Kantara Chapter 1: ಕಾಂತಾರ ಅಕ್ಷರಶಃ ಇದೊಂದು ಸಿನಿಮಾಟಿಕ್ ಮಾಸ್ಟರ್‌ಪೀಸ್: ಸುಮಲತಾ
Kantara Chapter 1: ಸ್ಯಾಂಡಲ್‌ವುಡ್ ನಟಿ ಹಾಗೂ ಮಾಜಿ ಸಂಸದೆ ಸುಮಲತಾ ಅಂಬರೀಷ್ ಅವರು ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಾಪ್ಟರ್-1 ಸಿನಿಮಾ ವೀಕ್ಷಿಸಿದ್ದಾರೆ. ಕನ್ನಡ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಕ್ಷರಶಃ ಇದೊಂದು ಸಿನಿಮಾಟಿಕ್ ಮಾಸ್ಟರ್‌ಪೀಸ್. ಕಾಂತಾರ-1 ಕನ್ನಡ ಮಾತ್ರವಲ್ಲ, ಇಡೀ ಭಾರತೀಯ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲನ್ನು ಸೃಷ್ಟಿಸಿದೆ. ಕಲೆಯ ಬಗ್ಗೆ ನಿಮಗಿರುವ ಉತ್ಸಾಹ ಮತ್ತು ಶ್ರದ್ಧೆ ಯುವ ಕಲಾವಿದರು ಹಾಗೂ ಚಿತ್ರರಂಗಕ್ಕೆ ಸ್ಫೂರ್ತಿಯಾಗಿದೆ ಎಂದು ಕೊಂಡಾಡಿದ್ದಾರೆ.
ಆತ್ಮೀಯ ರಿಷಬ್ ಅವರೇ, ಕಾಂತಾರ-1 ನೋಡಿದೆ. ಕಾಂತಾರದ ಅದ್ಭುತ ಯಶಸ್ಸಿಗೆ ಅಭಿನಂದನೆಗಳು. ನಿಮ್ಮ ನಿರ್ದೇಶನ ಹಾಗೂ ಪ್ರತಿಯೊಬ್ಬ ಕಲಾವಿದರು ಪಾತ್ರಕ್ಕೆ ಜೀವ ತುಂಬಿದ ಪರಿ ನನ್ನನ್ನು ಮೂಕವಿಸ್ಮಿತಗೊಳಿಸಿದೆ. ಈ ದೃಶ್ಯ ವೈಭವವನ್ನು ತೆರೆಯ ಮುಂದೆ ತರಲು ಹಾಕಿದ ಪರಿಶ್ರಮ ಹಾಗೂ ಕರ್ನಾಟಕದ ಜಾನಪದ, ಸಂಸ್ಕೃತಿ ಮತ್ತು ಸಂಪ್ರದಾಯಗಳ ಸೌಂದರ್ಯವನ್ನು ಪ್ರದರ್ಶಿಸಲು ನಿಮ್ಮ ಶ್ರಮವನ್ನು ಅತ್ಯಂತ ಗೌರವ ಹಾಗೂ ಹೆಮ್ಮೆಯಿಂದ ಶ್ಲಾಘಿಸುತ್ತೇನೆ ಎಂದಿದ್ದಾರೆ.

ಇಡೀ ಕಾಂತಾರ ತಂಡವು ತಮ್ಮ ಅತ್ಯುತ್ತಮ ಕೆಲಸಕ್ಕಾಗಿ ಪ್ರಶಂಸೆಗೆ ಅರ್ಹವಾಗಿದೆ. ಕನ್ನಡ ಚಿತ್ರರಂಗದ ಪಯಣಕ್ಕೆ ಹೊಸ ಆಯಾಮವನ್ನು ಹಾಕಿಕೊಟ್ಟಿರುವ ಈ ದಂತಕಥೆ ಕನ್ನಡ ಚಿತ್ರರಂಗದ ಇತಿಹಾಸ ಪುಟದಲ್ಲಿ ವಿಶೇಷ ಸ್ಥಾನ ಪಡೆಯಲಿದೆ. ನಮ್ಮ ಚಿತ್ರರಂಗಕ್ಕೆ ವಿಶ್ವದಾದ್ಯಂತ ಗೌರವ ಮತ್ತು ಕೀರ್ತಿಯನ್ನು ತಂದಿರುವ ನಿಮ್ಮ ಮುಂದಿನ ಎಲ್ಲ ಯೋಜನೆಗಳು ಇನ್ನಷ್ಟು ಯಶಸ್ಸನ್ನು ತಂದುಕೊಡಲಿ ಎಂದು ಶುಭ ಹಾರೈಸುವೆ ಎಂದು ಸುಮಲತಾ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಕೆಬಿಸಿ ಕಾರ್ಯಕ್ರಮದಲ್ಲಿ ರಿಷಬ್
ಕಾಂತಾರ ಚಾಪ್ಟರ್-1 ಸಿನಿಮಾ ಸಕ್ಸಸ್ ಬೆನ್ನಲ್ಲೇ ನಟ ರಿಷಬ್ ಶೆಟ್ಟಿ ಮುಂಬರುವ ಕೌನ್ ಬನೇಗಾ ಕರೋಡ್ ಪತಿ (ಕೆಬಿಸಿ) 17ರ ಸಂಚಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಿರೂಪಕ ಅಮಿತಾಬ್ ಬಚ್ಚನ್ ಅವರಿಗೆ ಹುಟ್ಟುಹಬ್ಬದ ಉಡುಗೊರೆಯನ್ನು ನೀಡಿ ಗೌರವಿಸಲಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ, ಹೊಂಬಾಳೆ ಫಿಲ್ಮ್ಸ್ ರಿಷಬ್ ಶೆಟ್ಟಿ ಮತ್ತು ಅಮಿತಾಬ್ ಬಚ್ಚನ್ ಅವರ ಪೋಸ್ಟ್ ಅನ್ನು ಹಂಚಿಕೊಂಡಿದೆ. ಕೆಬಿಸಿ ಸೆಟ್‌ನಲ್ಲಿ ಅಮಿತಾಬ್ ಬಚ್ಚನ್ ಜೊತೆ ರಿಷಬ್ ಶೆಟ್ಟಿ ಇರುವ ಫೋಟೋ ಹಂಚಿಕೊಂಡಿದೆ. ಇದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಕೌನ್ ಬನೇಗಾ ಕರೋಡ್‌ಪತಿಯ ಮುಂಬರುವ ಸಂಚಿಕೆಯ ಬಗ್ಗೆ ನಾವು ರೋಮಾಂಚನಗೊಂಡಿದ್ದೇವೆ. ನಿಮ್ಮೊಂದಿಗೆ ಸೇರಲು ತುಂಬಾ ಸಂತೋಷವಾಯಿತು ಸರ್ ಎಂದು ಹೊಂಬಾಳೆ ಫಿಲ್ಮ್ಸ್ ಪೋಸ್ಟ್‌ನಲ್ಲಿ ತಿಳಿಸಿದೆ. ಈ ಕಾರ್ಯಕ್ರಮದ ಮುಂಬರುವ ಸಂಚಿಕೆಯೊಂದರಲ್ಲಿ ಅಮಿತಾಬ್ ಬಚ್ಚನ್ ಎದುರು ರಿಷಬ್ ಶೆಟ್ಟಿ ವಿಶೇಷ ಅತಿಥಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎಂಬುದು ದೃಢಪಟ್ಟಿದೆ.












Click it and Unblock the Notifications