Actress Bhavana : ತನ್ನ ಅವಳಿ ಮಕ್ಕಳಿಗೆ ಹೆಸರಿಟ್ಟ ನಟಿ ಭಾವನಾ; ಈ ಹೆಸರೇ ಆಯ್ಕೆ ಮಾಡಿದ್ಯಾಕೆ?
ಸ್ಯಾಂಡಲ್‌ವುಡ್ ನಟಿ ಭಾವನಾ ರಾಮಣ್ಣ ಬೋಲ್ಡ್ ಹೆಜ್ಜೆ ಇಟ್ಟಿದ್ದಾರೆ. ಭಾವನಾ ರಾಮಣ್ಣ ಮದುವೆ ಆಗದೆಯೇ ಮಗುವನ್ನು ಪಡೆಯಲು ಮುಂದಾಗಿದ್ದಾರೆ. ಕನ್ನಡ ನಟಿ ಭಾವನಾ ರಾಮಣ್ಣ ಐವಿಎಫ್ ಚಿಕಿತ್ಸೆ ಮೂಲಕ ತಾಯಿಯಾಗಲು ಹೊರಟಿರುವ ವಿಚಾರ ಸಧ್ಯ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಐವಿಎಫ್ ತಂತ್ರಜ್ಞಾನದ ಮೂಲಕ ಅವಳಿ ಮಕ್ಕಳ ಮಕ್ಕಳಿಗೆ ಭಾವನಾ ತಾಯಿಯಾಗುತ್ತಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧವಾಗಿ ಚರ್ಚೆ ನಡೆಯುತ್ತಿದೆ. ಈ ಯಾವ ಚರ್ಚೆ, ಟೀಕೆಗೂ ತಲೆ ಕೆಡಿಸಿಕೊಳ್ಳದ ಭಾವನಾ ರಾಮಣ್ಣ ಅವರು ತಮ್ಮ ನಿರ್ಧಾರವನ್ನ ಖುಷಿಯಿಂದ ಹಂಚಿಕೊಂಡಿದ್ದರು.
ಸ್ಯಾಂಡಲ್‌ವುಡ್ ನಟಿ ಭಾವನಾ ರಾಮಣ್ಣ ತಾನು ಯಾಕೆ ಐವಿಎಫ್ ಮೂಲಕ ಮಗುವನ್ನು ಪಡೆಯುವುದಕ್ಕೆ ಮುಂದಾದೆ ಅನ್ನೋದನ್ನು ಈಗಾಗಲೇ ನೀಡಿರುವ ಸಂದರ್ಶನದಲ್ಲಿ ರಿವೀಲ್ ಮಾಡಿದ್ದಾರೆ. ನಟಿ ಭಾವನಾ ರಾಮಣ್ಣ ಅವರು ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಅವರು ಸೀಮಂತ ಶಾಸ್ತ್ರ ಮಾಡಿಕೊಂಡಿದ್ದಾರೆ. ಅವಳಿ ಮಕ್ಕಳು ಹುಟ್ಟುತ್ತವೆಂದು ಹಲವು ಸಂದರ್ಶನದಲ್ಲಿ ಹೇಳಿಕೊಂಡಿದ್ದರು. ತಮ್ಮ ಮಕ್ಕಳನ್ನು ಹೇಗೆ ಬೆಳೆಸಬೇಕು. ಅವರನ್ನು ಹೇಗೆ ನೋಡಿಕೊಳ್ಳಬೇಕು ಅನ್ನೋ ಬಗ್ಗೆ ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

ಇನ್ನೂ ಸಂದರ್ಶನದಲ್ಲಿ ನಟಿ ಭಾವನಾ ಅವರು, 40 ರಿಂದ 50ರ ಒಳಗಿನ ವಯಸ್ಸಿನವರಾಗಿದ್ದರಿಂದ ಸಹಜ ಹೆರಿಗೆ ಆಗುವುದಿಲ್ಲ. ಸಿ ಸೆಕ್ಷನ್ ಮೂಲಕವೇ ಹೆರಿಗೆ ಮಾಡಿಸುವುದಾಗಿ ವೈದ್ಯರು ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದ್ದಾರೆ. ಇನ್ನೂ ಸಂದರ್ಶನದಲ್ಲಿ ನಟಿ ಭಾವನಾ ರಾಮಣ್ಣ ಅವರು, ತಮಗೆ ಹುಟ್ಟುವ ಮಕ್ಕಳಿಗೆ ಹೆಸರನ್ನೂ ಕೂಡ ಇಟ್ಟಿದ್ದಾರೆ. ಹೆಣ್ಣು ಮಗು ಹುಟ್ಟಿದರೆ ಏನು ಹೆಸರು? ಗಂಡು ಮಗು ಹುಟ್ಟಿದರೆ ಏನು ಹೆಸರು? ಅನ್ನೋದನ್ನೂ ಈಗಾಗಲೇ ತೀರ್ಮಾನಿಸಿದ್ದಾರೆ.
ಭಾವನಾ ರಾಮಣ್ಣ ಅವರಿಗೆ ಕೆಲವು ದಿನಗಳ ಹಿಂದಷ್ಟೇ ಹಸಿರು ಹಾಗೂ ಕೆಂಪು ಬಣ್ಣದ ಸೀರೆಯುಟ್ಟು ಸೀಮಂತ ಕಾರ್ಯಕ್ರಮದಲ್ಲಿ ಮಿಂಚಿದ್ದರು. ಗರ್ಭಿಣಿಯಾಗಿರುವ ನಟಿ ಭಾವನಾ ಅವರಿಗೆ ತಮ್ಮ ಮುಂದಿನ ಬದುಕು ಹೇಗಿರುತ್ತೆ ಅನ್ನೋದು ಗೊತ್ತಿದೆ. ಅದೆಲ್ಲವನ್ನೂ ಲೆಕ್ಕಾಚಾರ ಹಾಕಿಯೇ ಈ ಗಟ್ಟಿ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಅಲ್ಲದೆ ವೈದ್ಯರು ಅವಳಿ ಮಕ್ಕಳು ಹುಟ್ಟುತ್ತಾರೆಂದು ಗೊತ್ತಾಗುತ್ತಿದ್ದಂತೆ ಇದೇ ಹೆಸರು ಇಡಬೇಕು ಎಂದೂ ನಿರ್ಧರಿಸಿದ್ದಾರೆ. ಅದರಲ್ಲೂ ಹೆಣ್ಣು ಮಗು ಹುಟ್ಟಿದರೆ, ರುಕ್ಮಿಣಿ ಎಂದು ಹೆಸರು ಇಡುವುದಕ್ಕೆ ನಟಿ ಭಾವನಾ ರಾಮಣ್ಣ ಅವರು ನಿರ್ಧರಿಸಿದ್ದಾರೆ. ಇದೇ ಹೆಸರು ಇಡುವುದಕ್ಕೂ ಒಂದು ವಿಶೇಷ ಕಾರಣವಿದೆಯಂತೆ.
ಹೆಣ್ಣು ಮಗುವಿಗೆ ಮಾತ್ರ ಯೋಚನೆ ಮಾಡಿದ್ದು, ತನ್ನ ಅಜ್ಜಿಯ ಹೆಸರನ್ನೇ ಇಡಬೇಕು ಎಂದು ನಿರ್ಧರಿಸಿದ್ದೇನೆ ಎಂದು ನಟಿ ಭಾವನಾ ಅವರು ಸಂದರ್ಶನದಲ್ಲಿ ಹೇಳಿದ್ದಾರೆ. ಅವರ ಅಜ್ಜಿಯ ಹೆಸರು ರುಕ್ಮಿಣಿ. ಹೀಗಾಗಿ ಹೆಣ್ಣು ಮಗು ಹುಟ್ಟಿದರೆ ರಕ್ಮಿಣಿ ಎಂದು ಹೆಸರಿಡುತ್ತೇನೆ. ಆದರೆ, ಗಂಡು ಮಗುವಿಗೆ ಇನ್ನೂ ಹೆಸರಿಡುವ ನಿರ್ಧಾರ ಮಾಡಿಲ್ಲ ಎಂದಿದ್ದಾರೆ. ಇನ್ನೂ ನಟಿ ಭಾವನಾ ಅವರು ಮಕ್ಕಳೊಂದಿಗೆ ಹೆಚ್ಚು ಕಾಲ ಕಳೆಯುವುದಾಗಿಯೂ ಹೇಳಿಕೊಂಡಿದ್ದಾರೆ.












Click it and Unblock the Notifications