Kaatera: ಕಲೆಕ್ಷನ್‌ ವಿಚಾರದಲ್ಲಿ ಕಾಟೇರ ದಾಖಲೆ: ದರ್ಶನ್ ಸರ್ ವರ್ಷಕ್ಕೆರಡು ಸಿನಿಮಾ ಮಾಡಿ ಎಂದ ಥಿಯೇಟರ್ ಮಾಲೀಕ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಕಾಟೇರ ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ದರ್ಶನ್ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದು ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ.

ಮಧ್ಯರಾತ್ರಿಯಿಂದಲೇ ಕಾಟೇರ ಕಣ್ತುಂಬಿಕೊಳ್ಳಲಿದ್ದು, ರಾಕ್‌ಲೈನ್‌ ಸಿನಿಮಾಸ್‌ನಲ್ಲಿ ಅರ್ಧರಾತ್ರಿ 12 ಗಂಟೆಯಿಂದಲೇ ಶೋಗಳು ಶುರುವಾಗಲಿವೆ. ಮುಂಗಡ ಬುಕಿಂಗ್ ಆರಂಭವಾಗಿದ್ದು ದಾಖಲೆಯ ಮಟ್ಟದಲ್ಲಿ ಟಿಕೆಟ್ ಬುಕಿಂಗ್ ಮಾಡಲಾಗುತ್ತಿದೆ.

 Kaatera Sets New Record: Theatre Owner Urges Darshan to Make at Least Two Films Annually

ಈವರೆಗೂ ಮುಂಗಡ ಟಿಕೆಟ್ ಬುಕಿಂಗ್‌ನಿಂದಲೇ 1 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ್ದು ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದಿದೆ. ಪ್ಯಾನ್ ಇಂಡಿಯಾ ಹೊರತುಪಡಿಸಿ ಕನ್ನಡ ಚಿತ್ರವೊಂದು ಇಷ್ಟು ದೊಡ್ಡ ಪ್ರಮಾಣದಲ್ಲಿ ಪ್ರಿ ಬುಕಿಂಗ್‌ ಕಲೆಕ್ಷನ್ ಮಾಡಿರುವುದು ಇದೇ ಮೊದಲು ಎಂದು ಚಿತ್ರತಂಡ ಟ್ವಿಟರ್ ನಲ್ಲಿ ಮಾಹಿತಿ ನೀಡಿದೆ.

ಬುಕ್‌ ಮೈ ಶೋನಲ್ಲಿ ಕರ್ನಾಟಕದಾದ್ಯಂತ ಇದುವರೆಗೂ 50 ಸಾವಿರ ಟಿಕೆಟ್ ಮಾರಾಟವಾಗಿದ್ದು, ಚಿತ್ರ ಬಿಡುಗಡೆಗೂ ಮುನ್ನ 1 ಲಕ್ಷಕ್ಕೂ ಅಧಿಕ ಟಿಕೆಟ್ ಮಾರಾಟವಾಗುವ ಸಾಧ್ಯತೆ ಇದೆ. ಬೆಂಗಳೂರು ಮಾಗಡಿ ರಸ್ತೆಯ ಪ್ರಸನ್ನ ಥಿಯೇಟರ್ ನಲ್ಲೇ 7000 ಟಿಕೆಟ್ ಮಾರಾಟವಾಗಿದೆ.

ಹೊಸ ದಾಖಲೆ ಬರೆಯುವ ನಿರೀಕ್ಷೆ

ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಾಗಿದ್ದು ಮೊದಲ ದಿನವೇ ಚಿತ್ರ ಕಲೆಕ್ಷನ್ ವಿಚಾರದಲ್ಲಿ ಹೊಸ ದಾಖಲೆ ಬರೆಯಲಿದೆ ಎಂದು ಹೇಳಲಾಗಿದೆ. ಚಿತ್ರದ ಬಗ್ಗೆ ಉತ್ತಮ ವಿಮರ್ಶೆಗಳು ಹೊರ ಬಿದ್ದರೆ ಸಿನಿಮಾ ಹಿಟ್ ಆಗುವುದರಲ್ಲಿ ಎರಡು ಮಾತಿಲ್ಲ.

ಬೆಂಗಳೂರು, ಮೈಸೂರು, ಮಂಡ್ಯ, ತುಮಕೂರು, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ ಟಿಕೆಟ್ ಬುಕಿಂಗ್ ಜೋರಾಗಿದ್ದು, ಬಿಡುಗಡೆಗೆ ಮುನ್ನ ಇತರೆ ಜಿಲ್ಲೆಗಳಲ್ಲಿ ಕೂಡ ಹೆಚ್ಚಿನ ಟಿಕೆಟ್ ಹೆಚ್ಚಾಗಿ ಮಾರಾಟವಾಗುವ ನಿರೀಕ್ಷೆ ಮಾಡಲಾಗಿದೆ.

ವರ್ಷಕ್ಕೆರಡು ಸಿನಿಮಾ ಮಾಡಲು ಮನವಿ

ಮಲ್ಟಿಪ್ಲೆಕ್ಸ್ ಥಿಯೇಟರ್ ಸಂಖ್ಯೆ ಹೆಚ್ಚಾದ ಬಳಿಕ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಪ್ರೇಕ್ಷಕರ ಕೊರತೆ ಹೆಚ್ಚು ಕಾಡುತ್ತಿದ್ದು ಈಗಾಗಲೇ ರಾಜ್ಯದಲ್ಲಿ ಹಲವು ಚಿತ್ರಮಂದಿರಗಳು ಬಾಗಿಲು ಮುಚ್ಚುತ್ತಿವೆ. ದೊಡ್ಡ ನಟರ ಸಿನಿಮಾಗಳು ಹೆಚ್ಚಿನ ಪ್ರೇಕ್ಷಕರನ್ನು ಥಿಯೇಟರ್ ಕಡೆ ಆಕರ್ಷಿಸುತ್ತವೆ, ಆದರೆ ಸುದೀಪ್, ಯಶ್, ದರ್ಶನ್ ಸಿನಿಮಾಗಳ ಸಂಖ್ಯೆ ಕಡಿಮೆಯಾಗಿದ್ದು ಚಿತ್ರರಂಗದ ಮೇಲೂ ಪರಿಣಾಮ ಬೀರಿದೆ.

ಸಿಂಗಲ್ ಸ್ಕ್ರೀನ್ ಚಿತ್ರಮಂದಿರದ ಮಾಲೀಕರೊಬ್ಬರು ದರ್ಶನ್ ಅವರಲ್ಲಿ ವರ್ಷಕ್ಕೆ ಎರಡು ಸಿನಿಮಾ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಚಿತ್ರಮಂದಿರಕ್ಕೆ ಬರುವವರ ಸಂಖ್ಯೆ ಕಡಿಮೆಯಾಗುತ್ತಿದೆ. ದರ್ಶನ್ ಅಪಾರ ಅಭಿಮಾನಿ ಬಳಗ ಹೊಂದಿದ್ದು, ಅವರು ವರ್ಷಕ್ಕೆ ಎರಡು ಮೂರು ಸಿನಿಮಾ ಮಾಡಿದರೆ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಿಗೆ ಅನುಕೂಲವಾಗುತ್ತದೆ ಎಂದು ಹೇಳಿದ್ದಾರೆ. ಅವರು ಎರಡು ಮೂರು ಸಿನಿಮಾ ಮಾಡಿದರೆ ಕನ್ನಡ ಚಿತ್ರರಂಗ ಉಳಿಯುತ್ತದೆ, ಇಲ್ಲದಿದ್ದರೆ ಜನ ಥಿಯೇಟರ್ ಅನ್ನು ಮರೆಯುತ್ತಾರೆ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+