Year Ender 2025: ಕನ್ನಡ ಚಿತ್ರರಂಗದಲ್ಲಿ ಮಿಂಚಿ ಈ ವರ್ಷ ಮರೆಯಾದ ನಟ-ನಟಿಯರು
ಕನ್ನಡ ಚಿತ್ರರಂಗವು ಈ ವರ್ಷ ಹಲವು ಏಳುಬೀಳುಗಳನ್ನು ಕಂಡಿದೆ. ಸ್ಯಾಂಡಲ್‌ವುಡ್‌ನಲ್ಲಿ ಈ ವರ್ಷ ರಿಲೀಸ್ ಆದ ಹಲವು ಸಿನಿಮಾಗಳು ವಿಶ್ವದ ಗಮನ ಸೆಳೆದವು. ಮತ್ತೊಂದೆಡೆ ದಶಕಗಳಿಂದಲೂ ಕನ್ನಡ ಸಿನಿಮಾಗಳಲ್ಲಿ ಮಿಂಚಿದ್ದ ಕಲಾವಿದರು ನಮ್ಮನ್ನಗಲಿದರು. ಕೆಲ ನಟ ನಟಿಯರು ಅತಿ ಚಿಕ್ಕ ವಯಸ್ಸಿಗೆ ಅಕಾಲಿಕ ನಿಧನ ಹೊಂದಿದ್ದಾರೆ. ಈ ಪೈಕಿ ಈ ವರ್ಷ ಮಿಂಚಿ ಮರೆಯಾದ ಕನ್ನಡ ಚಿತ್ರರಂಗದ ಕಲಾವಿದರು ಯಾರೆಲ್ಲ ಎನ್ನುವುದನ್ನು ಇಲ್ಲಿ ತಿಳಿಯಿರಿ..
* ಸರಿಗಮ ವಿಜಿ: ಕನ್ನಡ ಚಿತ್ರರಂಗ ಹಾಗೂ ಕಿರುತೆರೆ ಲೋಕದ ಹಿರಿಯ ನಟ ಸರಿಗಮ ವಿಜಿ ಅವರು ಜನವರಿ 15ರಂದು ನಿಧನರಾಗಿದ್ದರು. ಅವರಿಗೆ 76 ವರ್ಷ ವಯಸ್ಸಾಗಿತ್ತು. ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದರು. 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಅವರು ಸಹಾಯಕ ನಿರ್ದೇಶಕನಾಗಿಯೂ ಕೆಲಸ ಮಾಡಿದ್ದರು. ಟಿವಿ ಧಾರಾವಾಹಿಗಳಲ್ಲಿ ನಟನೆ ಹಾಗೂ ಕೆಲ ಧಾರಾವಾಹಿಗಳ ನಿರ್ದೇಶನವನ್ನೂ ಮಾಡಿದ್ದರು.

* ಬಿ.ಸರೋಜಾ ದೇವಿ: ಕನ್ನಡ ಚಿತ್ರರಂಗದ ಹಿರಿಯ ಹಾಗೂ ಬಹುಭಾಷಾ ನಟಿ ಬಿ.ಸರೋಜಾ ದೇವಿ ಅವರು ಜುಲೈ 14ರಂದು ವಯೋಸಹಜ ಕಾಯಿಲೆಯಿಂದ ನಿಧನರಾದರು. "ಅಭಿನಯ ಸರಸ್ವತಿ" ಎಂದೇ ಪ್ರಸಿದ್ಧರಾಗಿದ್ದ ಅವರಿಗೆ 87 ವರ್ಷ ವಯಸ್ಸಾಗಿತ್ತು. ಕನ್ನಡ, ತೆಲುಗು, ತಮಿಳು, ಬಾಲಿವುಡ್ ಸೇರಿದಂತೆ ನೂರಾರು ಬಹುಭಾಷಾ ಸಿನಿಮಾಗಳಲ್ಲಿ ನಟಿಸಿರುವ ಸರೋಜಾ ದೇವಿ ಅವರಿಗೆ ಪದ್ಮಶ್ರೀ ಹಾಗೂ ಪದ್ಮಭೂಷಣ ಪ್ರಶಸ್ತಿಗಳನ್ನು ಸಹ ಪಡೆದಿದ್ದರು.
* ಬ್ಯಾಂಕ್ ಜನಾರ್ಧನ್: ಕನ್ನಡ ಚಿತ್ರರಂಗದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಅವರು ತಮ್ಮ 76ನೇ ವಯಸ್ಸಿನಲ್ಲಿ ಏಪ್ರಿಲ್ 14ರಂದು ನಿಧನರಾದರು. 800ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ಅಭಿನಯಿಸಿದ ಅವರು 1985ರಲ್ಲಿ 'ಪಿತಾಮಹ' ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದರು. ವಿಜಯಾ ಬ್ಯಾಂಕ್‌ನಲ್ಲಿ ಅವರು ಕೆಲಸ ಮಾಡುತ್ತಿದ್ದ ಕಾರಣ ಅವರಿಗೆ ಬ್ಯಾಂಕ್ ಜನಾರ್ಧನ್ ಎಂಬ ಹೆಸರು ಬಂತು.
* ರಾಕೇಶ್ ಪೂಜಾರಿ: ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ಖ್ಯಾತಿಯ ಉದಯೋನ್ಮುಖ ಹಾಸ್ಯನಟ ರಾಕೇಶ್ ಪೂಜಾರಿ ಹೃದಯಾಘಾತದಿಂದ ಮೇ 12ರಂದು ಅಕಾಲಿಕ ಮರಣ ಹೊಂದಿದರು. ಕನ್ನಡದ ಕಿರುತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಅವರು ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಾಪ್ಟರ್ 1 ಸಿನಿಮಾದಲ್ಲಿ ಕೊನೆಯದಾಗಿ ನಟಿಸಿದ್ದರು.
* ನಟ ಸಂತೋಷ್ ಬಾಲರಾಜ್: "ಗಣಪ" ಸಿನಿಮಾ ಖ್ಯಾತಿಯ ಸ್ಯಾಂಡಲ್‌ವುಡ್ ಯುವ ನಟ ಸಂತೋಷ್ ಬಾಲರಾಜ್ ಅವರು ಜಾಂಡೀಸ್‌ನಿಂದ ಆಗಸ್ಟ್ 5ರಂದು ಜೀವಬಿಟ್ಟರು. ಇವರ ನಿಧನಕ್ಕೆ ಇಡೀ ಚಿತ್ರರಂಗ ಕಂಬನಿ ಮಿಡಿದಿತ್ತು. ಅವರಿಗೆ 38 ವರ್ಷ ವಯಸ್ಸಾಗಿತ್ತು. ಜಾಂಡೀಸ್‌ನಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಕೋಮಾ ಸ್ಥಿತಿ ತಲುಪಿದ್ದರು. ಚಿಕಿತ್ಸೆ ಫಲಿಸದೆ ಬಾರದ ಲೋಕಕ್ಕೆ ಪಯಣ ಬೆಳೆಸಿದರು.

* ದಿನೇಶ್ ಮಂಗಳೂರು: ರಂಗಭೂಮಿ ನಟ ಹಾಗೂ ಕೆಜಿಎಫ್ ಸಿನಿಮಾ ಖ್ಯಾತಿಯ ದಿನೇಶ್ ಮಂಗಳೂರು ಅವರು ಆಗಸ್ಟ್ 25ರಂದು ಅನಾರೋಗ್ಯದಿಂದ ನಿಧನರಾದರು. ರಂಗಭೂಮಿ ಹಿನ್ನೆಲೆಯಿಂದ ಚಿತ್ರರಂಗಕ್ಕೆ ಬಂದಿದ್ದ ನಟ ದಿನೇಶ್ ಮಂಗಳೂರು, ನಟನಾಗಿ, ಕಲಾ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದರು. ಕನ್ನಡ ಚಿತ್ರರಂಗದಲ್ಲಿ ಅವರಿಗೆ ಬಹಳ ಬೇಡಿಕೆ ಇತ್ತು. ಕುಂದಾಪುರದಲ್ಲಿ ಅವರು ಕೊನೆಯುಸಿರು ಎಳೆದಿದ್ದಾರೆ. ಉಳಿದವರು ಕಂಡಂತೆ, ಕಿರಿಕ್ ಪಾರ್ಟಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದರು.
* ಹರೀಶ್ ರಾಯ್: ಓಂ ಸೇರಿದಂತೆ ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿ, ಚಿತ್ರರಂಗದ ಖಡಕ್ ವಿಲನ್ ಆಗಿ ಗುರುತಿಸಿಕೊಂಡಿದ್ದ ಖಳನಟ ಹರೀಶ್ ರಾಯ್ ಅವರು ನವೆಂಬರ್ 6ರಂದು ಕ್ಯಾನ್ಸರ್‌ನಿಂದಾಗಿ ನಿಧನರಾದರು. ಕೆಜಿಎಫ್ ಸಿನಿಮಾದಲ್ಲಿ ಚಾಚಾ ಪಾತ್ರದಿಂದ ಹೈಪ್ ಕ್ರಿಯೇಟ್ ಮಾಡಿದ್ದ ಅವರು ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಕನ್ನಡದ ಕೆಲ ನಟರು ಹರೀಶ್ ರಾಯ್ ಚಿಕಿತ್ಸೆಗೆ ಆರ್ಥಿಕ ಸಹಾಯ ಮಾಡಿದ್ದರು. ಆದರೂ ಚಿಕಿತ್ಸೆ ಫಲಿಸಲಿಲ್ಲ.
* ಎಂ.ಎಸ್.ಉಮೇಶ್: ಕನ್ನಡ ಚಿತ್ರರಂಗದ ಹಿರಿಯ ಹಾಸ್ಯ ನಟ ಎಂ.ಎಸ್.ಉಮೇಶ್ ಅವರು ಕ್ಯಾನ್ಸರ್‌ನಿಂದ ಚಿಕಿತ್ಸೆ ಫಲಿಸದೆ ನವೆಂಬರ್ 30ರಂದು ನಿಧನರಾದರು. ಮೈಸೂರು ಶ್ರೀಕಂಠಯ್ಯ ಉಮೇಶ್ ಅವರನ್ನು ಎಂಎಸ್ ಉಮೇಶ್ ಎಂದೇ ಚಿತ್ರರಂಗದಲ್ಲಿ ಕರೆಯಲಾಗುತ್ತಿತ್ತು. ಇತ್ತೀಚೆಗೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. 350ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದ ಅವರು ತಮ್ಮ "ಅಪಾರ್ಥ ಮಾಡ್ಕೋಬೇಡಿ" ಡೈಲಾಗ್‌ನಿಂದ ಜನಪ್ರಿಯತೆ ಪಡೆದಿದ್ದರು.
-
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ -
Dhurandhar 2: ಬಾಕ್ಸ್ ಆಫೀಸ್ನಲ್ಲಿ 'ಧುರಂಧರ್ 2' ಸುನಾಮಿ: 3 ದಿನಕ್ಕೆ 500 ಕೋಟಿ ಕ್ಲಬ್ ಸೇರಿದ ರಣವೀರ್ ಸಿಂಗ್ ಸಿನಿಮಾ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications