Upendra: ನಟ ಉಪೇಂದ್ರ ಆಸ್ಪತ್ರೆಗೆ ದಾಖಲು, ಆರೋಗ್ಯದಲ್ಲಿ ದಿಢೀರ್ ಏರುಪೇರು!
ಸ್ಯಾಂಡಲ್‌ವುಡ್‌ನ ಖ್ಯಾತ ನಟ, ನಿರ್ದೇಶಕ, ರಿಯಲ್ ಸ್ಟಾರ್ ಉಪೇಂದ್ರ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಉಪೇಂದ್ರ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಓವರ್ ಅಸಿಡಿಟಿ ಇದ್ದ ಕಾರಣಕ್ಕೆ ಮನೆಯಲ್ಲೇ ಚಿಕಿತ್ಸೆ ಪಡೆದಿದ್ದರು. ಆದರೂ ಚೇತರಿಕೆ ಕಾಣದ ಕಾರಣ ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದುಬಂದಿದೆ.
ಉಪ್ಪಿ ಅವರಿಗೆ ಹೊಟ್ಟೆಯಲ್ಲಿ ಸಮಸ್ಯೆ, ಕಡಿಮೆ ರಕ್ತದೊತ್ತಡ, ವಾಂತಿ ಮತ್ತು ನಿರ್ಜಲೀಕರಣ ಸಮಸ್ಯೆಯೂ ಇತ್ತು.ಸೋಮವಾರ ಮಧ್ಯಾಹ್ನದ ಹೊತ್ತಿಗೆ ಉಪೇಂದ್ರ ಅವರಿಗೆ ಹೊಟ್ಟೆಯುರಿ ಕಾಣಿಸಿಕೊಂಡಿತ್ತು. ಇದಕ್ಕೆ ಅವರು ಮನೆಯಲ್ಲೇ ಚಿಕಿತ್ಸೆ ಪಡೆದಿದ್ದರು. ಆದರೂ ಅವರ ಆರೋಗ್ಯ ಸುಧಾರಿಸದ ಕಾರಣ ತಮ್ಮ ನಿವಾಸಕ್ಕೆ ಹತ್ತಿರದಲ್ಲೇ ಇರುವ ಖಾಸಗಿ ಆಸ್ಪತ್ರೆಗೆ ಇಂದು ಮಧ್ಯಾಹ್ನ ಸುಮಾರು 3 ಗಂಟೆ ದಾಖಲಾಗಿದ್ದಾರೆ ಎನ್ನಲಾಗಿದೆ. ಸದ್ಯ ಉಪೇಂದ್ರ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು ಆರೋಗ್ಯದಲ್ಲಿ ಚೇತರಿಕೆ ಕಂಡಿದೆ ಎಂದು ಹೇಳಲಾಗುತ್ತಿದೆ.

ಇತ್ತೀಚೆಗೆ ಉಪೇಂದ್ರ ಅವರು ಯುಐ ಸಿನಿಮಾದಲ್ಲಿ ಸಖತ್ ಬ್ಯುಸಿಯಾಗಿದ್ದರು. ಅಲ್ಲದೆ ಈ ಸಿನಿಮಾ ಶೂಟಿಂಗ್ ವೇಳೆಯೂ ಅವರ ಆರೋಗ್ಯ ಸರಿಯಾಗಿರಲಿಲ್ಲ. ಇತ್ತೀಚೆಗೆ ಅವರು ಸಿನಿಮಾ ಕೆಲಸಗಳಲ್ಲಿ ಬಿಡುವಿಲ್ಲದೆ ದಣಿದಿದ್ದರು. ಇದರಿಂದಲೂ ಅವರ ಆರೋಗ್ಯದ ಮೇಲೆ ಪರಿಣಾಮ ಬೀರಿರಬಹುದು ಎಂದು ಹೇಳಲಾಗುತ್ತಿದೆ. ಈ ವಿಚಾರ ತಿಳಿದು ಉಪೇಂದ್ರ ಅಭಿಮಾನಿಗಳು ಗಾಬರಿಯಾಗಿದ್ದಾರೆ. ಉಪ್ಪಿಗೆ ಏನಾಯ್ತು? ಎಂದು ಶಾಕ್‌ಗೆ ಒಳಗಾಗಿದ್ದಾರೆ. ಸದ್ಯಕ್ಕೆ ಉಪ್ಪಿ ಅವರ ಆರೋಗ್ಯ ಸ್ಥಿರವಾಗಿದ್ದು, ಅಭಿಮಾನಿಗಳು ಯಾವುದೇ ಗಾಬರಿ ಪಡುವ ಅವಶ್ಯಕತೆಯಿಲ್ಲ ಎಂದು ವರದಿಯಾಗಿದೆ.
ಉಪ್ಪಿ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಉಪೇಂದ್ರ ಅವರು ಬೇಗ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ. ಉಪೇಂದ್ರ ಅವರಿಗೆ ಯಾವುದೇ ಗಂಭೀರ ಸಮಸ್ಯೆ ಇಲ್ಲ, ಅಸಿಡಿಟಿಯಿಂದ ತುಸು ಆಯಾಸಕ್ಕೆ ಒಳಗಾಗಿದ್ದಾರೆ. ಸ್ವಲ್ಪ ದಿನಗಳ ಕಾಲ ವಿಶ್ರಾಂತಿ ಪಡೆದು ಶೀಘ್ರವೇ ಸಿನಿಮಾಗಳಲ್ಲಿ ಬ್ಯುಸಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ಸ್ಯಾಂಡಲ್‌ವುಡ್‌ನ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ 45 ಸಿನಿಮಾದ ಟೀಸರ್ ಕೂಡ ಇತ್ತೀಚೆಗೆ ರಿಲೀಸ್ ಆಗಿತ್ತು. ಮ್ಯೂಸಿಕ್ ಕಂಪೋಸರ್ ಅರ್ಜುನ್ ಜನ್ಯ ಅವರ ಚೊಚ್ಚಲ ನಿರ್ದೇಶನದ ಈ ಸಿನಿಮಾದಲ್ಲಿ ಪ್ರಚಾರದಲ್ಲಿ ಉಪೇಂದ್ರ ಭಾಗಿಯಾಗಿದ್ದರು. ಇದಕ್ಕಾಗಿ ಅವರು ವಿವಿಧ ರಾಜ್ಯಗಳಿಗೂ ಪ್ರವಾಸ ಮಾಡಿ, ಬಿಡುವಿಲ್ಲದೆ ಸಂದರ್ಶನಗಳಲ್ಲೂ ಭಾಗಿಯಾಗಿದ್ದರು. ಇದೇ ಸಿನಿಮಾದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್, ರಾಜ್ ಬಿ ಶೆಟ್ಟಿ ಕೂಡ ನಟಿಸಿದ್ದು, ಈ ಸಿನಿಮಾಗಾಗಿ ಅವರ ಅಭಿಮಾನಿಗಲು ತುದಿಗಾಲಲ್ಲಿ ನಿಂತಿದ್ದಾರೆ. ಈ ಹೊತ್ತಿನಲ್ಲೇ ಉಪ್ಪಿ ಅವರ ಅನಾರೋಗ್ಯ ವಿಚಾರವು ಆಘಾತ ನೀಡಿದೆ.












Click it and Unblock the Notifications