Kangana Ranaut: ರಾವಣನ ಪ್ರತಿಕೃತಿ ದಹಿಸಿ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಕಂಗನಾ ರಣಾವತ್!
ನವದೆಹಲಿ ಅಕ್ಟೋಬರ್ 25: ದೆಹಲಿಯ ಕೆಂಪುಕೋಟೆಯ ಲವ್ ಕುಶ್ ರಾಮಲೀಲಾ ಮೈದಾನದಲ್ಲಿ ಅದ್ದೂರಿಯಾಗಿ ವಿಜಯದಶಮಿಯನ್ನು ಆಚರಿಸಲಾಯಿತು. ಈ ವೇಳೆ ನಟಿ ಕಂಗನಾ ರಣಾವತ್ ರಾವಣನ ಪ್ರತಿಕೃತಿಗೆ ಬೆಂಕಿ ಹಚ್ಚುವ ಮೂಲಕ ನೆರೆದವರ ಗಮನಸೆಳೆದರು.
ಮಂಗಳವಾರ ದೆಹಲಿಯ ಪ್ರಸಿದ್ಧ ಕೆಂಪು ಕೋಟೆಯ ಲವ್ ಕುಶ್ ರಾಮಲೀಲಾ ಮೈದಾನದಲ್ಲಿ ರಾವಣನ ಪ್ರತಿಕೃತಿಯನ್ನು ನಟಿ ಕಂಗನಾ ರಣಾವತ್ ಅವರು ದಹಿಸಿದರು. 50 ವರ್ಷಗಳ ಇತಿಹಾಸದಲ್ಲಿ ಇದನ್ನು ಮಾಡಿದ ಮೊದಲ ಮಹಿಳೆ ಕಂಗನಾ ರಣಾವತ್ ಆಗಿದ್ದಾರೆ.

ರಾಣಾವತ್ ರಾಕ್ಷಸ ರಾಜನ ಪ್ರತಿಕೃತಿಯನ್ನು ಬಾಣವನ್ನು ಹೊಡೆಯುವ ಮೂಲಕ ದಹಿಸಿ, 'ಜೈ ಶ್ರೀ ರಾಮ್' ಎಂದು ಘೋಷಣೆ ಕೂಗಿದರು. ನಟಿಯನ್ನು ನೋಡಲು ಹೆಚ್ಚಿನ ಸಂಖ್ಯೆಯ ಮಹಿಳೆಯರು ಸೇರಿದಂತೆ ನೂರಾರು ಜನರು ಸ್ಥಳದಲ್ಲಿ ಜಮಾಯಿಸಿದ್ದರು.
ಕೆಂಪು ಕೋಟೆಯ ರಾಮಲೀಲಾ ಮೈದಾನದಲ್ಲಿ ಪ್ರತೀ ವರ್ಷ ರಾವಣನ ಪ್ರತಿಕೃತಿ ದಹನ ಮಾಡುವ ಮೂಲಕ ವಿಜಯದಶಮಿಯನ್ನು ಆಚರಿಸಲಾಗುತ್ತದೆ. ಹೀಗೆ 50 ವರ್ಷಗಳ ಇತಿಹಾಸದಲ್ಲಿ ಮಹಿಳೆಯೊಬ್ಬರು ರಾವಣನ ಪ್ರತಿಕೃತಿಗೆ ಬೆಂಕಿ ಹಚ್ಚಿದ್ದು ಇದೇ ಮೊದಲು ಎಂದು ದೆಹಲಿಯ ಲವ್ ಕುಶ್ ರಾಮಲೀಲಾ ಸಮಿತಿಯ ಅಧ್ಯಕ್ಷ ಅರ್ಜುನ್ ಸಿಂಗ್ ಹೇಳಿದ್ದಾರೆ.
ಪ್ರಸ್ತುತ ಕಂಗನಾ ರಣಾವತ್ ತಮ್ಮ ತೇಜಸ್ ಸಿನಿಮಾದ ಪ್ರಚಾರದಲ್ಲಿದ್ದಾರೆ. ಅದು ಅಕ್ಟೋಬರ್ 27 ರಂದು ಬಿಡುಗಡೆಯಾಗಲಿದೆ. ಈ ಚಲನಚಿತ್ರವು ಭಾರತೀಯ ಸೈನಿಕರ ಜೀವನ ಮತ್ತು ಅವರ ಕಠಿಣ ಜೀವನವನ್ನು ಆಧರಿಸಿದೆ. ನಮ್ಮ ಭಾರತೀಯ ಸೈನಿಕರು ನಮ್ಮನ್ನು ಹೇಗೆ ರಕ್ಷಿಸುತ್ತಾರೆ ಮತ್ತು ತಮ್ಮ ಪ್ರಾಣವನ್ನು ತ್ಯಾಗ ಮಾಡುವ ಮೊದಲು ಯೋಚಿಸುವುದಿಲ್ಲ ಎಂಬುದನ್ನು ಈ ಚಲನಚಿತ್ರವು ತೋರಿಸುತ್ತದೆ.
#WATCH | Delhi: Bollywood actor Kangana Ranaut attends 'Ravan Dahan' at Red Fort#Dussehra pic.twitter.com/skbsc2Pj4T
— ANI (@ANI) October 24, 2023
ಸರ್ವೇಶ್ ಮೇವಾರಾ ಬರೆದು ನಿರ್ದೇಶಿಸಿದ ತೇಜಸ್‌ನಲ್ಲಿ ಭಾರತೀಯ ವಾಯುಪಡೆಯ ಪೈಲಟ್ ಪಾತ್ರದಲ್ಲಿ ಕಂಗನಾ ರಣಾವತ್ ಕಾಣಿಸಿಕೊಂಡಿದ್ದಾರೆ. ಈ ಹಿಂದೆ ಚಿತ್ರ ಅಕ್ಟೋಬರ್ 20 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಬೇಕಿತ್ತು. ಆದರೆ ನಾನಾ ಕಾರಣಗಳಿಂದಾಗಿ ಚಿತ್ರ ಬಿಡುಗಡೆಯಾಗಲಿಲ್ಲ. ಸದ್ಯ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದ್ದು ಕಂಗನಾ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
#WATCH | Himachal Pradesh CM Sukhvinder Singh Sukhu attends 'Ravan Dahan' at Shimla#Dussehra pic.twitter.com/6pdhIQyKFi
— ANI (@ANI) October 24, 2023
ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ನಡೆದ ರಾವಣ ದಹನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖ್ ಪಾಲ್ಗೊಂಡರು.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications