Rachita Ram: ದರ್ಶನ್ ಸರ್ ನನಗೆ ಗುರು ಸಮಾನರು ಎನ್ನುತ್ತಾ ಭಾರವಾದ ಭಾವನೆಗಳಿಗೆ ಅಕ್ಷರ ರೂಪ ನೀಡಿದ ನಟಿ ರಚಿತಾ ರಾಮ್
ಬೆಂಗಳೂರು, ಜೂನ್. 18: ಕನ್ನಡ ಚಿತ್ರರಂಗದ ನಟ ದರ್ಶನ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ಬಂಧನಕ್ಕೆ ಒಳಗಾಗಿದ್ದಾರೆ. ಇಡೀ ಚಿತ್ರರಂಗದ ಜೊತೆಗೆ ದೇಶವೇ ಪ್ರಕರಣದ ಬಗ್ಗೆ ತಲೆ ಕೆಡಿಸಿಕೊಂಡಿದೆ. ಇಂತಹ ಸಮಯದಲ್ಲಿ ಚಿತ್ರರಂಗದ ಹಲವು ಮಂದಿ ರೇಣುಕಾಸ್ವಾಮಿ ಕೊಲೆ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ.
ಇತ್ತೀಚೆಗೆ ನಟ ಸುದೀಪ್, ಉಪೇಂದ್ರ, ಜಗ್ಗೇಶ್ ಮತ್ತು ನಟಿ ರಮ್ಯಾ ಕೂಡ ದರ್ಶನ್ ಪ್ರಕರಣಕ್ಕೆ ಪ್ರತಿಕ್ರಿಯಿಸಿದ್ದರು. ಈಗ ದರ್ಶನ್ ಚಿತ್ರರಂಗಕ್ಕೆ ಪರಿಚಯಿಸಿದ ಡಿಂಪಲ್ ಕ್ವೀನ್ ರಚಿತಾ ರಾಮ್ ಕೂಡ ಭಾರತವಾದ ಮನಸ್ಸಿನಿಂದ ತಮ್ಮ ಹೇಳಿಕೆ ನೀಡಿದ್ದಾರೆ. ನನಗೆ ಗುರು ಸಮಾನರಾದ ದರ್ಶನ್ ಸರ್, ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದವರು. ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ನಂಬಲು ಸ್ವಲ್ಪ ಕಷ್ಟವಾಗುತ್ತಿದೆ ಎಂದಿದ್ದಾರೆ.

ದರ್ಶನ್ ಸರ್ ನನಗೆ ಗುರು ಸಮಾನರು: ನಟಿ ರಚಿತಾ ರಾಮ್
ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕರಣದ ಬಗ್ಗೆ ಬರೆದುಕೊಂಡಿರುವ ಅವರು, "ಧರ್ಮೋ ರಕ್ಷತಿ ರಕ್ಷಿತಃ" ಎಂದು ಹೇಳಿದ್ದಾರೆ. "ನಮಸ್ಕಾರ..ಈ ನೋಟ್‌ನ ನಾನು ನಟಿಯಾಗಿ ಅಲ್ಲ ಸಾಮನ್ಯ ಪ್ರಜೆಯಾಗಿ ಬರೆಯುತ್ತಿದ್ದೇನೆ. ಇತ್ತಿಚೆಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು..!" ಎಂದು ತಮ್ಮ ಮಾತುಗಳನ್ನು ಆರಂಭಿಸಿದ್ದಾರೆ.
"ಮೊದಲನೇಯಾಶಾಂದಾಗಿ ರೇಣುಕಾಸ್ವಾಮಿ ಅವರ ಆತ್ಮಕ್ಕೆ ತಿ ಸಿಗಲಿ, ಅವರ ಕುಟುಂಬಕ್ಕೆ ಭಗವಂತ ಧೈರ್ಯ ಭರಿಸುವ ಶಕ್ತಿ ನಿಡಲಿ ಎಂಬ ಪ್ರಾರ್ಥನೆ ಮಾಡುತ್ತೇನೆ. ಈ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆಂಬ ಭರವಸೆ ನನಗಿದೆ. ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ ನಟ ದರ್ಶನ್ ಸರ್ ನನಗೆ ಗುರು ಸಮಾನರು, ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದಂತಹ ವ್ಯಕ್ತಿ ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ನಂಬಲು ಸ್ವಲ್ಪ ಕಷ್ಟವಾಗುತ್ತಿದೆ" ಎಂದು ನೋವು ತೋಡಿಕೊಂಡಿದ್ದಾರೆ.

ಏನಿದ್ದರೂ ಸತ್ಯ ಪೊಲೀಸ್ ತನಿಖೆಯಿಂದ ನಮ್ಮ ಮುಂದೆ ಬರಲಿದೆ
ಮುಂದುವರಿದು, ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳ ಬಗ್ಗೆ ಪರೋಕ್ಷವಾಗಿ ಬೇಸರ ವ್ಯಕ್ತಪಡಿಸಿರುವ ಅವರು, "ಏನಿದ್ದರೂ ಸತ್ಯ ಪೊಲೀಸ್ ತನಿಖೆಯಿಂದ ನಮ್ಮ ಮುಂದೆ ಬರಲಿದೆ ಎನ್ನುವುದೆ ನನ್ನ ನಂಬಿಕೆ. ನನ್ನ ಮಾಧ್ಯಮ ಮಿತ್ರರು ಈ ಕೇಸ್‌ನ ವರದಿಯಲ್ಲಿ ಪಾರದರ್ಶಕವಾಗಿರುತ್ತಿರಿ ಮತ್ತು ನಿಷ್ಪಕ್ಷವಾಗಿ ಕೆಲಸ ಮಾಡುತ್ತಿರಿ ಎಂದು ಆಶಿಸುತ್ತೇನೆ" ಎಂದು ಹೇಳಿಕೊಂಡಿದ್ದಾರೆ.
ಈ ಮೂಲಕ ನಟ ದರ್ಶನ್ ಅವರಿಗೆ ಪರೋಕ್ಷವಾಗಿ ಬೆಂಬಲ ವ್ಯಕ್ತಪಡಿಸಿರುವ ಅವರು, ದರ್ಶನ್ ಇಂತಹ ಪ್ರಕರಣದಲ್ಲಿ ಭಾಗಿಯಾಗಿರುವುದು ನಂಬಲು ಸ್ವಲ್ಪ ಕಷ್ಟ ಎಂದಿದ್ದಾರೆ. ಗುರುಗಳ ಬಗ್ಗೆ ಭಾವನಾತ್ಮಕವಾಗಿ ಮಾತನಾಡಿದ್ದಾರೆ. ಪೊಲಿಸ್ ತನಿಖೆಯಿಂದಲೇ ಸತ್ಯ ಹೊರಬರಲಿ... ಮಾಧ್ಯಮದವರು ತನಿಖೆ ಮಾಡುವುದು ಬೇಡ ಎಂಬಂತೆ ಮಾಧ್ಯಮಗಳಿಗೆ ತಿಳಿ ಹೇಳಿದ್ದಾರೆ.
ನಟಿ ರಚಿತಾ ರಾಮ್ ಪೋಸ್ಟ್‌ಗೆ ದರ್ಶನ್ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಬಲಕ್ಕೆ ನಿಂತ ನಿಮಗೆ ಧನ್ಯವಾದಗಳು ಎಂದಿದ್ದಾರೆ. "ಕಾನೂನು ಎಲ್ಲರಿಗೂ ಒಂದೇ, ತಪ್ಪಿದರೆ ಕಂಡಿತಾ ಶಿಕ್ಷೆ ಆಗಲಿ", ನಮ್ಮ ಬಾಸ್ ಯಾವ ತಪ್ಪು ಮಾಡಿಲ್ಲ, ಡಿ ಬಾಸ್‌ಗೆ ಜೈ ಎಂಬಂತಹ ಕಾಮೆಂಟ್‌ಗಳು ಮಾಡುತ್ತಿದ್ದಾರೆ.
ಚಂದನವನದ ಡಿಂಪಲ್ ಕ್ವೀನ್ ಆಗಿರುವ ರಚಿತಾ ರಾಮ್ ದರ್ಶನ್ ಜೊತೆಗೆ ನಾಲ್ಕು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಅವರ ಮೊದಲ ಸಿನಿಮಾ ಬುಲ್ ಬುಲ್, ಕ್ರಾಂತಿ, ಅಂಬರೀಷ ಮತ್ತು ಜಗ್ಗು ದಾದಾ ಸಿನಿಮಾದಲ್ಲಿ ದರ್ಶನ್ ಜೊತೆಗೆ ನಟಿಸಿದ್ದಾರೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications