೊಸ ಸಂದೇಶವನ್ನು ಸಾರಿದ್ದಾರೆ. ಚಲನಚಿತ್ರ ಯಶಸ್ಸು ಕಾಣಲಿ ಎಂದು ಕಾಟೇರ ಚಲನಚಿತ್ರ ತಂಡಕ್ಕೆ ಶುಭ ಹಾರೈಸುತ್ತೇನೆ." ಎಂದು ಹೇಳಿದ್ದಾರೆ.
ಪ್ರಲ್ಹಾದ್ ಜೋಶಿ ಜೊತೆಗೆ ಶಾಸಕರಾದ ಮಹೇಶ್ ಟೆಂಗಿನಕಾಯಿ, ವಿಧಾನಪರಿಷತ್ ಮಾಜಿ ಸದಸ್ಯರಾದ ನಾಗರಾಜ ಛಬ್ಬಿ, ಬಿಜೆಪಿ ಜಿಲ್ಲಾಧ್ಯಕ್ಷ ಕುಂದಗೋಳ್ ಮಠ್ ಹಾಗೂ ಪ್ರಮುಖರು ಜೊತೆಯಾಗಿದ್ದರು.












Click it and Unblock the Notifications