Actor Santhosh Death: ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ
ಸ್ಯಾಂಡಲ್‌ವುಡ್‌ನ ಯುವ ನಟನ ಸಂತೋಷ್ ಬಾಲರಾಜ್ (34) ನಿಧನ ಹೊಂದಿದ್ದಾರೆ. 'ಕರಿಯ 2', 'ಗಣಪ' ಸೇರಿದಂತೆ ಇನ್ನೂ ಹಲವು ಸಿನಿಮಾಗಳಲ್ಲಿ ನಟಿಸಿದ್ದ ಯುವ ನಟ ಸಂತೋಷ್ ಬಾಲರಾಜ್ ನಿಧನ ಹೊಂದಿದ್ದಾರೆ. ಸಂತೋಷ್ ಬಾಲರಾಜ್ ಅವರು ಕಳೆದ ಕೆಲ ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಕೆಲ ದಿನಗಳ ಹಿಂದಷ್ಟೆ ಬನಶಂಕರಿಯ ಸಾಗರ್ ಅಪೋಲೊ ಆಸ್ಪತ್ರೆಗೆ ಅವರು ಚಿಕಿತ್ಸೆಗಾಗಿ ದಾಖಲಾಗಿದ್ದರು. ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದ ಕಾರಣ, ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಇಂದು ಚಿಕಿತ್ಸೆಗೆ ಸ್ಪಂದಿಸದೆ ಸಂತೋಷ್ ಬಾಲರಾಜ್ ನಿಧನ ಹೊಂದಿದ್ದಾರೆ
ಸ್ಯಾಂಡಲ್‌ವುಡ್‌ನ ಯುವ ನಟನ ಸಂತೋಷ್ ಬಾಲರಾಜ್ ಅವರು ಇಂದು ಬೆಳಗ್ಗೆ 9.30ರ ಸುಮಾರಿಗೆ ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹಿರಿಯ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ಸಂತೋಷ್ ಬಾಲರಾಜ್ ಕಳೆದ ತಿಂಗಳು ಜಾಂಡೀಸ್‌ನಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಮತ್ತೆ ಸಂತೋಷ್ ಅವರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿ, ತೀವ್ರ ನಿಗಾ ಘಟಕದಲ್ಲಿದ್ದರು.

ಕರಿಯಾ-2, ಕೆಂಪ, ಗಣಪ, ಬರ್ಕ್ಲಿ ಹಾಗೂ ಸತ್ಯ ಸಿನಿಮಾಗಳಲ್ಲಿ ಸಂತೋಷ್ ಬಾಲರಾಜ್ ನಾಯಕನಾಗಿ ನಟಿಸಿದ್ದರು. ಯುವ ನಟ ಸಂತೋಷ್ ಬಾಲರಾಜ್ ಅವರಿಗೆ 34 ವರ್ಷ ವಯಸ್ಸಾಗಿದ್ದು, ಇನ್ನೂ ಮದುವೆಯಾಗಿರಲಿಲ್ಲ. ಸಂತೋಷ್ ಅವರು ತಮ್ಮ ತಾಯಿಯ ಜೊತೆ ಇದ್ದಾರೆ. ಜಾಂಡೀಸ್ ಮೈಗೆಲ್ಲ ಹರಡಿರುವ ಕಾರಣ ಅವರ ಸ್ಥಿತಿ ಚಿಂತಾಜನಕವಾಗಿತ್ತು. ಸಂತೋಷ್ ಅವರ ತಂದೆ ಅನೇಕಲ್ ಬಾಲರಾಜ್ ಅವರು ನಟ ದರ್ಶನ್ ಅವರ ಹಿಟ್ ಸಿನಿಮಾ "ಕರಿಯ" ಸಿನಿಮಾ ನಿರ್ಮಾಣ ಮಾಡಿದ್ದರು. ಬಳಿಕ ಸಂತೋಷ್ ಕೂಡ ಚಿತ್ರರಂಗಕ್ಕೆ ನಟನಾಗಿ ಎಂಟ್ರಿ ಕೊಟ್ಟಿದ್ದರು. ಜಾಂಡೀಸ್ ಮೈಗೆಲ್ಲ ಹರಡಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂತೋಷ್ ಅವರು ಆ. 5ರಂದು (ಇಂದು) ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.
ಸಂತೋಷ್ ಬಾಲರಾಜ್ ಅವರಿಗೆ ಜಾಂಡೀಸ್ ಖಾಯಿಲೆ ಅವರ ದೇಹವನ್ನೆಲ್ಲ ಆವರಿಸಿತ್ತು. ಕಳೆದ ಎರಡು ದಿನದಿಂದಲೂ ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿತ್ತು. ಯಕೃತ್ತು ಮತ್ತು ಕಿಡ್ನಿಯ ಸಮಸ್ಯೆಯಿಂದಾಗಿ ಅವರಿಗೆ ಜಾಂಡೀಸ್ ತಗುಲಿತ್ತು. ಈ ಮೊದಲೂ ಸಹ ಸಂತೋಷ್ ಬಾಲರಾಜ್ ಅವರು ಜಾಂಡೀಸ್ನಿಂದ ಬಳಲಿದ್ದರು. ಈ ಹಿಂದೆ ಚಿಕಿತ್ಸೆ ಪಡೆದುಕೊಂಡಿದ್ದರು. ಆದರೆ ಈ ಬಾರಿ ಪರಿಸ್ಥಿತಿ ಕೈ ಮೀರಿ ಹೋಗಿತ್ತು. ಕೋಮಾದಲ್ಲೇ ಇದ್ದು, ನಟ ಬೇಗ ಚೇತರಿಸಿಕೊಳ್ಳಲಿ ಎಂದು ಅವರ ಕುಟುಂಬಸ್ಥರು, ಆಪ್ತರು, ಸಿನಿಮಾರಂಗದವರು, ಅಭಿಮಾನಿಗಳು ಪ್ರಾರ್ಥಿಸುತ್ತಿದ್ದರು, ಆದರೆ, ವಿಧಿಯಾಟವೇ ಬೇರೆಯಾಗಿದ್ದು, ಇಂದು ಸಂತೋಷ್ ಅವರು ಇಹಲೋಕ ತ್ಯಜಿಸಿದ್ದಾರೆ.
ಅಂತ್ಯ ಕ್ರಿಯೆ ಎಲ್ಲಿ ಯಾವಾಗ..?
ಸಂತೋಷ್ ಬಾಲರಾಜ್ ನಿಧನರಾದ ಸುದ್ದಿ ಈಗಷ್ಟೆ ಹೊರ ಬಂದಿದೆ. ನಟಸಂತೋಷ್ ಬಾಲರಾಜ್ ಮ್ಯಾನೇಜರ್ ರಂಗಸ್ವಾಮಿ ಈ ಒಂದು ವಿಷಯವನ್ನ ಖಚಿತಪಡಿಸಿದ್ದಾರೆ. ಸಂತೋಷ್ ಅವರ ಅಂತ್ಯಕ್ರಿಯೆ ಎಲ್ಲಿ, ಯಾವ ಹೊತ್ತಿಗೆ ಅನ್ನೋದು ಇನ್ನಷ್ಟೆ ಗೊತ್ತಾಗಬೇಕಿದೆ.












Click it and Unblock the Notifications