Hamare Baarah: ಮುಸ್ಲಿಮರ ಅವಹೇಳನ ಆರೋಪ; ಎರಡು ವಾರ ಈ ಸಿನಿಮಾ ಬಿಡುಗಡೆ ನಿಷೇಧಿಸಿದ ಕರ್ನಾಟಕ ಸರ್ಕಾರ
ಜೂನ್ 7ರಂದು ಬಿಡುಗಡೆಯಾಗಲು ಸಜ್ಜಾಗಿರುವ ಹಿಂದಿ ಸಿನಿಮಾ "ಹಮಾರೆ ಬಾರಾ" ಎರಡು ವಾರಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಕರ್ನಾಟಕದಲ್ಲಿ ಚಿತ್ರದ ಬಿಡುಗಡೆಗೆ ಸರ್ಕಾರ ನಿಷೇಧ ಹೇರಿದೆ.
ರಾಜ್ಯ ಸರ್ಕಾರವು ಕರ್ನಾಟಕದ ವಿವಿಧ ಜಿಲ್ಲೆಗಳು ಮತ್ತು ತಾಲ್ಲೂಕುಗಳ ಮುಸ್ಲಿಂ ಸಂಘಗಳಿಂದ ಚಿತ್ರ ಬಿಡುಗಡೆ ಮಾಡದಂತೆ ಮನವಿಗಳನ್ನು ಸ್ವೀಕರಿಸಿದ ಬಳಿಕ ಈ ಆದೇಶ ಹೊರಡಿಸಿದೆ.

ರಾಜ್ಯದ ವಿವಿಧ ಜಿಲ್ಲೆ/ತಾಲ್ಲೂಕುಗಳ ಮುಸ್ಲಿಂ ಸಂಘಗಳಿಂದ ಬಂದಿರುವ ಅರ್ಜಿಗಳು ಚಿತ್ರದ ಟ್ರೈಲರ್ ಮುಸ್ಲಿಂ ಧರ್ಮವನ್ನು ಪ್ರಚೋದನಕಾರಿ ಮತ್ತು ಅವಹೇಳನಕಾರಿಯಾಗಿ ಚಿತ್ರಿಸುತ್ತದೆ ಎಂದು ಆರೋಪಿಸಿದೆ.
"ಇಂತಹ ಚಿತ್ರಗಳಿಗೆ ಅವಕಾಶ ನೀಡಿದರೆ ಧರ್ಮ, ಜಾತಿಗಳ ನಡುವೆ ದ್ವೇಷ ಸೃಷ್ಟಿಯಾಗುತ್ತದೆ. ದೇಶದಲ್ಲಿ ಉದ್ದೇಶಪೂರ್ವಕವಾಗಿ ಒಂದು ಧರ್ಮವನ್ನು ಗುರಿಯಾಗಿಸಿ, ಕೋಮು ಸೌಹಾರ್ದತೆಗೆ ಧಕ್ಕೆ ತರುವ, ದೇಶದಲ್ಲಿ ಅಶಾಂತಿ ಉಂಟುಮಾಡುವ, ಮುಸ್ಲಿಂ ಧರ್ಮದ ಭಾವನೆಗಳಿಗೆ ಧಕ್ಕೆ ತರುವ ಷಡ್ಯಂತ್ರ ಇದಾಗಿದೆ. ಜೂನ್ 07, 2024 ರಂದು ದೇಶಾದ್ಯಂತ ಬಿಡುಗಡೆಯಾಗಲಿರುವ ವಿವಾದಾತ್ಮಕ ಚಲನಚಿತ್ರ "ಹಮಾರೆ ಬಾರಾ" ಸಿನಿಮಾವನ್ನು ಬಿಡುಗಡೆ ಮಾಡದಂತೆ ಮನವಿ ಮಾಡಲಾಗಿದೆ.
ಸಿನಿಮಾ ಬಿಡುಗಡೆಗೆ ಎರಡು ದಿನ ಮೊದಲು ಬಾಂಬೆ ಹೈಕೋರ್ಟ್ ಈ ಚಿತ್ರವನ್ನು ವಿಶ್ವದಾದ್ಯಂತ ಬಿಡುಗಡೆ ಮಾಡದಂತೆ ತಡೆಯಾಜ್ಞೆ ತಂದಿದೆ ನೀಡಿದೆ. ಚಿತ್ರದ ಬಿಡುಗಡೆಯ ವಿರುದ್ಧ ಮುಸ್ಲಿಂ ಧಾರ್ಮಿಕ ಸಮುದಾಯದ ಕಾರ್ಯಕರ್ತರು ಮುಂಬೈ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಸೆನ್ಸಾರ್ ಪ್ರಮಾಣ ಪತ್ರ ಪಡೆದಿದ್ದರೂ ತಮ್ಮ ಚಿತ್ರಕ್ಕೆ ತಡೆ ಹೇರುವ ಇತ್ತೀಚಿನ ಬೆಳವಣಿಗೆಯ ಬಗ್ಗೆ ನಿರ್ಮಾಪಕ ಬಿರೇಂದರ್ ಭಗತ್ ಮತ್ತು ರವಿ ಎಸ್ ಗುಪ್ತಾ ಕಳವಳ ವ್ಯಕ್ತಪಡಿಸಿದ್ದಾರೆ.
"ನಮ್ಮ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಪ್ರಮಾಣಪತ್ರ ಸಿಕ್ಕಿದೆ. ಈ ಶುಕ್ರವಾರ ನಿಗದಿತ ದಿನಾಂಕದಂದು ಬಿಡುಗಡೆಯಾಗಲಿದೆ. ನಾವು ಕಷ್ಟಪಟ್ಟು ದುಡಿದ ಕೋಟಿಗಟ್ಟಲೆ ಹಣವನ್ನು ಚಿತ್ರ ನಿರ್ಮಾಣಕ್ಕೆ ತೊಡಗಿಸಿ, ಇಡೀ ಜೀವಮಾನದ ಉಳಿತಾಯವನ್ನೇ ಪಣಕ್ಕಿಟ್ಟು, ಕಷ್ಟಪಟ್ಟು ಈ ಸಿನಿಮಾ ಮಾಡಿದ್ದೇವೆ. ನಮ್ಮ ಸಿನಿಮಾವನ್ನು ನೋಡದೆ ತಡೆಯಾಜ್ಞೆ ತಂದಿರುವುದರಿಂದ ನಮಗೆ ಆಘಾತ ಮತ್ತು ನಿರಾಶೆಯಾಗಿದೆ" ಎಂದು ಭಗತ್ ಹೇಳಿದ್ದಾರೆ.












Click it and Unblock the Notifications