ನಟಿ ಶೋಭಿತಾ ಮರಣೋತ್ತರ ಪರೀಕ್ಷೆಯಲ್ಲಿ ರಿವೀಲ್ ಆಯ್ತು ಅಸಲಿ ವಿಚಾರ!
ಕನ್ನಡ ಕಿರುತೆರೆ ನಟಿ ಶೋಭಿತಾ ಶಿವಣ್ಣ ಅವರು ಹೈದರಾಬಾದ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ವಿಚಾರ ಎಲ್ಲರಿಗೂ ಶಾಕ್ ನೀಡಿದೆ. ಶೋಭಿತಾ ಸಾವಿನ ಸುತ್ತ ಹಲವು ಅನುಮಾನಗಳು ಕೂಡ ಸುತ್ತಿಕೊಂಡಿದ್ದು, ಅವರ ಮರಣೋತ್ತರ ಪರೀಕ್ಷೆಯಲ್ಲಿ ಶಾಕಿಂಗ್ ವಿಚಾರಗಳು ಬಹಿರಂಗವಾಗಿದೆ.
ಹೈದರಾಬಾದ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಶೋಭಿತಾ ಮೃತದೇಹದ ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದೆ. ಇದರಲ್ಲಿ ಶೋಭಿತಾ ಅವರ ಸಾವಿಗೆ ಅಸಲಿ ಕಾರಣ ಕೂಡ ಗೊತ್ತಾಗಿದೆ. ಮೊದಲಿಗೆ ಶೋಭಿತಾ ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿತ್ತು. ಇದು ಆತ್ಮಹತ್ಯೆಯೋ? ಅಥವಾ ಕೊಲೆಯೋ? ಎಂದು ಸಂಶಯಗಳು ವ್ಯಕ್ತವಾಗಿದ್ದವು.

ಇನ್ನು ಶೋಭಿತಾ ಮರಣೋತ್ತರ ಪರೀಕ್ಷೆಯಲ್ಲಿ ಈ ಸಾವಿನ ಬಗ್ಗೆ ಮಾಹಿತಿ ಖಚಿತವಾಗಿದ್ದು, ಆತ್ಮಹತ್ಯೆಯಿಂದಲೇ ಶೋಭಿತಾ ಸಾವನ್ನಪ್ಪಿದ್ದಾರೆ ಎಂದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿದುಬಂದಿದೆ ಎಂದು ವರದಿಯಾಗಿದೆ. ಮೊದಲಿಗೆ ಶೋಭಿತಾ ಅವರನ್ನು ಯಾರಾದರೂ ಹತ್ಯೆ ಮಾಡಿರಬಹುದು ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ, ಶೋಭಿತಾ ಅವರ ದೇಹದ ಮೇಲೆ ಯಾವುದೇ ಗಾಯಗಳು ಸಹ ಕಂಡು ಬಂದಿಲ್ಲ. ಇದು ಕೊಲೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ, ಆತ್ಮಹತ್ಯೆ ಮಾಡಿಕೊಂಡಿದ್ದರಿಂದಲೇ ಅವರು ಮೃತಪಟ್ಟಿದ್ದಾರೆ ಎಂದು ವರದಿ ಹೇಳಿದೆಯಂತೆ.
ಶೋಭಿತಾ ಅವರು ಮದುವೆ ಆದ ಬಳಿಕ ಹೈದರಾಬಾದ್‌ನಲ್ಲಿ ಪತಿಯ ಜೊತೆ ನೆಲೆಸಿದ್ದರು. ಅಪಾರ್ಟ್‌ಮೆಂಟ್‌ನಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವಿನ ಬಗ್ಗೆ ಹಲವು ಅನುಮಾನಗಳು ಮೂಡಿದ್ದವು. ಯಾರಾದರೂ ನಟಿಯನ್ನು ಹತ್ಯೆ ಮಾಡಿರಬಹುದೇ ಎಂಬ ಪ್ರಶ್ನೆ ಕೂಡ ಉದ್ಭವ ಆಗಿತ್ತು. ಆದರೆ ಶೋಭಿತಾ ಅವರ ದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಕಾಣಿಸಿಲ್ಲ. ಹಾಗಾಗಿ ಇದು ಕೊಲೆ ಅಲ್ಲ, ಆತ್ಮಹತ್ಯೆ ಎಂಬುದು ಖಚಿತವಾಗಿದೆ.

ಕನ್ನಡ ಕಿರುತೆರೆಯಲ್ಲಿ ಮಿಂಚಿದ್ದ ಶೋಭಿತಾ ಹೈದರಾಬಾದ್‌ನಲ್ಲಿ ನೆಲೆಸಿದ್ದರು. ನಿನ್ನೆ ಅವರ ಅಪಾರ್ಟ್‌ಮೆಂಟ್‌ನಲ್ಲಿ ಶೋಭಿತಾ ಆತ್ಮಹತ್ಯೆ ಮಾಡಿಕೊಂಡಿದ್ದ ವಿಚಾರ ಬೆಳಕಿಗೆ ಬಂದಿತ್ತು. ಇಂದು ಶೋಭಿತಾ ಮರಣೋತ್ತರ ಪರೀಕ್ಷೆ ನಡೆದಿದ್ದು, ಮೃತದೇಹವನ್ನು ಅವರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಅಂತ್ಯಕ್ರಿಯೆ ನಡೆಸಲು ಶೋಭಿತಾ ಮೃತದೇಹವನ್ನು ಬೆಂಗಳೂರಿಗೆ ತರಲಾಗುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಅಲ್ಲದೆ ಶೋಭಿತಾ ಸಾವಿನ ಬಗ್ಗೆ ತನಿಖೆ ಶುರು ಮಾಡಿರುವ ಪೊಲೀಸರಿಗೆ ಡೆತ್‌ನೋಟ್ ಕೂಡ ಸಿಕ್ಕಿದ್ದು, ಇದರಲ್ಲಿ ಎರಡು ಸಾಲುಗಳಿವೆ ಎಂದು ಹೇಳಲಾಗುತ್ತಿದೆ. ನೀನು ಸಾಯಬಹುದು ಅಂದ್ರೆ ನೀನು ಸಾಯಬಹುದು, ಜೀವನದಲ್ಲಿ ಎಲ್ಲವೂ ಪರ್ಫೆಕ್ಟ್ ಆಗಿದೆ ಎಂಬ ಸಾಲುಗಳು ಡೆತ್‌ನೋಟ್‌ನಲ್ಲಿದ್ದು ಇದರ ಒಳಾರ್ಥ ಏನು ಎಂಬುದನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ. ಶೋಭಿತಾ ಬರೆದಿದ್ದಾರೆ ಎನ್ನಲಾದ ಈ ಪತ್ರದ ಅಸಲಿಯತ್ತಿನ ಬಗ್ಗೆ ಪೊಲೀಸರು ತಲೆಕೆಡಿಸಿಕೊಂಡಿದ್ದಾರೆ.
ಶೋಭಿತಾ ಸಾವು ಸಂಬಂಧ ಅಪಾರ್ಟ್‌ಮೆಂಟ್‌ನ ನೆರೆಹೊರೆಯವರ ಬಳಿ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಅವರ ಇತ್ತೀಚೆಗೆ ಅವರ ವೈಯಕ್ತಿಕ ಜೀವನದಲ್ಲಿ ಏನಾದರೂ ಸಮಸ್ಯೆಗಳು ಎದುರಾಗಿದ್ದವಾ ಎಂಬ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಮೂಲತಃ ಹಾಸನ ಜಿಲ್ಲೆಯ ಸಕಲೇಶಪುರದವರಾದ ಶೋಭಿತಾ ಕನ್ನಡ ಕಿರುತೆರೆಯಲ್ಲಿ ಸಖತ್ ಹೆಸರು ಮಾಡಿದ್ದರು. ಕೆಲ ಸಿನಿಮಾಗಳಲ್ಲೂ ನಟಿಸಿದ್ದ ಅವರು ಬ್ರಹ್ಮಗಂಟು ಸೀರಿಯಲ್‌ನಿಂದ ಖ್ಯಾತಿ ಪಡೆದು ಹೈದರಾಬಾದ್‌ನಲ್ಲಿ ನೆಲೆಸಿದ್ದರು.












Click it and Unblock the Notifications