CCL 2025: ರಾಜೀವ್ ಅರ್ಧಶತಕ; ಚೆನ್ನೈ ರ್‍ಹಿನೋಸ್ ವಿರುದ್ಧ ಕರ್ನಾಟಕ ಬುಲ್ಡೋಜರ್ಸ್ ಸವಾಲಿನ ಮೊತ್ತ

ಮೈಸೂರಿನ ಕೆಎಸ್‌ಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL) 2025ರ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ಚೆನ್ನೈ ರ್‍ಹಿನೋಸ್ ವಿರುದ್ಧ ಸವಾಲಿನ ಮೊತ್ತ ಕಲೆಹಾಕಿದೆ. ಸಿಸಿಎಲ್ ಪಂದ್ಯಗಳನ್ನು 10-10 ಓವರ್ ಮಾದರಿಯಲ್ಲಿ ಎರಡು ಇನ್ನಿಂಗ್ಸ್‌ನಲ್ಲಿ ಆಡಲಿದ್ದು, ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ ಬುಲ್ಡೋಜರ್ಸ್ 10 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 111 ರನ್ ಕಲೆಹಾಕಿದೆ.

ಟಾಸ್ ಗೆದ್ದ ಚೆನ್ನೈ ರ್‍ಹಿನೋಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ ಬುಲ್ಡೋಜರ್ಸ್‌ ಸ್ಫೋಟಕ ಆರಂಭ ಪಡೆಯಿತು. ಡಾರ್ಲಿಂಗ್ ಕೃಷ್ಣ ಮತ್ತು ರಾಜೀವ್ ಹನು ಮೊದಲ ವಿಕೆಟ್‌ಗೆ 60 ರನ್ ಕಲೆಹಾಕಿದರು. ಡಾರ್ಲಿಂಗ್ ಕೃಷ್ಣ 18 ಎಸೆತಗಳಲ್ಲಿ 3 ಬೌಂಡರಿ 1 ಸಿಕ್ಸರ್ ಸಹಿತ 25 ರನ್ ಗಳಿಸಿ ಔಟಾದರೆ, ರಾಜೀವ್ ಹನು 28 ಎಸೆತಗಳಲ್ಲಿ 5 ಬೌಂಡರಿ 2 ಸಿಕ್ಸರ್ ಸಹಿತ 53 ರನ್ ಗಳಿಸಿ ತಂಡಕ್ಕೆ ನೆರವಾದರು. ಕಾರ್ತಿಕ್ ಜಯರಾಮ್ 7 ಎಸೆತಗಳಲ್ಲಿ 15 ರನ್ ಗಳಿಸಿದರು.

karnataka bulldozers post big total against chennai rhinos ccl 2025 semifinal

ಇದಕ್ಕೂ ಮುನ್ನ ನಡೆದ ಮತ್ತೊಂದು ಸೆಮಿಫೈನಲ್‌ನಲ್ಲಿ ಬೆಂಗಾಲ್ ಟೈಗರ್ಸ್ ವಿರುದ್ಧ ಗೆಲುವು ಸಾಧಿಸಿದ ಪಂಜಾಬ್ ದಿ ಶೇರ್ ಫೈನಲ್‌ ಪ್ರವೇಶಿಸಿದ್ದು, ಈ ಪಂದ್ಯದಲ್ಲಿ ಗೆಲ್ಲುವ ತಂಡದ ಜೊತೆ ಭಾನುವಾರ ಫೈನಲ್‌ನಲ್ಲಿ ಸೆಣೆಸಲಿದೆ.

6 ರನ್‌ಗಳ ಮುನ್ನಡೆ ಪಡೆದ ಕರ್ನಾಟಕ

ಬಳಿಕ ಮೊದಲ ಇನ್ನಿಂಗ್ಸ್ ಬ್ಯಾಟಿಂಗ್ ಮಾಡಿದ ಚೆನ್ನೈ ರ್‍ಹಿನೋಸ್ ಉತ್ತಮ ಹೋರಾಟ ನೀಡಿತು. ನಾಯಕ ವಿಕ್ರಾಂತ್ 34 ಎಸೆತಗಳಲ್ಲಿ 8 ಬೌಂಡರಿ 2 ಭರ್ಜರಿ ಸಿಕ್ಸರ್ ಸಹಿತ ಅಜೇಯ 63 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ಪೃಥ್ವಿ 17 ರನ್ ಗಳಿಸಿದರೆ, ದಶರಥಿ 6 ಎಸೆತಗಳಲ್ಲಿ ಅಜೇಯ 15 ರನ್ ಗಳಿಸಿ ಮಿಂಚಿದರು. ಚೆನ್ನೈ 10 ಓವರ್ ಗಳಲ್ಲಿ 105 ರನ್ ಗಳಿಸಿತು. ಈ ಮೂಲಕ ಕರ್ನಾಟಕ ಬುಲ್ಡೋಜರ್ಸ್ 6 ರನ್‌ಗಳ ಮುನ್ನಡೆ ಪಡೆದುಕೊಂಡಿತು.

ಎರಡನೇ ಇನ್ನಿಂಗ್ಸ್ ಆರಂಭಿಸಿದ ಕರ್ನಾಟಕ ಬುಲ್ಡೋಜರ್ಸ್ 10 ಓವರ್ ಗಳಲ್ಲಿ 123 ರನ್ ಕಲೆಹಾಕುವ ಮೂಲಕ ಒಟ್ಟಾರೆ 129 ರನ್‌ ಮುನ್ನಡೆ ಪಡೆದುಕೊಂಡಿದೆ. ಕಿಚ್ಚ ಸುದೀಪ್ 14 ಎಸೆತಗಳಲ್ಲಿ 2 ಸಿಕ್ಸರ್ ಸಹಿತ 23 ರನ್ ಗಳಿಸಿದರು. ಮಂಜುನಾಥ್ ಗೌಡ 11 ಎಸೆತಗಳಲ್ಲಿ 4 ಬೌಂಡರಿ 2 ಭರ್ಜರಿ ಸಿಕ್ಸರ್ ಸಹಿತ ಅಜೇಯ 35 ರನ್ ಗಳಿಸುವ ಮೂಲಕ ಮಿಂಚಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+