ದರ್ಶನ್ ವಿಚಾರದಲ್ಲಿ ಉಮಾಪತಿ ಗೌಡ ಹೇಳಿದ ಮಾತು ಕೊನೆಗೂ ನಿಜವಾಯ್ತು!

ನಟ ದರ್ಶನ್ ತೂಗುದೀಪ ಜೀವನ ಈಗ ತೂಗುಯ್ಯಾಲೆ ಆಗಿದೆ. ಯಾಕಂದ್ರೆ ಕೊಲೆ ಆರೋಪದ ಬೆನ್ನಲ್ಲೇ ನಟ ದರ್ಶನ್ ವಿರುದ್ಧ ಕನ್ನಡಿಗರು ರೊಚ್ಚಿಗೆದ್ದು ಪ್ರತಿಭಟನೆ ನಡೆಸುತ್ತಿದ್ದಾರೆ. ಇದೇ ಸಮಯದಲ್ಲಿ ಉಮಾಪತಿ ಶ್ರೀನಿವಾಸ್ ಗೌಡ ಹೇಳಿಕೆ ಇದೀಗ ವೈರಲ್ ಆಗುತ್ತಿದೆ, ಹಾಗಾದ್ರೆ ದರ್ಶನ್ ಬಗ್ಗೆ ಉಮಾಪತಿ ಶ್ರೀನಿವಾಸ್ ಗೌಡ ಹೇಳಿದ್ದು ಏನು? ಮುಂದೆ ಓದಿ.

ಅಂದಹಾಗೆ ಉಮಾಪತಿ ಶ್ರೀನಿವಾಸ್ ಗೌಡ ಹಾಗೂ ನಟ ದರ್ಶನ್ ತೂಗುದೀಪ ನಡುವೆ ತಿಕ್ಕಾಟ ನಡೆದು ಸುಮಾರು 2 ವರ್ಷ ಆಗಿತ್ತು. ಆದರೆ ಕೆಲವು ತಿಂಗಳ ಹಿಂದೆ ಮತ್ತೊಮ್ಮೆ ಇಬ್ಬರ ಮಧ್ಯೆ ಕಿಚ್ಚು ಹೊತ್ತಿಕೊಂಡಿತ್ತು. ಹೀಗೆ ಫೈಟಿಂಗ್ ಶುರುವಾದ ಸಮಯದಲ್ಲಿ, ಉಮಾಪತಿ ಶ್ರೀನಿವಾಸ್ ಗೌಡಗೆ ತಡಗು ಅಂತಾ ನಟ ದರ್ಶನ್ ಕರೆದಿದ್ದರು. ಹೀಗಾಗಿ ಆ ಸಮಯದಲ್ಲಿ ಪ್ರತಿಕ್ರಿಯೆಯನ್ನು ನೀಡಿದ್ದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ, ದರ್ಶನ್ ಭವಿಷ್ಯದ ಬಗ್ಗೆ ಹೇಳಿದ್ದರು. ಆ ಮಾತು ಇದೀಗ ನಿಜವಾಗಿದೆ! ಉಮಾಪತಿ ಹೇಳಿಕೆಯ ವಿಡಿಯೋ ನೋಡಲು ಮುಂದೆ ಓದಿ.

Kannada Producer Umapathy Srinivas Gowda Once Said This About The Actor Darshan Thoogudeepa

ಕೊಲೆ ಆರೋಪಿ ದರ್ಶನ್ ಜೀವನ...

ನಟ ದರ್ಶನ್ ಅಹಂಕಾರದ ಬಗ್ಗೆ ಮಾತನಾಡಿದ್ದ ಉಮಾಪತಿ ಶ್ರೀನಿವಾಸ್ ಗೌಡ, 'ಜೀವನದಲ್ಲಿ ನಮ್ಮನ್ನ ಎಲ್ಲರೂ ಹೊಗಳಬೇಕು, ಎಲ್ಲರೂ ನಮಗೆ ಮರ್ಯಾದಿ ಕೊಡಬೇಕು ಅಂದ್ರೆ ಆ ರೀತಿ ಮರ್ಯಾದಿ ಸಂಪಾದನೆ ಮಾಡಬೇಕು. ಇವತ್ತು ನಾನು ತಗಡೇ ಇರಬಹುದು, ಹಿಂಗೇ ಜೀವನವು ಇರಲ್ಲ ಮೇಲೆ ಬಂದು ಕೆಳಗೆ ಬೀಳುತ್ತೆ' ಅಂತಾ ಹೇಳಿದ್ದರು ಉಮಾಪತಿ. ಈಗ ಅದೇ ರೀತಿ ನಟ ದರ್ಶನ್ ಕೊಲೆಯ ಆರೋಪದಲ್ಲಿ ಜೈಲು ಪಾಲಾಗಿದ್ದು, ಉಮಾಪತಿ ಶ್ರೀನಿವಾಸ್ ಅವರ ಹೇಳಿಕೆ ಈಗ ಮತ್ತೊಮ್ಮೆ ಫುಲ್ ವೈರಲ್ ಆಗುತ್ತಿದೆ. ಅಲ್ಲದೆ ದರ್ಶನ್ ವಿರೋಧಿಗಳು ಇದನ್ನ ಶೇರ್ ಮಾಡಿ, ನಟ ದರ್ಶನ್ ಕೊಲೆ ಆರೋಪದ ಕೇಸ್ ಬಗ್ಗೆ ಪ್ರಸ್ತಾಪ ಮಾಡುತ್ತಿದ್ದಾರೆ.

ದರ್ಶನ್ & ಗ್ಯಾಂಗ್‌ಗೆ ಅನ್ನ-ಸಾರು!

ಪ್ರತಿದಿನ ಎಣ್ಣೆ ಹೊಡೆದು, ಸಖತ್ ಎಂಜಾಯ್ ಮಾಡುತ್ತಾ ಮಾಂಸ ತಿನ್ನುತ್ತಿದ್ದ ನಟ ದರ್ಶನ್ & ಗ್ಯಾಂಗ್ ಈಗ ಅನ್ನ ಸಾರು ತಿಂದು ಮಲಗುವ ಪರಿಸ್ಥಿತಿ ಬಂದಿದೆ. ಪೊಲೀಸರು ಆರೋಪಿಗಳ ತಂಡಕ್ಕೆ ಅನ್ನ ಸಾರು ನೀಡಿ, ಚಾಪೆ ಕೊಟ್ಟು ಮಲಗಿಸಿದ್ದಾರೆ. ಈ ಮೂಲಕ ಕೊಲೆ ಆರೋಪದ ಹಿನ್ನೆಲೆ ಕಂಬಿ ಹಿಂದೆ ಬಿದ್ದಿರುವ, ಸೋ ಕಾಲ್ಡ್ ಡಿ-ಬಾಸ್ ಇದೀಗ ಹಿಂಸೆ ಅನುಭವಿಸುತ್ತಿದ್ದಾರೆ. ಇದೇ ರೀತಿ ಮುಂದಿನ ದಿನಗಳಲ್ಲಿ ಮತ್ತಷ್ಟು ಸಂಕಷ್ಟ ದರ್ಶನ್ ಅವರ ಬೆನ್ನುಹತ್ತುವ ಅಪಾಯ ಕಾಡುತ್ತಿದ್ದು, ಏನಾಗುತ್ತೆ ಅನ್ನೋದನ್ನ ಕಾದು ನೋಡಬೇಕಿದೆ. ಮತ್ತೊಂದು ಕಡೆ ತೂಗುದೀಪ ದರ್ಶನ್ ಅವರ ಅಭಿಮಾನಿಗಳು ಸೈಲೆಂಟ್ ಆಗುತ್ತಿದ್ದಾರೆ.

ಪತ್ರಕರ್ತರ ತೀವ್ರ ಆಕ್ರೋಶ!

ಪೊಲೀಸ್ ಅಧಿಕಾರಿಗಳ ವರ್ತನೆಯಿಂದ ಮಾಧ್ಯಮ ಸಿಬ್ಬಂದಿ ಆಕ್ರೋಗೊಂಡಿದ್ದಾರೆ ಎಂಬ ಆರೋಪಗಳ ಬೆನ್ನಲ್ಲೇ, ದರ್ಶನ್ ಅಭಿಮಾನಿ ಮಾಧ್ಯಮಗಳ ಎದುರಿಗೆ ಬಂದು ಮಾಧ್ಯಮಗಳ ಕುರಿತು ತುಂಬ ಕೀಳಾಗಿ ಮಾತನಾಡಿದ್ದಾರೆ ಎಂದು ಆರೋಪ ಮಾಡಲಾಗಿದೆ. ಈ ವೇಳೆ ಅಲ್ಲಿದ್ದ ಮಾಧ್ಯಮ ಸಿಬ್ಬಂದಿ ದಿಢೀರ್ ರೊಚ್ಚಿಗೆದ್ದಿದ್ದು ಆತನ ಮುಖಚರಿ ಸೆರೆಹಿಡಿಯಲು ಹೋಗಿದ್ದಾರೆ. ಈ ವೇಳೆ ಹೆದರಿದ ದರ್ಶನ್ ಅಭಿಮಾನಿ, ಆ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಇಷ್ಟಾದರೂ ಮಾಧ್ಯಮಗಳ ಸಿಬ್ಬಂದಿ ಆತನ ಹಿಂದೆ ಓಡಿದ್ದಾರೆ. ಆಗ ತಕ್ಷಣ ಪೊಲೀಸರು ಆತನನ್ನ ಪೊಲೀಸ್ ಠಾಣೆ ಒಳಗೆ ಕರೆದುಕೊಂಡು ಹೋಗಿದ್ದಾರೆ. ಹಾಗೇ ಆತನಿಗೆ ಅವರದ್ದೇ ಭಾಷೆಯಲ್ಲಿ ಬುದ್ಧಿ ಹೇಳಿ, ರುಚಿ ತೋರಿಸಿದ್ದಾರೆ ಎನ್ನಲಾಗಿದೆ.

ದರ್ಶನ್ ಸಹವಾಸದಿಂದ ತಂದೆ ಕಳೆದುಕೊಂಡ

ಅಂದಹಾಗೆ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಎಸ್ಕೇಪ್ ಆಗಿದ್ದ, ಚಿತ್ರದುರ್ಗದ ಅನುಕುಮಾರ್​ ಅಲಿಯಾಸ್​ ಅನು ಈಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಹೀಗೆ ತನ್ನ ಮಗ ಕೊಲೆ ಆರೋಪಿಯಾಗಿ ಪೊಲೀಸರ ಬಲೆಗೆ ಬಿದ್ದ ನಂತರ, ಆರೋಪಿ ಅನುಕುಮಾರ್ ಅಲಿಯಾಸ್ ಅನು ತಂದೆ ಚಂದ್ರಣ್ಣ ಅವರಿಗೆ ಹೃದಯಾಘಾತ ಆಗಿದೆ ಎಂದು ಆರೋಪ ಮಾಡಲಾಗಿದೆ. ಹೃದಯಾಘಾತದ ಕಾರಣಕ್ಕೆ, ಇದೀಗ ಅನುಕುಮಾರ್ ಅಲಿಯಾಸ್ ಅನು ಅವರ ತಂದೆ ಚಂದ್ರಣ್ಣ ಮೃತಪಟ್ಟಿದ್ದಾರೆ. ಹೀಗಿದ್ದಾಗ ಕೊಲೆ ಆರೋಪಿಗೆ ತನ್ನ ತಂದೆಯ ಮುಖ ಕೊನೆಯ ಬಾರಿಗೆ ನೋಡುವ ಭಾಗ್ಯ ಕೂಡ ಸಿಕ್ಕಿಲ್ಲ. ದರ್ಶನ್ ಸಹವಾಸ ಮಾಡಿದ್ದಕ್ಕೆ ಅನುಕುಮಾರ್ ನರಳುವಂತಾಗಿದೆ ಎಂಬ ಆರೋಪ ಕೇಳಿಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+