Breaking: ಕನ್ನಡ ಕಿರುತೆರೆ ನಟಿ ಶೋಭಿತಾ ಶಿವಣ್ಣ ನಿಧನ: ಬ್ರಹ್ಮಗಂಟು ನಟಿಗೆ ಏನಾಯ್ತು..?

ಕನ್ನಡ ಕಿರುತೆರೆಯ ಖ್ಯಾತ ನಟಿ ಶೋಭಿತಾ ಶಿವಣ್ಣ ವಿಧಿವಶರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬ್ರಹ್ಮಗಂಟು ಸೇರಿದಂತೆ ಕನ್ನಡ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದ ಶೋಭಿತಾ ಇಂದು( ಡಿಸೆಂಬರ್‌ 1) ಭಾನುವಾರ ಸಾವಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ.

ಕಿರುತೆರೆ ನಟಿ ಹೈದರಾಬಾದ್‌ನಲ್ಲಿ ಸಾವಿಗೆ ಶರಣಾಗಿದ್ದಾರೆ ಎನ್ನುವ ಮಾಹಿತಿ ಇದ್ದು, ಕರ್ನಾಟಕದಲ್ಲಿರುವ ಅವರ ಕುಟುಂಬಸ್ಥರು ಹೈದರಾಬಾದ್‌ನ ಶೋಭಿತಾ ನಿವಾಸಕ್ಕೆ ತೆರಳುತ್ತಿದ್ದಾರೆ. ಇನ್ನು ಇತರ ಭಾಷೆಯ ಧಾರಾವಾಹಿಗಳಲ್ಲಿ ನಟಿಸಿದ್ದ ಶೋಭಿತಾ ಮದುವೆಯ ನಂತರ ಹೈದರಾಬಾದ್‌ನಲ್ಲಿ ವಾಸವಾಗಿದ್ದರು.

Kannada Serial Actress Shobitha Shivanna Passed away

ಸಕಲೇಶಪುರ ಮೂಲದವರಾದ ಶೋಭಿತಾ ಶಿವಣ್ಣ ಮೊದಲಿನಿಂದಲೂ ನಟನೆಯಲ್ಲಿ ಅತೀವ ಆಸಕ್ತಿ ಹೊಂದಿದ್ದರು. ಸಿಕ್ಕ ಅವಕಾಶವನ್ನೆಲ್ಲಾ ಬಳಸಿಕೊಂಡ ಅವರು ಕಿರುತೆರೆ ಹಾಗೂ ಹಿರಿತೆರೆಯಲ್ಲೂ ಮಿಂಚಿದ್ದಾರೆ. ಕನ್ನಡದ ಬ್ರಹ್ಮಗಂಟು ನಿನ್ನಿಂದಲೇ ಧಾರಾವಾಹಿಯಲ್ಲಿ ನಟಿಸಿರುವ ಇವರು ಇತರ ಭಾಷೆಯ ಧಾರಾವಾಹಿಗಳಲ್ಲಿಯೂ ನಟಿಸಿದ್ದರು.

ಇನ್ನು ಕನ್ನಡ ಚಿತ್ರರಂಗಕ್ಕೂ ಕಾಲಿಟ್ಟಿದ್ದ ಶೋಭಿತಾ ಶಿವಣ್ಣ ವಂದನಾ, ಅಟೆಂಪ್ಟ್‌ ಟು ಮರ್ಡರ್‌ ಹಾಗೂ ಜಾಕ್‌ಪಾಟ್ ಸಿನಿಮಾಗಳಲ್ಲಿ ನಟಿಸಿದ್ದರು. ಮಾತ್ರವಲ್ಲದೇ ಲಕ್ಷ್ಮೀ ಬಾರಮ್ಮ ಧಾರಾವಾಹಿ ಖ್ಯಾತಿಯ ನಟ ಚಂದು ಗೌಡ ಜೊತೆ ಶತಭಿಷೆ ಚಿತ್ರದಲ್ಲೂ ನಟಿಸಿದ್ದರು.

Kannada Serial Actress Shobitha Shivanna Passed away

ಕಳೆದ ವರ್ಷ ಅಂದರೆ 2023ರ ಮೇ 22ರಂದುದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ನಟಿ ಶೋಭಿತಾ ಶಿವಣ್ಣ, ಮದುವೆ ಬಳಿಕ ಪತಿಯ ಜೊತೆ ಹೈದರಾಬಾದ್‌ನಲ್ಲಿ ವಾಸವಾಗಿದ್ದರು ಎನ್ನುವ ಮಾಹಿತಿ ಇದೆ. ಇಂದು ಏಕಾಏಕಿ ಅವರ ಸಾವಿನ ಸುದ್ದಿ ಹೊರಬಿದ್ದಿದ್ದು, ಕುಟುಂಬಸ್ಥರು ಹಾಗೂ ಸ್ನೇಹಿತರು ಆಘಾತಕ್ಕೊಳಗಾಗಿದ್ದಾರೆ.

ಸದ್ಯ ಸಕಲೇಶಪುರದಲ್ಲಿರುವ ಶೋಭಿತಾ ಶಿವಣ್ಣ ಕುಟುಂಬಸ್ಥರು ಹೈದರಾಬಾದ್‌ಗೆ ಹೊರಟಿದ್ದಾರೆ. ನಟಿ ಶೋಭಿತಾ ಶಿವಣ್ಣ ಸಾವಿಗೆ ನಿಖರವಾದ ಕಾರಣ ಈವರೆಗೂ ತಿಳಿದು ಬಂದಿಲ್ಲ. ಶೋಭಿತಾ ಶಿವಣ್ಣ ನಿಧನದ ಸುದ್ದಿಯಿಂದ ಅಭಿಮಾನಿಗಳು ಶಾಕ್‌ ಆಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+