Karnataka Budget 2025: ಮಲ್ಟಿಪ್ಲೆಕ್ಸ್‌ಗಳ ನಟ್ಟು-ಬೋಲ್ಟು ಟೈಟ್: ರಾಜ್ಯದಲ್ಲಿ ಏಕರೂಪದ ಟಿಕೆಟ್ ದರ ಘೋಷಣೆ
ಬೆಂಗಳೂರು, ಮಾರ್ಚ್ 07: ಮುಖ್ಯಮಂತ್ರಿ ಸಿದ್ದರಾಮಯ್ಯ 2025-26ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸಿದ್ದಾರೆ. ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಸಿನಿ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಸಿನಿಮಾ ಪ್ರೇಕ್ಷಕರ ಬಹು ವರ್ಷದ ಬೇಡಿಕೆಗೆ ಕೊನೆಗೂ ರಾಜ್ಯ ಸರ್ಕಾರ ಅಸ್ತು ಎಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ 2025-26ನೇ ಸಾಲಿನ ಬಜೆಟ್‌ನಲ್ಲಿ ಮಲ್ಟಿಪ್ಲೆಕ್ಸ್‌ನಲ್ಲಿ ಏಕರೂಪದ ಟಿಕೆಟ್ ದರ ಘೋಷಣೆ ಮಾಡಿದ್ದಾರೆ. ಇನ್ನು ಮುಂದೆ ಕರ್ನಾಟಕದ ಯಾವುದೇ ಮಲ್ಟಿಪ್ಲೆಕ್ಸ್‌ನಲ್ಲಿ ಸಿನಿಮಾ ಟಿಕೆಟ್ ದರ 200 ರೂಪಾಯಿ ಆಗಿರಲಿದೆ.
ಕರ್ನಾಟಕದಲ್ಲಿ ಮೊದಲಿನಿಂದಲೂ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಿಗೂ ಮಲ್ಟಿಪ್ಲೆಕ್ಸ್ ಟಿಕೆಟ್ ದರಕ್ಕೂ ಅಜಗಜಾಂತರ ವ್ಯತ್ಯಾಸವಿತ್ತು. ಕನ್ನಡದ ಕೆಲವು ಟಾಪ್ ಸಿನಿಮಾಗಳಿಗೆ ಏಕಾಏಕಿ ಟಿಕೆಟ್ ದರ ಹೆಚ್ಚಿಸಲಾಗುತ್ತಿತ್ತು. ಅದರಲ್ಲೂ ಪರಭಾಷೆಯ ಸಿನಿಮಾಗಳು ಬಂದರೆ ಮಲ್ಟಿಪ್ಲೆಕ್ಸ್ಗಳು ಟಿಕೆಟ್ ದರವನ್ನು 500 ರೂಪಾಯಿಯಿಂದ 1,000 ರೂಪಾಯಿವರೆಗೆ ಹೆಚ್ಚುಸುತ್ತಿದ್ದವು. ಇದರಿಂದ ಸಿನಿ ಪ್ರಿಯರಿಗೆ ಬಹಳ ನಿರಾಸೆಯಾಗುತ್ತಿತ್ತು. ಪ್ರತಿ ಬಾರಿಯೂ ರಾಜ್ಯ ಸರ್ಕಾರಕ್ಕೂ ಏಕರೂಪ ಟಿಕೆಟ್ ದರ ಜಾರಿಗೆ ತರುವಂತೆ ಒತ್ತಾಯಿಸುತ್ತಿದ್ದರು.

ಇನ್ನು 2017ರ ಬಜೆಟ್‌ನಲ್ಲಿ ಸಿದ್ದರಾಮಯ್ಯ ಮಲ್ಟಿಪ್ಲೆಕ್ಸ್ ಟಿಕೆಟ್ ದರ 200 ರೂಪಾಯಿ ದರ ನಿಗದಿ ಮಾಡುತ್ತೇವೆ ಎಂದಿದ್ದರು. ಆದರೆ ಥಿಯೇಟರ್ ಮಾಲೀಕರು ಸ್ಟೇ ತಂದ ಬಳಿಕ ಸರ್ಕಾರ ಆ ಆದೇಶವನ್ನು ವಾಪಸ್ ಪಡೆದಿತ್ತು. ಆದರೆ ಈಗ ಮಲ್ಟಿಪ್ಲೆಕ್ಸ್ ಟಿಕೆಟ್ ದರ ಹೆಚ್ಚಳದ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈಗ ಮತ್ತೆ ಏಕರೂಪದ ಟಿಕೆಟ್ ದರ ಘೋಷಣೆ ಮಾಡಿದೆ. 2017ರಂತೆ ಈ ಬಾರಿಯೂ ಇದು ಘೋಷಣೆಗೆ ಮಾತ್ರ ಸೀಮಿತವಾಗಿರದೇ ಶೀಘ್ರದಲ್ಲೇ ಜಾರಿಗೆ ಬರಲಿ ಎನ್ನುವುದು ಕನ್ನಡ ಸಿನಿಮಾ ಪ್ರೇಕ್ಷಕರ ಒತ್ತಾಯವಾಗಿದೆ.
ಇನ್ನು ಈ ಬಾರಿಯ ಬಜೆಟ್‌ನಲ್ಲಿ ಸಿನಿಮಾ ಕ್ಷೇತ್ರವನ್ನು ಸಿನಿಮಾ ಉದ್ಯಮ ಎಂದು ಪರಿಗಣಿಸಿ ಕೈಗಾರಿಕಾ ನೀತಿಯಡಿ ತರಲು ನಿರ್ಧಾರ ಮಾಡಲಾಗಿದೆ. ಕನ್ನಡ ಸಿನಿಮಾಗಳಿಗೆ ಓಟಿಟಿ ವೇದಿಕೆ ಸೃಷ್ಟಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.












Click it and Unblock the Notifications