Pavithra Jayaram: ಭೀಕರ ಅಪಘಾತ: ರಾಧಾ ರಮಣ ಧಾರಾವಾಹಿ ನಟಿ ಪವಿತ್ರಾ ಜಯರಾಂ ನಿಧನ
ಬೆಂಗಳೂರು, ಮೇ 11: ಕನ್ನಡ ಹಾಗೂ ತೆಲುಗಿನ ಜನಪ್ರಿಯ ಕಿರುತೆರೆ ನಟಿ ಪವಿತ್ರ ಜಯರಾಂ ಅವರು ವಿಧಿವಶರಾಗಿದ್ದಾರೆ. ಹೈದರಾಬಾದ್ ಸಮೀಪದ ಮೆಹಬೂಬ್ ನಗರದಲ್ಲಿ ನಡೆದ ಭೀಕರ ಅಪಘಾತದಲ್ಲಿ ನಟಿ ಪವಿತ್ರ ಜಯರಾಂ ಕೊನೆಯುಸಿರೆಳೆದಿದ್ದಾರೆ.
ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರಾದ ಪವಿತ್ರ ಜಯರಾಂ ಅವರು, ಕನ್ನಡದ ರೋಬೋ ಫ್ಯಾಮಿಲಿಯಲ್ಲಿ ಕಿರುತೆರೆ ಪ್ರಯಾಣ ಆರಂಭಿಸಿದ್ದರು. ಕನ್ನಡದಲ್ಲಿ ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ ಧಾರಾವಾಹಿಯಲ್ಲಿ ನಟಿಸಿ ಜನಪ್ರಿಯತೆ ಪಡೆದ ಬಳಿಕ ತೆಲುಗಿನ ಧಾರಾವಾಹಿಯತ್ತ ಮುಖ ಮಾಡಿದ್ದರು.

ತೆಲುಗಿನ ತ್ರಿನಯನಿ ಧಾರವಾಹಿಯಲ್ಲಿ ನಟಿಸುತ್ತಿದ್ದ ನಟಿ ಪವಿತ್ರ ಜಯರಾಂ, ತೆಲುಗಿನ ಇತರ ಧಾರವಾಹಿಗಳಲ್ಲಿಯೂ ನಟಿಸುತ್ತಿದ್ದರು. ಇಂದು ಹೈದರಾಬಾದ್ ಸಮೀಪದ ಮೆಹಬೂಬ್ ನಗರದಲ್ಲಿ ನಟಿ ಪವಿತ್ರ ಜಯರಾಂ ಅವರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಪವಿತ್ರಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಕಾರು ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರು ಸಂಪೂರ್ಣ ಜಖಂ ಆಗಿದೆ. ಸದ್ಯ ಪವಿತ್ರಾ ಜಯರಾಂ ಅವರ ಮೃತದೇಹವನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದ್ದು, ನಾಳೆ ಅವರ ಪಾರ್ಥಿವ ಶರೀರ ಬೆಂಗಳೂರಿಗೆ ರವಾನೆ ಮಾಡಲಾಗುತ್ತಿದೆ. ಬಳಿಕ ಮಂಡ್ಯದ ಹುಟ್ಟೂರಿಗೆ ಮೃತದೇಹ ತಲುಪಲಿದೆ ಎನ್ನುವ ಸದ್ಯದ ಮಾಹಿತಿ ಲಭ್ಯವಾಗಿದೆ.
-
ಲವ್ ಮಾಕ್ಟೇಲ್ 3 ವಿವಾದ: ನನ್ನ ಕಥೆಯ ದ್ವಿತೀಯಾರ್ಧ ನಕಲು: ಸಿನಿಮಾ ಬರಹಗಾರರೇ ಎಚ್ಚರ ಎಂದ ನಿರ್ದೇಶಕ ರಾಘವೇಂದ್ರ -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications