Get Updates
Get notified of breaking news, exclusive insights, and must-see stories!

Raju Talikote Death: ಹೃದಯಾಘಾತದಿಂದ ಹಿರಿಯ ನಟ ರಾಜು ತಾಳಿಕೋಟೆ ನಿಧನ

ಹಿರಿಯ ರಂಗಕರ್ಮಿ, ಖ್ಯಾತ ಪೋಷಕ ಹಾಸ್ಯ ನಟ ರಾಜು ತಾಳಿಕೋಟೆ ಅವರು ಹೃದಯಘಾತದಿಂದ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳೂರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಹಠಾಟ್ ಹೃದಯಾಘಾತದಿಂದ ನಿಧನರಾಗಿದ್ದಾರೆ.

ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದ ಮೂಲದವರಾಗಿದ್ದ ರಾಜು ತಾಳಿಕೋಟೆ ಅವರು , ಚಲನಚಿತ್ರದಲ್ಲಿ ಪ್ರಸಿದ್ಧರಾದ ನಂತ್ರ ತಾಳಿಕೋಟಿ ನಗರದಲ್ಲಿ ವಾಸವಾಗಿದ್ದರು. ರಾಜು ತಾಳಿಕೋಟಿಯವರ ನಿಧನಕ್ಕೆ ಕನ್ನಡ ಚಿತ್ರರಂಗ ಮತ್ತು ಉತ್ತರ ಕರ್ನಾಟಕದ ರಂಗಭೂಮಿ ಕಂಬನಿ ಮಿಡಿದಿದೆ.

Kannada actor Raju Talikote dies due to heart attack

ಧಾರವಾಡ ರಂಗಾಯಣ ನಿರ್ದೇಶಕರಾಗಿ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಹಾಸ್ಯ ನಟನಾಗಿ, ರಂಗಕರ್ಮಿಯಾಗಿ ಅವರು ಗುರುತಿಸಿಕೊಂಡಿದ್ದರು. ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿಹೃದಯಾಘಾತದಿಂದ ಅವರು ಕೊನೆಯುಸಿರು ಎಳೆದಿದ್ದಾರೆ. ಭಾನುವಾರದಿಂದ (ಅ.12) ಮೂರು‌ ದಿನ ಶೂಟಿಂಗ್ ಮಾಡಬೇಕಿತ್ತು. ಆದರೆ ಅಷ್ಟರಲ್ಲಿ ಅವರು ನಿಧರಾಗಿದ್ದು, ಚಿತ್ರತಂಡಕ್ಕೆ ದೊಡ್ಡ ಅಘಾತ ಆಗಿದೆ. ಶೈನ್ ಶೆಟ್ಟಿ ನಟನೆಯ ಹೊಸ ಸಿನಿಮಾದ ಶೂಟಿಂಗ್ ಸಲುವಾಗಿ ಹಿರಿಯ ಹಾಸ್ಯನಟ ರಾಜು ತಾಳಿಕೋಟೆ ಅವರು ಉಡುಪಿಗೆ ಬಂದಿದ್ದರು. ಚಿತ್ರೀಕರಣ ಮುಗಿಸಿ ರಾತ್ರಿ ವಿಶ್ರಾಂತಿ ಪಡೆಯುತ್ತಿರುವಾಗ ಭಾನುವಾರ ರಾತ್ರಿ ಹೃದಯಾಘಾತ ಆಯಿತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಯಿತು. ಆದರೂ ಕೂಡ ಅವರು ಬದುಕಿ ಉಳಿಯಲಿಲ್ಲ ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ.

ರಾಜು ತಾಳಿಕೋಟಿಯವರ ಮೂಲ ಹೆಸರು ರಾಜೇಸಾಬ ಮಕ್ತುಮಸಾಬ್ ತಾಳಿಕೋಟಿ. ತಾಳಿಕೋಟಿಯ ಪ್ರಸಿದ್ಧ ಖಾಸ್ಗತೇಶ್ವರ ನಾಟಕ ಮಂಡಳಿಯ ಮಾಲಿಕರೂ ಆಗಿದ್ದು, ಉತ್ತರ ಕರ್ನಾಟಕದ ಹಳ್ಳಿಗಳಲ್ಲಿ ನಾಟಕಗಳ ಮೂಲಕ ಜನರನ್ನ ರಂಜಿಸುತ್ತಿದ್ದರು. ಇನ್ನೂ ಹಲವು ಸಿನಿಮಾಗಳಲ್ಲೂ ನಟಿಸಿದ್ದಾರೆ, ಅಲ್ಲದೇ ಬಿಗ್‌ ಬಾಸ್‌ ಮಾಜಿ ಸ್ಪರ್ಧಿಯೂ ಆಗಿದ್ದರು. ಇನ್ನೂ ಈ ಮೊದಲು ಕೂಡ ಹಿರಿಯ ರಂಗಕರ್ಮಿ, ಖ್ಯಾತ ಪೋಷಕ ಹಾಸ್ಯ ನಟ ರಾಜು ತಾಳಿಕೋಟೆ ಅವರಿಗೆ ಹೃದಯಾಘಾತ ಆಗಿತ್ತು. ಆಗ ಚಿಕಿತ್ಸೆ ನೀಡಿ ಸ್ಟಂಟ್ ಹಾಕಲಾಗಿತ್ತು. ಇದೀಗ ಮತ್ತೆ ಈಗ ಒತ್ತಡ ಜಾಸ್ತಿ ಆಗಿದ್ದರಿಂದ ಮತ್ತೆ ಹಾರ್ಟ್ ಅಟ್ಯಾಕ್ ಆಗಿರಬಹುದು ಎನ್ನಲಾಗಿದೆ. ಇನ್ನೂ ರಾಜು ಅವರ ನಿಧನಕ್ಕೆ ಚಿತ್ರರಂಗ ಕಂಬನಿ ಮಿಡಿದಿದ್ದು, ವಿಜಯಪುರದಲ್ಲಿ ಅಂತ್ಯ ಸಂಸ್ಕಾರ ಮಾಡಲಾಗುವುದು ಎಂದು ಅವರ ಪುತ್ರ ತಿಳಿಸಿದ್ದಾರೆ.

ನಟ ಶೈನ್ ಶೆಟ್ಟಿ ಹೇಳಿದ್ದೇನು?

ಸಿನಿಮಾ ಚಿತ್ರಿಕರಣಕ್ಕಾಗಿ ರಾಜು ತಾಳಿಕೋಟೆ ಅವರು ಬಂದಿದ್ದರು. ನಿನ್ನೆ ರಾತ್ರಿ 12 ಗಂಟೆಗೆ ರಾಜು ತಾಳಿಕೋಟೆ ಅವರಿಗೆ ಉಸಿರಾಟದ ತೊಂದರೆ ಆಯಿತು. ನಾನೇ ಆಸ್ಪತ್ರೆಗೆ ಕರೆದುಕೊಂಡು ಬಂದೆ. ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ನಿಧನರಾದರು. ನಮ್ಮ ಸಿನಿಮಾದ ಶೂಟಿಂಗ್​​ನಲ್ಲಿ ಎರಡು ದಿನ ಭಾಗವಹಿಸಿದ್ದರು. ಸಿನಿಮಾಗೆ ಇನ್ನೂ ಶೀರ್ಷಿಕೆ ಇಟ್ಟಿಲ್ಲ ಎಂದು ನಟ ಶೈನ್ ಶೆಟ್ಟಿ ಅವರು ಹೇಳಿದ್ದಾರೆ.

ಸಚಿವ ಶಿವರಾಜ ತಂಗಡಗಿ ಸಂತಾಪ

ಕನ್ನಡ ರಂಗಭೂಮಿಯ ಜನಪ್ರಿಯ ಕಲಾವಿದ ರಾಜು ತಾಳಿಕೋಟೆ ಅವರ ನಿಧನದ ಸುದ್ದಿ ತೀವ್ರ ಆಘಾತ ಉಂಟು ಮಾಡಿದ್ದು, ಅವರ ಈ ಅಕಾಲಿಕ ಸಾವು ಕನ್ನಡ ರಂಗಭೂಮಿ ಮತ್ತು ಚಲನಚಿತ್ರ ರಂಗಕ್ಕೆ ಆದ ಬಹುದೊಡ್ಡ ನಷ್ಟ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.

ಪ್ರಸ್ತುತ ಅವರು ಧಾರವಾಡ ರಂಗಾಯಣದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ನನ್ನೊಂದಿಗೆ ಆತ್ಮೀಯ ಒಡನಾಟ ಇರಿಸಿಕೊಂಡಿದ್ದ ರಾಜು ತಾಳಿಕೋಟೆ ಧಾರವಾಡ ರಂಗಾಯಣವನ್ನು ಹೊಸ ದೃಷ್ಟಿಕೋನದೊಂದಿಗೆ ಕಟ್ಟುತ್ತಾರೆ ಎಂಬ ಭರವಸೆ ಇತ್ತು.

ಖಾಸ್ಗತೇಶ್ವರ ನಾಟಕ ಮಂಡಳಿ ಎಂಬ ಕಂಪನಿ ಹೊಂದಿದ್ದ ರಾಜು ತಾಳಿಕೋಟೆ ಅನೇಕ ಜನಪ್ರಿಯ ನಾಟಕಗಳ ಮೂಲಕ ಹೆಸರು ಮಾಡಿದ್ದರು. ಅವರು ನಟಿಸಿದ್ದ ಪಂಚರಂಗಿ, ಮನಸಾರೆ ಚಲನಚಿತ್ರಗಳು ಅವರಿಗೆ ಅಪಾರ ಜನಪ್ರಿಯತೆ ತಂದುಕೊಟ್ಟವು.

ಬಿಗ್ ಬಾಸ್ ನಲ್ಲಿ ಭಾಗವಹಿಸುವ ಮೂಲಕ ಮನೆ ಮನೆಗೆ ಪರಿಚಿತರಾದ ರಾಜು ತಾಳಿಕೋಟೆ ಒಬ್ಬ ಒಳ್ಳೆಯ ನಟನ ಜೊತೆ ಒಳ್ಳೆಯ ವ್ಯಕ್ತಿಯು ಆಗಿದ್ದರು. ಅವರ ಈ ಆಕಸ್ಮಿಕ ಮರಣದ ಶಕ್ತಿಯನ್ನು ತಡೆದುಕೊಳ್ಳುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ನೀಡಲಿ, ಅವರ ಈ ಸಾವು ಕನ್ನಡ ರಂಗಭೂಮಿಗೆ ಆದ ದೊಡ್ಡ ನಷ್ಟ ಅದನ್ನು ಭರಿಸುವ ಶಕ್ತಿ ಅವರ ಅಭಿಮಾನಿಗಳಿಗೆ ನೀಡಲಿ ಎಂದು ಸಚಿವ ಶಿವರಾಜ ತಂಗಡಗಿ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ಇನ್ನೂ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದು, ಹಿರಿಯ ರಂಗ ಕಲಾವಿದ ಮತ್ತು ಪ್ರಸಿದ್ಧ ಚಲನಚಿತ್ರ ನಟರು, ಧಾರವಾಡ ರಂಗಾಯಣ ನಿರ್ದೇಶಕರಾಗಿದ್ದ ಶ್ರೀ ರಾಜು ತಾಳಿಕೋಟೆ ಅವರು ನಿಧನರಾದ ಸುದ್ದಿ ತಿಳಿದು ತೀವ್ರ ದುಃಖವಾಯಿತು. ಉತ್ತರ ಕರ್ನಾಟಕ ಸೊಗಡಿನ ಹಾಸ್ಯದಿಂದ ಜನಪ್ರಿಯರಾಗಿದ್ದ ರಾಜು ಅವರ ಅಕಾಲಿಕ ನಿಧನ ಕಲಾಕ್ಷೇತ್ರಕ್ಕೆ ಬಹುದೊಡ್ಡ ನಷ್ಟ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಖ್ಯಾತ ರಂಗಭೂಮಿ‌ ನಟ, ಹಾಸ್ಯ ಕಲಾವಿದ, ಧಾರವಾಡ ರಂಗಾಯಣದ ನಿರ್ದೇಶಕರಾಗಿರುವ ರಾಜು ತಾಳಿಕೋಟಿ ಅವರು ಹೃದಯಾಘಾತದಿಂದ ನಿಧನರಾಗಿರುವುದು ಅತ್ಯಂತ ದುಃಖಕರ ವಿಷಯವಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಅವರು ಸಂತಾಪ ಸೂಚಿಸಿದ್ದಾರೆ. ಕನ್ನಡದ ಹಲವಾರು ಸಿನಿಮಾಗಳಲ್ಲಿ ನಟಿಸಿ ಜನಪ್ರಿಯತೆ ಪಡೆದಿದ್ದ ರಾಜು ತಾಳಿಕೋಟಿ ಅವರ ಅಗಲಿಕೆ ಕನ್ನಡ ಚಿತ್ರರಂಗಕ್ಕೆ ನಷ್ಟವಾಗಿದೆ. ದೇವರು ರಾಜು ತಾಳಿಕೋಟಿ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+