ಕನ್ನಡದ ಖ್ಯಾತ ಗಾಯಕಿ ಬಾಳಲ್ಲಿ ಬಿರುಗಾಳಿ
Akhila Pajimannu: ಇತ್ತೀಚಿನ ದಿನಗಳಲ್ಲಿ ಸೆಲೆಬ್ರಿಟಿಗಳ ವಿಚ್ಚೇದನ ಸುದ್ದಿಗಳೇ ಹೆಚ್ಚಾಗುತ್ತಿವೆ. ಪ್ರೀತಿ, ಪ್ರೇಮ, ಮದುವೆ ಎರಡ್ಮೂರು ವರ್ಷಕ್ಕೆ ವಿಚ್ಚೇದನ ಪಡೆಯುತ್ತಿರುವ ಪ್ರಕರಣಗಳು ಹೆಚ್ಚಾಗಿ ಕೇಳಿಬರುತ್ತಿವೆ. ಚಂದನ್ ಶೆಟ್ಟಿ ನಿವೇದಿತಾ ಗೌಡ ವಿಚ್ಚೇದನ ಬಳಿಕ ಹಲವು ಸೆಲೆಬ್ರಿಟಿಗಳು ವಿಚ್ಚೇದನ ಪಡೆದು ದೂರುವಾಗಿದ್ದಾರೆ. ಇದೀಗ ಆ ಸಾಲಿಗೆ 'ಕನ್ನಡ ಕೋಗಿಲೆ' ರಿಯಾಲಿಟಿ ಶೋನ ಗಾಯಕಿ ಅಖಿಲಾ ಪಜಿಮಣ್ಣು ಕೂಡ ಸೇರಿಕೊಂಡಿದ್ದಾರೆ.
ಕನ್ನಡಿಗರ ಮನಗೆದ್ದ ಗಾಯಕಿ ಅಖಿಲಾ ಪಜಿಮಣ್ಣು ಸೋಶಿಯಲ್ ಮೀಡಿಯಾದಲ್ಲಿ ಬಹು ದಿನಗಳಿಂದ ಸಕ್ರಿಯವಾಗಿದ್ದಾರೆ. ಕನ್ನಡ ಕೋಗಿಲೆ ಮೂಲಕ ಭಾರಿ ಜನಪ್ರಿಯತೆ ಗಳಿಸಿದ ಅಖಿಲಾ ಪಜಿಮಣ್ಣು ಬಳಿಕ ಹಲವು ವೇದಿಕೆಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅಖಿಲಾ ಪಜಿಮಣ್ಣು ತಮ್ಮ ಮಧುರ ಕಂಠದಿಂದ ಕನ್ನಡಿಗರ ಮನ ಗೆದಿದ್ದರು. ಕನ್ನಡ ಕೋಗಿಲೆ ರಿಯಾಲಿಟಿ ಶೋನಲ್ಲಿ ಮೊದಲೆರಡು ಆವೃತ್ತಿಗಳಲ್ಲಿ ರನ್ನರ್‌ಅಪ್ ಆಗಿ ಹೊರಹೊಮ್ಮಿದ್ದರು. ತಮ್ಮ ಹಾಡಿನ ಮೂಲಕ ಕನ್ನಡಿಗರಿಂದ ಭೇಷ್ಎನಿಸಿಕೊಂಡಿದ್ದರು.

ಗಾಯಕಿ ಅಖಿಲಾ ಪಜಿಮಣ್ಣು ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿದ್ದು, ಕಳೆದ ಮೂರು ವರ್ಷಗಳ ಹಿಂದೆ ಈ ಗಾಯಕಿ ಸಾಪ್ಟ್‌ವೇರ್ ಇಂಜಿನಿಯರ್ ಧನಂಜಯ್ ಶರ್ಮಾ ಎಂಬುವವರೊಂದಿಗೆ ವಿವಾಹವಾಗಿದ್ದರು. ಆದರೆ, ಈಗ ಮೂರು ವರ್ಷದ ನಂತರ ದಾಂಪತ್ಯ ಜೀವನದಲ್ಲಿ ಬಿರುಕು ಬಿಟ್ಟಿದ್ದು, ಗಾಯಕಿಯನ್ನು ಇಷ್ಟಪಡುವ ಕನ್ನಡಿಗರಿಗೆ ಶಾಕ್ ಕೊಟ್ಟಂತಾಗಿದೆ. ಅಖಿಲಾ ವಿಚ್ಚೇದನಕ್ಕೆ ಮುಂದಾಗಿದ್ದಾರೆಂಬ ಸುದ್ದಿ ಹರಿದಾಡುತ್ತಿದೆ.
ಕಳೆದ ಮೂರು ವರ್ಷಗಳ ಹಿಂದ ಕನ್ನಡದ ಗಾಯಕಿ ಅಖಿಲಾ ಪಜಿಮಣ್ಣು ಹಾಗೂ ಸಾಪ್ಟ್‌ವೇರ್ ಇಂಜಿನಿಯರ್ ಧನಂಜಯ್ ಶರ್ಮಾ ಅವರು ಅರೇಂಜ್ಡ್ ಮ್ಯಾರೇಜ್ ಆಗಿದ್ದರು. ಈ ಎರಡು ಕುಟುಂಬಗಳ ಸಮ್ಮುಖದಲ್ಲಿ ಜೋಡಿ ಅಖಿಲಾ ದಂಪತಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಎಲ್ಲವೂ ಖುಷಿ ಖುಷಿಯಾಗಿಯೇ ಇದ್ದ ಇಬ್ಬರ ದಾಂಪತ್ಯದಲ್ಲಿ ಅಂತಹದ್ದೇನಾಯ್ತೋ ಗೊತ್ತಿಲ್ಲ. ಬೇರೆಯಾಗುವುದಕ್ಕೆ ಗಾಯಕಿ ಅಖಿಲಾ ಹಾಗೂ ಧನಂಜಯ್ ಶರ್ಮಾ ಅವರಿಬ್ಬರು ನಿರ್ಧರಿಸಿದ್ದಾರೆ.
2022ರಲ್ಲಿ ಕನ್ನಡ ಕೋಗಿಲೆ ಗಾಯಕಿ ಅಖಿಲಾ ಪಜಿಮಣ್ಣು ಹಾಗೂ ಧನಂಜಯ್ ಶರ್ಮಾ ಇಬ್ಬರೂ ಗುರು ಹಿರಿಯರ ಆಸೆಯಂತೆಯೇ ವಿವಾಹವಾಗಿದ್ದರು. ಆದರೆ, ಇದೀಗ ಪರಸ್ಪರ ಒಪ್ಪಿಗೆ ಮೇಲೆ ಡಿವೋರ್ಸ್ ಪಡೆಯುವುದಕ್ಕೆ ಮುಂದಾಗಿದ್ದಾರೆ. ಅಖಿಲಾ ಪಜಿಮಣ್ಣು ಹಾಗೂ ಧನಂಜಯ್ ಶರ್ಮಾ ಈಗಾಗಲೇ ಪುತ್ತೂರು ನ್ಯಾಯಾಲಯದಲ್ಲಿ ಡಿವೋರ್ಸ್‌ಗೆ ಅರ್ಜಿಯನ್ನು ಸಲ್ಲಿಸಿದೆ ಎಂದು ನ್ಯೂಸ್ 18 ವರದಿ ಮಾಡಿದೆ. ಈ ಜೋಡಿ ಜೂನ್ 12ರಂದು ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿರುವುದಾಗಿ ತಿಳಿದು ಬಂದಿದೆ.
ಅಖಿಲಾ ಪಜಿಮಣ್ಣು ಅವರು ಸಾಪ್ಟ್‌ವೇರ್ ಇಂಜಿನಿಯರ್ ಆಗಿ ಅಮೆರಿಕದಲ್ಲಿ ವಾಸವಿದ್ದ ಧನಂಜಯ್ ಎಂಬುವವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಬಳಿಕ ಪತಿಯೊಂದಿಗೆ ಅಮೆರಿಕಗೆ ತೆರಳಿದಿದ್ದರು. ಯುಎಸ್‌ಎಗೆ ಹೋದ ಬಳಿಕವೂ ಸೋಶಿಯಲ್ ಮೀಡಿಯಾದ ಅಖಿಲಾ ಆಕ್ಟಿವ್ ಆಗಿದ್ದರು. ಇದೀಗ ವಿಚ್ಚೇದನ ನೀಡುವ ನಿರ್ಧಾರಕ್ಕೆ ಬಂದ್ಮೇಲೆ ಸೋಶಿಯಲ್ ಮೀಡಿಯಾ ಖಾತೆಗಳಿಂದ ಫೋಟೊಗಳನ್ನು ತೆಗೆದು ಹಾಕಿದ್ದಾರೆ.












Click it and Unblock the Notifications